Gold Price Today: ಬೆಂಗಳೂರಲ್ಲಿ ಇಳಿಕೆಯಾದ ಚಿನ್ನದ ಬೆಲೆ, ನಿಮ್ಮ ನಗರಗಳಲ್ಲಿ ಇಂದಿನ ದರ ವಿವರ ನೋಡಿ..

Gold Rate in Bengaluru: ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ(Gold), ಬೆಳ್ಳಿ(Silver) ದರ ದರ ಎಷ್ಟಿದೆ ಎಂಬುದನ್ನು ಇಲ್ಲಿ ನೋಡೋಣ.

ಚಿನ್ನಾಭರಣ

ಚಿನ್ನಾಭರಣ

  • Share this:
Gold Rate on Jan 19, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.. ಬೆಂಗಳೂರಿನಲ್ಲಿ (Bengaluru) ಇಂದು ಬಂಗಾರದ ಬೆಲೆ ಇಳಿಕೆಯಾಗಿದೆ ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,090 ರೂ. ಇತ್ತು. ಇಂದು ಸಹ ಅದೇ ಬೆಲೆ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,090 ರೂ. ಇತ್ತು. ಇಂದೂ ಸಹ ಅದೇ ಬೆಲೆ ಇದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ(Gold), ಬೆಳ್ಳಿ(Silver) ದರ ದರ ಎಷ್ಟಿದೆ ಎಂಬುದನ್ನು ಇಲ್ಲಿ ನೋಡೋಣ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 49,090 ರೂ. ಇತ್ತು. ಇಂದು 20 ರೂ. ಕಡಿಮೆಯಾಗಿ 49,070 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ ನಿನ್ನೆ 44,990 ರೂ. ಇತ್ತು. ಇಂದು 20 ರೂ. ಕಡಿಮೆಯಾಗಿ 44,970 ರೂ. ಆಗಿದೆ. ಇನ್ನು, ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ

ಭಾರತೀಯರು ಚಿನ್ನ ಪ್ರಿಯರು

ಭಾರತದಲ್ಲಿ ಆಭರಣ ಪ್ರಿಯರ ಜನಸಂಖ್ಯೆ ಕಡಿಮೆ ಏನಿಲ್ಲ. ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಾಟ ಮಾಡಲು ಬೇಕಾಗುತ್ತದೆಂದು ಅದರ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.

ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?

ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಈ ಮಧ್ಯೆ, ದೇಶದ ಮೆಟ್ರೋ ನಗರಗಳಾದ ಚೆನ್ನೈನಲ್ಲಿ 49,420 ರೂ. ಇದ್ದರೆ, ಮುಂಬೈನಲ್ಲಿ 49,090 ರೂ., ದೆಹಲಿಯಲ್ಲಿ 51,430 ರೂ. ಹಾಗೂ ಕೋಲ್ಕತ್ತದಲ್ಲಿ 50,000 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 49 ಸಾವಿರದ ಆಸುಪಾಸಿನಲ್ಲೇ ಇದೆ.

ಬೆಳ್ಳಿ ದರ:

ಬಂಗಾರದ ಬೆಲೆ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ದರ (Silver Rate) ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 62,000 ರೂ. ಇತ್ತು. ಇಂದು 300 ರೂ. ಕಡಿಮೆಯಾಗಿ 61,700 ರೂ. ಆಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರ ಎಷ್ಟಿದೆ?

ಬೆಂಗಳೂರಿನಲ್ಲಿ ಇಂದು 1 ಕೆಜಿ ಬೆಳ್ಳಿಯ ಬೆಲೆ 61,700 ರೂ. ಇದ್ದರೆ, ಮೈಸೂರು, ಮಂಗಳೂರಿನಲ್ಲಿ 65,800 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೇರಳ, ಕೊಯಮತ್ತೂರು, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 65,800 ರೂ. ಆಗಿದೆ. ಇನ್ನು, ಮೆಟ್ರೋ ನಗರಗಳಾದ ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ 61,700 ರೂ. ದರ ಇದೆ.

ಇದನ್ನೂ ಓದಿ: Petrol And Diesel Price: ನಿಮ್ಮ ನಗರಗಳಲ್ಲಿ ಇಂದಿನ ತೈಲ ದರದ ವಿವರ ನೋಡಿ

ಬೆಲೆಯಲ್ಲಿ ಏರಿಳಿತ

ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಇದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.  
Published by:Latha CG
First published: