Gold Price Today: ಆಭರಣ ಪ್ರಿಯರಿಗೆ ಸಖತ್ ಗುಡ್ ನ್ಯೂಸ್; ಮತ್ತಷ್ಟು ಇಳಿಕೆ ಕಂಡ ಚಿನ್ನ, ಇಂದೇ ಖರೀದಿಸಿ

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಚಿನ್ನ

ಚಿನ್ನ

  • Share this:
Gold Rate on Feb 28, 2022: ರಷ್ಯಾ - ಉಕ್ರೇನ್‌ ಯುದ್ಧ ಪರಿಣಾಮ ಬರೀ ಆ ದೇಶಗಳಿಗೆ ಮಾತ್ರವಲ್ಲ ಭಾರತದ ಮೇಲೂ ಪರಿಣಾಮ ಬೀರುತ್ತಿದೆ. ಒಂದು ಕಡೆ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲವಾಗುತ್ತಿದ್ದರೆ, ಮತ್ತೊಂದು ಕಡೆ ಚಿನಿವಾರ ಪೇಟೆಯಲ್ಲೂ ಏರುಪೇರು ಕಾಣುತ್ತಿದೆ. ಬಂಗಾರ ಹಾಗೂ ಬೆಳ್ಳಿ ಮೌಲ್ಯ ದಿನೇ ದಿನೇ ವ್ಯತ್ಯಾಸವಾಗುತ್ತಿದೆ. ರಷ್ಯಾ - ಉಕ್ರೇನ್ ಯುದ್ಧದ ಮೊದಲನೇ ದಿನದಂದು ಚಿನ್ನದ ದರದಲ್ಲಿ ಭಾರಿ ಏರಿಕೆ ಕಂಡಿದ್ದರೂ, ನಂತರ ದೇಶದಲ್ಲಿ ಬಂಗಾರದ ದರ ಕುಸಿಯುತ್ತಿದೆ. ಇಂದೂ ಸಹ ದೇಶದಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,350 ರೂ. ಇತ್ತು. ಇಂದು 10 ರೂ. ಇಳಿಕೆಯಾಗಿ 46,340 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 50,570 ರೂ. ಇತ್ತು. ಇಂದು 10 ರೂ. ಕಡಿಮೆಯಾಗಿ 50,560 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 50,570 ರೂ. ಇತ್ತು. ಇಂದು 10 ರೂ. ಕಡಿಮೆಯಾಗಿ 50,560 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 46,350 ರೂ. ಇತ್ತು. ಇಂದು 10 ರೂ. ಇಳಿಕೆಯಾಗಿ 46,340 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಇದನ್ನೂ ಓದಿ: ಮುಂದೊಂದು ದಿನ ಭಾರತ ಜಾಗತಿಕ ಇಂಧನದ ನಾಯಕತ್ವ ವಹಿಸಲಿದೆ: ಮುಖೇಶ್ ಅಂಬಾನಿ

ದೇಶದಲ್ಲಿ ಆಭರಣ ಪ್ರಿಯರ ಜನಸಂಖ್ಯೆಗೇನೂ ಕೊರತೆ ಇಲ್ಲ. ಚಿನ್ನ ಖರೀದಿ, ವಹಿವಾಟು ಹೆಚ್ಚು ನಡೆಯುತ್ತಲೇ ಇರುತ್ತದೆ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ. ಚಿನ್ನವನ್ನು ಬಾಂಡ್‌ ರೂಪದಲ್ಲೂ ಖರೀದಿಸಲಾಗುತ್ತದೆ.

ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರದಿಂದ 52 ಸಾವಿರದ ಆಸುಪಾಸಿನಲ್ಲೇ ಇದೆ.
ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 51,690 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 50,560 ರೂ. ಆಗಿದೆ.

ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರದಿಂದ 52 ಸಾವಿರದ ಆಸುಪಾಸಿನಲ್ಲೇ ಇದೆ.

ಇಂದಿನ ಬೆಳ್ಳಿ ದರ:

ದೇಶದಲ್ಲಿಂದು ಚಿನ್ನದ ಬೆಲೆ ಇಳಿಕೆಯಾಗಿದ್ದರೂ ಬೆಳ್ಳಿ ದರ (Silver Rate) ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 64,000 ರೂ. ಇತ್ತು. ಇಂದು 100 ರೂ. ಏರಿಕೆಯಾಗಿ 64,100 ರೂ. ಆಗಿದೆ.

ಆದರೆ, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 69,000 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ಕೇರಳ, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 69,000 ರೂ. ಆಗಿದೆ. ಇನ್ನು, ಮೆಟ್ರೋಪಾಲಿಟನ್‌ ನಗರಗಳಾದ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 64,100  ರೂ. ಆಗಿದೆ.

ಇದನ್ನೂ ಓದಿ: Gold And Silver Price: ಇವತ್ತು "ಚಿನ್ನಾ" ಅಂತ ಕರೆಯೋ ಮುನ್ನ ಸ್ವಲ್ಪ ಗೋಲ್ಡ್ ರೇಟ್ ಓದ್ಕೊಂಡ್ಬಿಡಿ!

ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

ಸೂಚನೆ: ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
Published by:Latha CG
First published: