Gold Price Today: ಶುಭ ಶುಕ್ರವಾರದಂದು ಇಳಿಕೆಯಾಯ್ತು ಬಂಗಾರದ ಬೆಲೆ, ಆಭರಣ ಕೊಳ್ಳೋಕೆ ಇದೇ ಸರಿಯಾದ ಸಮಯ!

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 52,040 ರೂ. ಇತ್ತು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Gold Rate on March 4th, 2022: ಇತ್ತೀಚೆಗೆ ದೇಶದಲ್ಲಿ ಬಂಗಾರ, ಬೆಳ್ಳಿ ದರದಲ್ಲಿ ಭಾರಿ ಏರುಪೇರು ಉಂಟಾಗುತ್ತಿದೆ. ರಷ್ಯಾ - ಉಕ್ರೇನ್ ಯುದ್ಧ ಪರಿಣಾಮ, ಭಾರತದ ಷೇರುಪೇಟೆಯಲ್ಲಿ ಅಲ್ಲೋಲ ಕಲ್ಲೋಲ - ಮುಂತಾದ ಕಾರಣಗಳಿಂದ ಈ ವ್ಯತ್ಯಾಸಗಳಾಗುತ್ತಿದೆ ಎನ್ನಲಾಗುತ್ತಿದೆ. ಇದೇ ರೀತಿ ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,700 ರೂ. ಇತ್ತು. ಇಂದು 400 ರೂ. ಕಡಿಮೆಯಾಗಿ 47,300 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 52,040 ರೂ. ಇತ್ತು. ಇಂದು 440 ರೂ. ಇಳಿಕೆಯಾಗಿ 51,600 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 52,040 ರೂ. ಇತ್ತು. ಇಂದು 440 ರೂ. ಇಳಿಕೆಯಾಗಿ 51,600 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 47,700 ರೂ. ಇತ್ತು. ಇಂದು 400 ರೂ. ಕಡಿಮೆಯಾಗಿ 47,300 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಇದನ್ನೂ ಓದಿ: Gold Price Today: ದಿನೇ ದಿನೇ ಜಾಸ್ತಿಯಾಗ್ತಿದೆ ಚಿನ್ನದ ರೇಟ್, ಖರೀದಿಸಲು ತಡ ಮಾಡಿದ್ರೆ ಇನ್ನೂ ಹೆಚ್ಚಾಗುತ್ತೆ!

ದೇಶದಲ್ಲಿ ಆಭರಣ ಪ್ರಿಯರ ಜನಸಂಖ್ಯೆಗೇನೂ ಕೊರತೆ ಇಲ್ಲ. ಈ ಹಿನ್ನೆಲೆ ಚಿನ್ನ ಖರೀದಿ, ವಹಿವಾಟು ಹೆಚ್ಚು ನಡೆಯುತ್ತಲೇ ಇರುತ್ತದೆ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ. ಚಿನ್ನವನ್ನು ಬಾಂಡ್‌ ರೂಪದಲ್ಲೂ ತೆಗೆದುಕೊಳ್ಳಲಾಗುತ್ತದೆ.

ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 52 ಸಾವಿರದಿಂದ 53 ಸಾವಿರದ ಆಸುಪಾಸಿನಲ್ಲೇ ಇದೆ.

ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 52,850 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 51,600 ರೂ. ಆಗಿದೆ.

ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 52 ಸಾವಿರದ ಆಸುಪಾಸಿನಲ್ಲೇ ಇದೆ.

ಇದನ್ನೂ ಓದಿ:LPG Price Hike: ಏರಿಕೆ ಕಂಡ ಎಲ್​ಪಿಜಿ ಗ್ಯಾಸ್, ಮುಂದಿನ ವಾರ ಕಾದಿದೆ ಮತ್ತೊಂದು ಶಾಕ್!

ಇಂದಿನ ಬೆಳ್ಳಿ ದರ:

ದೇಶದಲ್ಲಿಂದು ಚಿನ್ನದ ಬೆಲೆ ಇಳಿಕೆಯಾಗಿದ್ದರೆ ಬೆಳ್ಳಿ ದರ (Silver Rate) ಮತ್ತಷ್ಟು ಹೆಚ್ಚಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 67,200 ರೂ. ಇತ್ತು. ಇಂದು 100 ರೂ. ಏರಿಕೆಯಾಗಿ 67,300 ರೂ. ಆಗಿದೆ.

ಆದರೆ, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 72,500 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 72,500 ರೂ. ಆಗಿದೆ. ಇನ್ನೊಂದೆಡೆ, ಕೇರಳದಲ್ಲಿ ಬೆಳ್ಳಿ ದರ 73,000 ರೂ. ಆಗಿದೆ. ಮೆಟ್ರೋಪಾಲಿಟನ್‌ ನಗರಗಳಾದ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 67,300 ರೂ. ಆಗಿದೆ.

ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

ಸೂಚನೆ: ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.

  
Published by:Latha CG
First published: