Gold Price Today: ಇಂದು ಏರಿಕೆಯಾದ ಚಿನ್ನದ ಬೆಲೆ, ಮತ್ತೂ ಹೆಚ್ಚಾಗುವ ಮೊದಲೇ ಬಂಗಾರ ಖರೀದಿಸಿ

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಚಿನ್ನಾಭರಣ

ಚಿನ್ನಾಭರಣ

  • Share this:
Gold Rate on March 1st, 2022: ರಷ್ಯಾ - ಉಕ್ರೇನ್‌ ಯುದ್ಧ(Russia-Ukraine) ಪರಿಣಾಮ ಬರೀ ಆ ದೇಶಗಳಿಗೆ ಮಾತ್ರವಲ್ಲ ಭಾರತದ(India) ಮೇಲೂ ಪರಿಣಾಮ ಬೀರುತ್ತಿದೆ. ಒಂದು ಕಡೆ ಷೇರು ಮಾರುಕಟ್ಟೆಯಲ್ಲಿ(Share Market) ಅಲ್ಲೋಲ ಕಲ್ಲೋಲವಾಗುತ್ತಿದ್ದರೆ, ಮತ್ತೊಂದು ಕಡೆ ಚಿನಿವಾರ ಪೇಟೆಯಲ್ಲೂ ಏರುಪೇರು ಕಾಣುತ್ತಿದೆ. ಬಂಗಾರ ಹಾಗೂ ಬೆಳ್ಳಿ ಮೌಲ್ಯ(Silver and Gold Price) ದಿನೇ ದಿನೇ ವ್ಯತ್ಯಾಸವಾಗುತ್ತಿದೆ. ಯುದ್ಧ ಆರಂಭವಾದ ಮೊದಲನೇ ದಿನ ಬಂಗಾರದ ಮೌಲ್ಯ ತೀವ್ರ ಏರಿಕೆಯಾಗಿತ್ತು. ಬಳಿಕ ಕುಸಿತ ಕಂಡಿದ್ದರೂ, ಇಂದು ಮತ್ತೆ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆಯಾಗಿದೆ. ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,340 ರೂ. ಇತ್ತು. ಇಂದು 660 ರೂ. ಏರಿಕೆಯಾಗಿ 47,000 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 50,560 ರೂ. ಇತ್ತು. ಇಂದು 720 ರೂ. ಹೆಚ್ಚಾಗಿ 51,280 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 50,560 ರೂ. ಇತ್ತು. ಇಂದು 720 ರೂ. ಹೆಚ್ಚಾಗಿ 51,280 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 46,340 ರೂ. ಇತ್ತು. ಇಂದು 660 ರೂ. ಹೆಚ್ಚಾಗಿ 47,000 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಇದನ್ನೂ ಓದಿ: Maha Shivratri: ಕೆ.ಆರ್.ಮಾರ್ಕೆಟ್ ನಲ್ಲಿ ಹಬ್ಬದ ಖರೀದಿ ಜೋರು: ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ದೇಶದಲ್ಲಿ ಚಿನ್ನ ಖರೀದಿ, ವಹಿವಾಟು ಹೆಚ್ಚು ನಡೆಯುತ್ತಲೇ ಇರುತ್ತದೆ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ.

ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರದಿಂದ 52 ಸಾವಿರದ ಆಸುಪಾಸಿನಲ್ಲೇ ಇದೆ.

ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 52,170 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 51,280 ರೂ. ಆಗಿದೆ.

ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರದ ಆಸುಪಾಸಿನಲ್ಲೇ ಇದೆ.

ಇಂದಿನ ಬೆಳ್ಳಿ ದರ:

ದೇಶದಲ್ಲಿಂದು ಚಿನ್ನದ ಬೆಲೆ ಏರಿಕೆಯಾದಂತೆ ಬೆಳ್ಳಿ ದರ (Silver Rate) ಸಹ ದುಬಾರಿಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 64,100 ರೂ. ಇತ್ತು. ಇಂದು 1,100 ರೂ. ಏರಿಕೆಯಾಗಿ 65,200 ರೂ. ಆಗಿದೆ.

ಆದರೆ, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 69,900 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ಕೇರಳ, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 69,900 ರೂ. ಆಗಿದೆ.

ಇನ್ನು, ಮೆಟ್ರೋಪಾಲಿಟನ್‌ ನಗರಗಳಾದ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 65,200 ರೂ. ಆಗಿದೆ.

ಇದನ್ನೂ ಓದಿ: Bank Holidays in March: ಮಾರ್ಚ್ ತಿಂಗಳಲ್ಲಿ ಒಟ್ಟು 13 ರಜೆಗಳು: ಈ ದಿನ ಬ್ಯಾಂಕಿಂಗ್ ಕೆಲಸ ಇಟ್ಟುಕೊಳ್ಳಬೇಡಿ!

ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
Published by:Latha CG
First published: