Gold Price Today: ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ- ತುಸು ಇಳಿಕೆಯಾಯ್ತು ಹಳದಿ ಲೋಹದ ದರ

Gold And Silver Price Today: ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ ಅತಿ ಕೊಂಚ ಇಳಿಕೆಯಾಗಿದೆ. ನಿನ್ನೆಗೆ ಒಂದು ಗ್ರಾಂ 22 ಕ್ಯಾರಟ್ ನ ಬಂಗಾರದ ಬೆಲೆ ರೂ. 4,625 ಆಗಿದ್ದರೆ ಇಂದಿನ ದರ ರೂ. 4,600  ಆಗಿದೆ. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಹಣದುಬ್ಬರವನ್ನು ಸಮರ್ಥವಾಗಿ ಎದುರಿಸಲು ಇರುವ ಒಂದು ಉತ್ತಮ ವಿಕಲ್ಪವೆಂದರೆ ಚಿನ್ನದ ಮೇಲೆ ಹೂಡಿಕೆ. ಅಷ್ಟೆ ಅಲ್ಲ, ಇಂದು ಚಿನ್ನದ (Gold)  ಹೂಡಿಕೆಯನ್ನು ಬಹು ಸುರಕ್ಷಿತ ಹೂಡಿಕೆ ಎಂದು ಸಹ ಕರೆಯಲಾಗುತ್ತದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಸಾಕಷ್ಟಿದೆ. ಅದರಲ್ಲೂ ವಿಶೇಷವಾಗಿ ಭಾರತದಂತಹ (India)  ದೇಶದಲ್ಲಿ ಮೊದಲಿನಿಂದಲೂ ಬಂಗಾರಕ್ಕಿರುವ ವಿಶೇಷತೆಯೇ ಬೇರೆ. ಮದುವೆಯಿಂದ (wedding)  ಹಿಡಿದು ಅನೇಕ ಇತರೆ ಶುಭ ಕಾರ್ಯಗಳಲ್ಲಿ ಭಾರತೀಯರು ಬಂಗಾರವನ್ನು ಯಥೇಚ್ಚವಾಗಿ ಬಳಸುತ್ತಾರೆ. ಅದರಲ್ಲೂ ನವಜಾತ ಶಿಶು ಇರಲಿ ಅಥವಾ ಹೊಸದಾಗಿ ಮದುವೆ ಮಾಡಿಕೊಂಡ ದಂಪತಿಗಳಿರಲಿ ಅವರಲ್ಲಿ ಬಂಗಾರದ ಯಾವುದಾದರೂ ವಸ್ತು ಅಥವಾ ಸಿಂಗಾರದ ಸಾಮಾನು ಇದ್ದೇ ಇರುತ್ತದೆ.

ಇಂದು  ಹೂಡಿಕೆದಾರರು ಬಂಗಾರದ ನಿವೇಶನದ ಕುರಿತು ಹೆಚ್ಚು ಆಸಕ್ತರಾಗಿದ್ದಾರೆ. ಹಾಗಾಗಿ, ಇಂದು ಬಹು ಜನರು ಬಂಗಾರವನ್ನು ಒಂದು ಪ್ರಮುಖ ಹೂಡಿಕೆಯ ವಸ್ತು ಎಂದು ಗುರುತಿಸಿದ್ದಾರೆ. ಬಂಗಾರ ಖರೀದಿ ಎಂಬುದು ಬಹು ಸಾಮಾನ್ಯ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಬಂಗಾರ ಹೊಂದಿದೆ.

ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ ಅತಿ ಕೊಂಚ ಇಳಿಕೆಯಾಗಿದೆ. ನಿನ್ನೆಗೆ ಒಂದು ಗ್ರಾಂ 22 ಕ್ಯಾರಟ್ ನ ಬಂಗಾರದ ಬೆಲೆ ರೂ. 4,625 ಆಗಿದ್ದರೆ ಇಂದಿನ ದರ ರೂ. 4,600  ಆಗಿದೆ.

ಇದನ್ನೂ ಓದಿ: ಉಕ್ರೇನ್ ಬಿಕ್ಕಟ್ಟು, ಮತ್ತೆ ಏರಿಕೆಯಾಗಲಿದೆ ಅಡುಗೆ ತೈಲ ಬೆಲೆ!

ಮಾರುಕಟ್ಟೆಯಲ್ಲಿ ಇಂದಿನ  ಬಂಗಾರ ಹಾಗೂ ಬೆಳ್ಳಿ ದರಗಳ ಬಗ್ಗೆ ಮಾಹಿತಿ ಇಲ್ಲಿದೆ
ಒಂದು ಗ್ರಾಂ (1GM)
22 ಕ್ಯಾರಟ್ ಬಂಗಾರದ ಬೆಲೆ - ರೂ. 4,625
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,018
ಎಂಟು ಗ್ರಾಂ (8GM)
22 ಕ್ಯಾರಟ್ ಬಂಗಾರದ ಬೆಲೆ - ರೂ. 36,800
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,144
ಹತ್ತು ಗ್ರಾಂ (10GM)
22 ಕ್ಯಾರಟ್ ಬಂಗಾರದ ಬೆಲೆ - ರೂ. 46,000
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,180
ನೂರು ಗ್ರಾಂ (100GM)
22 ಕ್ಯಾರಟ್ ಬಂಗಾರದ ಬೆಲೆ - ರೂ. 4,60,000
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,01,800

ರಾಜಧಾನಿ ನಗರ ಬೆಂಗಳೂರಿನಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು 22 ಕ್ಯಾರೆಟ್ ಬಂಗಾರದ ಬೆಲೆ (ಪ್ರತಿ ಹತ್ತು ಗ್ರಾಂಗಳಿಗೆ)ರೂ. 46,000 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.47,350, ರೂ. 46,000, ರೂ. 46,000 ರಷ್ಟಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೂ. 46,260 ಆಗಿದೆ.

ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಚಿನ್ನದಷ್ಟಿಲ್ಲದಿದ್ದರೂ ಬೆಳ್ಳಿಯೂ ಸಹ ಒಂದು ಉತ್ತಮ ಹೂಡಿಕೆ ಎಂದೇ ಹೇಳಬಹುದು. ಹಾಗಾಗಿ ಬೆಳ್ಳಿ ಖರೀದಿಯಲ್ಲೂ ಇಂದು ಜನ ಆಸಕ್ತಿ ತೋರುತ್ತಿದ್ದಾರೆ. ಇದನ್ನು ಹೊರತುಪಡಿಸಿ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನ ಹೇಗಿದೆ ಎಂಬುದರ ಮೇಲೆಯೂ ಚಿನ್ನ-ಬೆಳ್ಳಿ ದರಗಳ ಬೆಲೆಗಳಲ್ಲಿ ವ್ಯತ್ಯಾಸವಾಗುತ್ತಲೇ ಇರುತ್ತದೆ.

ಇದನ್ನೂ ಓದಿ: ಯುದ್ಧದ ಭೀತಿ; ರಷ್ಯಾದ ಶ್ರೀಮಂತರು ಕಳೆದುಕೊಂಡ ಹಣ ಕೇಳಿದ್ರೆ ಶಾಕ್ ಆಗ್ತೀರಿ!

ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಬೆಂಗಳೂರಿನಲ್ಲಿ ಇಂದು ಯಾವುದೇ ಬದಲಾವಣೆಯಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10gm, 100gm, 1000gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 700, ರೂ. 7000 ಹಾಗೂ ರೂ. 70,000 ಗಳಾಗಿದೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 69,000 ಆಗಿದ್ದರೆ ದೆಹಲಿಯಲ್ಲಿ 64,300 ಮುಂಬೈನಲ್ಲಿ 64,300 ಹಾಗೂ ಕೋಲ್ಕತ್ತದಲ್ಲೂ ರೂ. 64,300 ಗಳಾಗಿದೆ.
Published by:Sandhya M
First published: