Gold Price Today: ಬೆಂಗಳೂರಲ್ಲಿ ಮತ್ತಷ್ಟು ಹೆಚ್ಚಾದ ಚಿನ್ನ, ಬೆಳ್ಳಿ ದರ: ಇಂದಿನ ಬೆಲೆ ವಿವರ ಇಲ್ಲಿದೆ

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,600 ರೂ. ಆಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Gold Rate on October 22, 2021: ದೇಶದಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಅಲ್ಪ ಇಳಿಕೆಯಾಗಿದ್ದು, ಆಭರಣ ಪ್ರಿಯರಿಗೆ ಖುಷಿ ತಂದಿದೆ. ಆದರೆ, ಬೆಂಗಳೂರಿನಲ್ಲಿ (Bengaluru) ಇಂದು ಚಿನ್ನದ ಬೆಲೆ ಏರಿಕೆಯಾಗಿದ್ದು, 22 ಕ್ಯಾರೆಟ್‌ ಚಿನ್ನದ ಬೆಲೆ 100 ರೂ. ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,490 ರೂ. ಇತ್ತು, ಇಂದು 20 ರೂ. ಬೆಲೆ ಇಳಿಕೆಯಾಗಿ 46,470 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,490 ರೂ. ಆಗಿದ್ದು, ಇಂದು 47,470 ರೂ. ಗೆ ಇಳಿಕೆಯಾಗಿದೆ.

    ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

    ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,600 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,550 ರೂ. ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

    49 ಸಾವಿರದ ಆಸುಪಾಸಿನಲ್ಲಿ ಚಿನ್ನದ ಬೆಲೆ 

    ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಚೆನ್ನೈನಲ್ಲಿ 48,920 ರೂ.ಇದ್ದರೆ, ಮುಂಬೈನಲ್ಲಿ 47,470 ರೂ., ದೆಹಲಿಯಲ್ಲಿ 50,950 ರೂ. ಹಾಗೂ ಕೋಲ್ಕತ್ತದಲ್ಲಿ 49,600 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ ಹೆಚ್ಚೂ ಕಡಿಮೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

    ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

    ಇಂದಿನ ಬೆಳ್ಳಿ ದರ: ಬಂಗಾರದ ಬೆಲೆ ದೇಶದಲ್ಲಿ ಇಳಿಕೆಯಾಗಿದ್ದರೆ,ಬೆಳ್ಳಿ ದರ (Silver Rate) ದೇಶದಲ್ಲಿ ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 64,600 ರೂ. ಇದ್ದು, ಇಂದು 900 ರೂ. ಬೆಲೆ ಹೆಚ್ಚಾಗಿದ್ದು, 65,500 ರೂ. ಆಗಿದೆ.

    ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 65,500 ರೂ. ಇದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 70 ಸಾವಿರ ರೂ. ಆಸುಪಾಸಿನಲ್ಲಿದೆ. ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

    ಚೇತರಿಸಿಕೊಳ್ಳುತ್ತಿರುವ ಆರ್ಥಿಕ ವ್ಯವಸ್ಥೆ 

    ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

    ಇದನ್ನೂ ಓದಿ: ಚಿನ್ನದ ರೇಟ್ ಹೆಚ್ಚಾಗೋಕೆ ಇದೇ ಕಾರಣ, ಈ ಲೆಕ್ಕ ತಿಳ್ಕೊಂಡ್ರೆ ಬೆಲೆ ಯಾವಾಗ ಕಮ್ಮಿಯಾಗುತ್ತೆ ಅಂತ ನಿಮ್ಗೆ ಮೊದ್ಲೇ ಗೊತ್ತಾಗುತ್ತೆ

    ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
    Published by:Kavya V
    First published: