Gold Rate on Jan 18, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.. ಬೆಂಗಳೂರಿನಲ್ಲಿ (Bengaluru) ಸಹ ಇಂದು ಬಂಗಾರದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,090 ರೂ. ಇತ್ತು. ಇಂದು ಸಹ ಅದೇ ಬೆಲೆ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,090 ರೂ. ಇತ್ತು. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ಇಲ್ಲಿ ನೋಡೋಣ..
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?
ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 49,090 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,990 ರೂ. ಇದೆ. ಇನ್ನು, ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.
ಭಾರತದಲ್ಲಿ ಆಭರಣ ಪ್ರಿಯರ ಜನಸಂಖ್ಯೆ ಕಡಿಮೆ ಏನಿಲ್ಲ. ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಾಟ ಮಾಡಲು ಬೇಕಾಗುತ್ತದೆಂದು ಅದರ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.
ಇದನ್ನೂ ಓದಿ: Gold Price Today: ಮಕ್ಕಳ ಮದುವೆಗೆ ಚಿನ್ನ ಖರೀದಿಸುವ ಪ್ಲಾನ್ ಇದೆಯಾ? ಅಂಗಡಿ ತೆರೆಯುವ ಮೊದಲು ಇವತ್ತಿನ ಬೆಲೆ ತಿಳಿದುಕೊಳ್ಳಿ
ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಈ ಮಧ್ಯೆ, ದೇಶದ ಮೆಟ್ರೋ ನಗರಗಳಾದ ಚೆನ್ನೈನಲ್ಲಿ 49,440 ರೂ. ಇದ್ದರೆ, ಮುಂಬೈನಲ್ಲಿ 49,090 ರೂ., ದೆಹಲಿಯಲ್ಲಿ 51,430 ರೂ. ಹಾಗೂ ಕೋಲ್ಕತ್ತದಲ್ಲಿ 50,000 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಶಿಕ್ನಲ್ಲೂ 49 ಸಾವಿರದ ಆಸುಪಾಸಿನಲ್ಲೇ ಇದೆ.
ಬೆಳ್ಳಿ ದರ:
ಬಂಗಾರದ ಬೆಲೆ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ದರ (Silver Rate) ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 61,700 ರೂ. ಇತ್ತು. ಇಂದು 300 ರೂ. ಏರಿಕೆಯಾಗಿ 62,000 ರೂ. ಆಗಿದೆ.
ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 65,500 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೇರಳ, ಕೊಯಮತ್ತೂರು, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 65,500 ರೂ. ಆಗಿದೆ.
ಇನ್ನು, ಮೆಟ್ರೋ ನಗರಗಳಾದ ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ 62,000 ರೂ. ದರ ಇದೆ.
ಇದನ್ನೂ ಓದಿ: Petrol And Diesel Price: ನಿಮ್ಮ ನಗರಗಳಲ್ಲಿ ಇಂದಿನ ತೈಲ ದರದ ವಿವರ ನೋಡಿ
ಸೂಚನೆ: ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಇದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ