ಐಪಿಎಲ್ 2023 ರ ಮಿನಿ ಹರಾಜು ಪ್ರಾರಂಭವಾಗಿದೆ. 10 ಫ್ರಾಂಚೈಸಿಗಳು ತಮ್ಮ ತಂಡವನ್ನು ಪೂರ್ಣಗೊಳಿಸಲು ಇಂದು ಹರಾಜಿಗೆ ಎಂಟ್ರಿಕೊಟ್ಟಿವೆ. ಹರಾಜಿನಲ್ಲಿ 405 ಆಟಗಾರರನ್ನು ಹರಾಜು ಹಾಕಲಾಗುತ್ತಿದೆ. ಈ ಹರಾಜಿಗಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಕೂಡ ಭಾಗವಹಿಸಿದ್ದಾರೆ. ಈ ಮಿನಿ ಹರಾಜಿನಲ್ಲಿ ಪ್ರಮುಖವಾಗಿ ಇಂಗ್ಲೆಂಡ್ನ ಆಲ್ರೌಂಡರ್ಗಳಾದ ಬೆನ್ ಸ್ಟೋಕ್ಸ್, ಸ್ಯಾಮ್ ಕರನ್ ಸೇರಿದಂತೆ ಹಲವು ಆಟಗಾರರಿಗೆ ಫ್ರಾಂಚೈಸಿಗಳ ನಡುವೆ ತೀವ್ರ ಪೈಪೋಟಿ ನಡೆಯಲಿದೆ. ಸನ್ರೈಸರ್ಸ್ ಹೈದರಾಬಾದ್ ಹೆಚ್ಚು ಹಣವನ್ನು ಹೊಂದಿದ್ದು, ಇದರ ನಂತರ ಪಂಜಾಬ್ ಕಿಂಗ್ಸ್ ಇದೆ.
8.5 ಕೋಟಿಗೆ ಹೈದರಾಬಾದ್ ಪಾಲಾದ ಕನ್ನಡಿಗ ಮಯಾಂಕ್!
ಕನ್ನಡಿಗ ಮಯಾಂಕ್ ಅಗರ್ವಾಲ್ ಈ ಬಾರಿ ಮೊತ್ತಕ್ಕೆ ಹರಾಜಾಗುವ ಮೂಲಕ ದಾಖಲೆ ಬರೆದಿದ್ದಾರೆ. ಹರಾಜು ಆರಂಭಗೊಂಡ ಕೆಲವೇ ಕ್ಷಣಗಳಲ್ಲಿ ಮಯಾಂಕ್ ಬಿಡ್ಡಿಂಗ್ ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು. ಚೆನ್ನೈ ಸೂಪರ್ ಕಿಂಗ್ಸ್ ಪ್ರಬಲ ಪೈಪೋಟಿ ನಡುವೆ ಸನ್ರೈಸರ್ಸ್ ಹೈದರಾಬಾದ್ ತಂಡ 8.25 ಕೋಟಿ ರೂಪಾಯಿ ನೀಡಿ ಮಯಾಂಕ್ ಅಗರ್ವಾಲ್ ಖರೀದಿ ಮಾಡಿತು. ಈ ಮೂಲಕ ಬಿಡ್ಡಿಂಗ್ ಆರಂಭಗೊಂಡ ಕೆಲವೇ ಕ್ಷಣಗಲ್ಲಿ ಗರಿಷ್ಠ ಮೊತ್ತಕ್ಕೆ ಹರಾಜಾದ ಆಟಗಾರ ಅನ್ನೋ ಹೆಗ್ಗಳಿಕೆಗೆ ಮಯಾಂಕ್ ಅಗರ್ವಾಲ್ ಪಾತ್ರರಾಗಿದ್ದಾರೆ.
ಕಳೆದ ಬಾರಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಮಯಾಂಕ್!
ಕಳೆದ ಬಾರಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಮಯಾಂಕ್ ಅಗರ್ವಾಲ್ ತಂಡವನ್ನು ಮುನ್ನಡೆಸಿದ್ದರು. ಅದರೆ ಈ ಬಾರಿ ಅವರನ್ನು ರಿಟೇನ್ ಮಾಡಿಕೊಳ್ಳದೆ ಬಿಡುಗಡೆ ಮಾಡಿತ್ತು. ಇದೀಗ ಸನ್ರೈಸರ್ಸ್ ಹೈದರಾಬಾದ್ ತಂಡದ ನಾಯಕತ್ವ ವಹಿಸಿಕೊಳ್ಳುವ ಸಾದ್ಯತೆ ಇದೆ.
ಇದನ್ನೂ ಓದಿ: ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಿಸಿದ ಸ್ಯಾಮ್ ಕರನ್, 18.50 ಕೋಟಿಗೆ ಪಂಜಾಬ್ ಪಾಲಾದ ಇಂಗ್ಲೆಂಡ್ ಆಟಗಾರ!
ಗುಜರಾತ್ ಟೈಟನ್ಸ್ ತಂಡಕ್ಕೆ ಕೇನ್ ವಿಲಿಯಮ್ಸನ್
ಇದಕ್ಕೂ ಮುನ್ನ ನ್ಯೂಜಿಲೆಂಡ್ ತಂಡದ ಆಟಗಾರ ಕೇನ್ ವಿಲಿಯಮ್ಸನ್ ಅವರನ್ನು ಗುಜರಾತ್ ಟೈಟನ್ಸ್ ತಂಡ 2 ಕೋಟಿ ರೂಪಾಯಿಗೆ ಖರೀದಿ ಮಾಡಿದೆ. ಈ ಹಿಂದೆ 2022ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 16 ಕೋಟಿ ರೂ.ಗೆ ಮಾರಾಟವಾಗಿದ್ದ ಕೇನ್ ವಿಲಿಯಮ್ಸನ್, ಈ ಬಾರಿ ಮೂಲ ಬೆಲೆಗೆ ಸೋಲ್ಡ್ ಔಟ್ ಆಗಿದ್ದಾರೆ.
ಇತಿಹಾಸ ನಿರ್ಮಿಸಿದ ಸ್ಯಾಮ್ ಕರನ್!
ಐಪಿಎಲ್ ಹರಾಜಿನಲ್ಲಿ ಇಂಗ್ಲೆಂಡ್ ತಂಡ ಆಟಗಾರ ಸ್ಯಾಮ್ ಕರನ್ ಹೊಸ ದಾಖಲೆ ಬರೆದಿದ್ದಾರೆ. 18.50 ಕೋಟಿಗೆ ಪಂಜಾಬ್ ಪಾಲಾಗಿದ್ದಾರೆ. ಐಪಿಎಲ್ ಹರಾಜಿನ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಇಂಗ್ಲೆಂಡ್ ಆಲ್ರೌಂಡರ್ ಸ್ಯಾಮ್ ಕರನ್. ಇಂಗ್ಲೆಂಡ್ ತಂಡದ ಸ್ಟಾರ್ ಆಲ್ರೌಂಡರ್ ಸ್ಯಾಮ್ ಕರನ್ ಅವರನ್ನು ಪಂಜಾಬ್ ಕ್ಯಾಪಿಟಲ್ಸ್ ಫ್ರಾಂಚೈಸ್ ₹ 18.50 ಕೋಟಿ ನೀಡಿ ಖರೀದಿಸಿದೆ.
ಇದನ್ನೂ ಓದಿ: ಆರ್ಸಿಬಿ ಹತ್ರ ಇರೋದು ಇಷ್ಟೇ ಹಣ! ಇನ್ನುಳಿದ ತಂಡಗಳ ಬಳಿ ಎಷ್ಟಿದೆ ? ಇನ್ನೇಷ್ಟು ಆಟಗಾರರು ಬೇಕು ನೋಡಿ
ಕ್ರಿಸ್ ಮಾರಿಸ್ ದಾಖಲೆ ಮುರಿದ ಸ್ಯಾಮ್!
ಇದರೊಂದಿಗೆ ಐಪಿಎಲ್ ಮಿನಿ ಹರಾಜಿನಲ್ಲಿ ಅತಿಹೆಚ್ಚು ಮೊತ್ತ ಜೇಬಿಗಿಳಿಸಿಕೊಂಡ ಆಟಗಾರ ಎಂಬ ಶ್ರೇಯ ಸ್ಯಾಮ್ ಅವರದ್ದಾಗಿದೆ. ಈ ಹಿಂದೆ (2021ರಲ್ಲಿ) ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಕ್ರಿಸ್ ಮಾರಿಸ್ ಅವರನ್ನು ರಾಜಸ್ತಾನ ರಾಯಲ್ಸ್ ತಂಡ ₹ 16.25 ಕೋಟಿ ನೀಡಿ ಖರೀದಿಸಿತ್ತು. ಅದು ಈ ವರೆಗೆ ದಾಖಲೆಯಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ