Gold Price Today: ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ : ಇಳಿಕೆಯಾಯ್ತು ಬೆಲೆ, ಇಲ್ಲಿದೆ ನೋಡಿ ದರ

ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,330 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,300 ರೂ. ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಚಿನ್ನ

ಚಿನ್ನ

  • Share this:

Gold Rate on October 20 2021: ದೇಶದಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಇಳಿಕೆಯಾಗಿದ್ದು, ಆಭರಣ ಪ್ರಿಯರಿಗೆ ಖುಷಿ ತಂದಿದೆ. ಆದರೆ, ಬೆಂಗಳೂರಿನಲ್ಲಿ (Bengaluru) ಇಂದು ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದ್ದು, ನಿನ್ನೆಯ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,070 ರೂ. ಇತ್ತು. ಇಂದು 560 ರೂ ಬೆಲೆ ಇಳಿಕೆಯಾಗಿದ್ದು, ಇಂದಿನ ಬೆಲೆ 46,510 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,070 ರೂ. ಇತ್ತು. ಇಂದು 47,510 ರೂ. ಆಗಿದ್ದು 560 ರೂ ಬೆಲೆ ಕಡಿಮೆಯಾಗಿದೆ.


ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?


ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,330 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,300 ರೂ. ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.


ಇದನ್ನೂ ಓದಿ: Petrol Diesel Price Today: ಸದ್ಯಕ್ಕೆ ಕಡಿಮೆಯಾಗಲ್ವಂತೆ ಪೆಟ್ರೋಲ್-ಡೀಸೆಲ್ ಬೆಲೆ, ಈಗ ಲೀಟರ್​ಗೆ 111 ರೂಪಾಯಿಗೂ ಹೆಚ್ಚು!

ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಚೆನ್ನೈನಲ್ಲಿ 48,710 ರೂ.ಇದ್ದರೆ, ಮುಂಬೈನಲ್ಲಿ 47.510 ರೂ., ದೆಹಲಿಯಲ್ಲಿ 50,670 ರೂ. ಹಾಗೂ ಕೋಲ್ಕತ್ತದಲ್ಲಿ 49,550 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ ಹೆಚ್ಚೂ ಕಡಿಮೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.


ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರ:

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.


ಇದನ್ನೂ ಓದಿ:  Tomato Rate: ಕೋಲಾರದಲ್ಲಿ  1 ಸಾವಿರ ರೂ. ದಾಟಿದ ಟೊಮೆಟೊ ಬೆಲೆ, ಏರಿಕೆಯಾದರೂ ಕೋಲಾರದ ರೈತರಿಗೆ ಭಾರೀ ನಿರಾಸೆ

ಇಂದಿನ ಬೆಳ್ಳಿ ದರ:


ಬಂಗಾರದ ಬೆಲೆ ಇಳಿಕೆಯಾಗಿದ್ದರೆ,ಬೆಳ್ಳಿ ದರ (Silver Rate) ದೇಶದಲ್ಲಿ ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 63,600 ರೂ. ಇತ್ತು. ಇಂದು 64,200 ರೂ. ಇದ್ದು, 600 ರೂ. ಬೆಲೆ ಹೆಚ್ಚಾಗಿದೆ.


ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 64,200 ರೂ. ಇದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 67,800 ರೂ. ಆಸುಪಾಸಿನಲ್ಲಿದೆ.


ಬೆಂಗಳೂರಿನಲ್ಲಿ ಬೆಳ್ಳಿ ಮೇಲೆ ಹೂಡಿಕೆ:

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.


ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಳಿತ

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.


ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

Published by:Mahmadrafik K
First published: