Gold Price Today: ಇಂದು ಚಿನ್ನದ ಬೆಲೆ ಎಷ್ಟಿದೆ? ಖರೀದಿಗೂ ಮುನ್ನ ತಿಳ್ಕೊಂಡ್ರೆ ಒಳ್ಳೆಯದು!

ನಿನ್ನೆ ಚಿನ್ನದ ದರ ಇಳಿದಿದ್ದರೂ, ಇಂದು ಮತ್ತೆ ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಆದರೆ, ಬೆಳ್ಳಿ ದರ ಕಡಿಮೆಯಾಗಿದೆ. ಇಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಹೆಚ್ಚಾಗಿದೆ.

ಚಿನ್ನ

ಚಿನ್ನ

  • Share this:
Gold Rate on Feb 16, 2022: ಕೇಂದ್ರ ಬಜೆಟ್‌ ಬಳಿಕ ಕೆಲ ದಿನಗಳ ಕಾಲ ಚಿನ್ನ, ಬೆಳ್ಳಿ ದರದಲ್ಲಿ ಹೆಚ್ಚೇನೂ ವ್ಯತ್ಯಾಸವಾಗಿರಲಿಲ್ಲ. ಆದರೆ, ಬಜೆಟ್‌ ಕಳೆದು ಒಂದು ವಾರದಿಂದ ಬಂಗಾರ, ಬೆಳ್ಳಿ ಬೆಲೆಯಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಚಿನ್ನ, ಬೆಳ್ಳಿ ಮೌಲ್ಯ ಗಗನಮುಖಿಯಾಗುತ್ತಿದೆ. ನಿನ್ನೆ ಚಿನ್ನದ ದರ ಇಳಿದಿದ್ದರೂ, ಇಂದು ಮತ್ತೆ ದೇಶದಲ್ಲಿ ಬಂಗಾರದ ದರ ಏರಿಕೆಯಾಗಿದೆ. ಆದರೆ, ಬೆಳ್ಳಿ ದರ ಕಡಿಮೆಯಾಗಿದೆ. ಇಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಹೆಚ್ಚಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,300 ರೂ. ಇತ್ತು. ಇಂದು 100 ರೂ. ಹೆಚ್ಚಾಗಿ 46,400 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 50,510 ರೂ. ಇತ್ತು. ಇಂದು 110 ರೂ. ಏರಿಕೆಯಾಗಿ 50,620 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 50,510 ರೂ. ಇತ್ತು. ಇಂದು 110 ರೂ. ಏರಿಕೆಯಾಗಿ 50,620 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 46,300 ರೂ. ಇತ್ತು. ಇಂದು 100 ರೂ. ಹೆಚ್ಚಾಗಿ 46,400 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಇದನ್ನೂ ಓದಿ: Hijab Row: ಇಂದಿನಿಂದ ಪಿಯು-ಡಿಗ್ರಿ ಕಾಲೇಜುಗಳು ಆರಂಭ, ಎಲ್ಲೆಡೆ ಕಟ್ಟೆಚ್ಚರ-144 ಸೆಕ್ಷನ್ ಜಾರಿ

ಭಾರತ ಆಭರಣ ಪ್ರಿಯರಿಗೆ ಹೆಸರುವಾಸಿಯಾಗಿದೆ. ದೇಶದಲ್ಲಿ ಚಿನ್ನ ಖರೀದಿ, ವಹಿವಾಟು ಹೆಚ್ಚು ನಡೆಯುತ್ತಲೇ ಇರುತ್ತದೆ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ. ಚಿನ್ನವನ್ನು ಬಾಂಡ್‌ ರೂಪದಲ್ಲೂ ಖರೀದಿಸಲಾಗುತ್ತಿದೆ.

ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ:

ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರದ ಆಸುಪಾಸಿನಲ್ಲೇ ಇದೆ.

ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 51,230 ರೂ. ಇದ್ದರೆ, ಮುಂಬೈ, ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 50,620 ರೂ. ಆಗಿದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 50 ಸಾವಿರದಿಂದ 51 ಸಾವಿರದ ಆಸುಪಾಸಿನಲ್ಲೇ ಇದೆ.

ಇಂದಿನ ಬೆಳ್ಳಿ ದರ:

ದೇಶದಲ್ಲಿಂದು ಚಿನ್ನದ ಬೆಲೆ ಇಳಿಕೆಯಾಗಿದ್ದರೂ ಬೆಳ್ಳಿ ದರ (Silver Rate) ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 63,800 ರೂ. ಇತ್ತು. ಇಂದು 800 ರೂ. ಕಡಿಮೆಯಾಗಿ 63,000 ರೂ. ಆಗಿದೆ.

ಇದನ್ನೂ ಓದಿ: Karnataka Weather Today: ಬೆಳಗ್ಗೆ ಚಳಿ, ಮಧ್ಯಾಹ್ನ ಬಿರು ಬಿಸಿಲು! ಹೇಗಿರಲಿದೆ ನಿಮ್ಮೂರಿನ ಹವಾಮಾನ?

ಆದರೆ, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 68,200 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ಕೇರಳ, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 68,200 ರೂ. ಆಗಿದೆ. ಇನ್ನು, ಮೆಟ್ರೋಪಾಲಿಟನ್‌ ನಗರಗಳಾದ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 63,000 ರೂ. ಆಗಿದೆ.

ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

ಸೂಚನೆ: ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.

  
Published by:Latha CG
First published: