• ಹೋಂ
  • »
  • ನ್ಯೂಸ್
  • »
  • ಬ್ಯುಸಿನೆಸ್
  • »
  • Karnataka Budget 2023: IIT ಮಾದರಿಯಲ್ಲಿ ಈ 7 ಇಂಜಿನಿಯರಿಂಗ್ ಕಾಲೇಜುಗಳನ್ನ ಕೆಐಟಿಯಾಗಿ ಉನ್ನತೀಕರಿಸಲು 50 ಕೋಟಿ ಘೋಷಣೆ

Karnataka Budget 2023: IIT ಮಾದರಿಯಲ್ಲಿ ಈ 7 ಇಂಜಿನಿಯರಿಂಗ್ ಕಾಲೇಜುಗಳನ್ನ ಕೆಐಟಿಯಾಗಿ ಉನ್ನತೀಕರಿಸಲು 50 ಕೋಟಿ ಘೋಷಣೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಹಾವೇರಿ, ಕೆಆರ್​ ಪೇಟೆ, ತಳ್ಕಲ್​​, ರಾಮನಗರ ಹಾಗೂ ಕಾರವಾರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಕೆಐಟಿಗಳಾಗಿ ಉನ್ನತೀಕರಿಸಲು ಗುರುತಿಸಲಾಗಿದೆ. ಇದಕ್ಕಾಗಿ ಪ್ರೊ. ಸಡಗೋಪನ್​ ನೇತೃತ್ವದ ತಜ್ಞರ ಸಮಿತಿಯು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಸೌಲಭ್ಯಗಳು ಮತ್ತು ಮೂಲ ಸೌಕರ್ಯಗಳ ಕುರಿತು ವರದಿ ಸಲ್ಲಿಸಿದೆ. ಸಮಿತಿಯ ಶಿಫಾರಸ್ಸಿನನ್ವಯ ಅಭಿವೃದ್ಧಿ ಕಾಮಗಾರಿಗಳಿಗೆ 50 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  (Basavaraj Bommai) ಶುಕ್ರವಾರ 2023-24ರ ಸಾಲಿನ ಬಜೆಟ್ (Budget) ಮಂಡಿಸಿದ್ದಾರೆ. ಉನ್ನತ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಕಳೆದ ವರ್ಷದ ಬಜೆಟ್​ನಲ್ಲಿ ಘೋಷಣೆ ಮಾಡಿದಂತೆ ಮುಂದಿನ ಐದು ವರ್ಷಗಳಲ್ಲಿ ಐಐಟಿ (IIT) ಮಾದರಿಯಲ್ಲಿ ಕರ್ನಾಟಕ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ (Karnataka institute of Technology) ಉನ್ನತೀಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಬಜೆಟ್​ ಮಂಡನೆ ವೇಳೆ ತಿಳಿಸಿದ್ದಾರೆ.


ಬೆಂಗಳೂರು, ಹಾವೇರಿ, ಕೆಆರ್​ ಪೇಟೆ, ತಳ್ಕಲ್​​, ರಾಮನಗರ ಹಾಗೂ ಕಾರವಾರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಕೆಐಟಿಗಳಾಗಿ ಉನ್ನತೀಕರಿಸಲು ಗುರುತಿಸಲಾಗಿದೆ. ಇದಕ್ಕಾಗಿ ಪ್ರೊ. ಸಡಗೋಪನ್​ ನೇತೃತ್ವದ ತಜ್ಞರ ಸಮಿತಿಯು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಸೌಲಭ್ಯಗಳು ಮತ್ತು ಮೂಲ ಸೌಕರ್ಯಗಳ ಕುರಿತು ವರದಿ ಸಲ್ಲಿಸಿದೆ. ಸಮಿತಿಯ ಶಿಫಾರಸ್ಸಿನನ್ವಯ ಅಭಿವೃದ್ಧಿ ಕಾಮಗಾರಿಗಳಿಗೆ 50 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.


ಕನ್ನಡದಲ್ಲಿ ಪರೀಕ್ಷೆ


ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕುಗಳನ್ನು ನಿವಾರಿಸಲು ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವೃತ್ತಿಪರ ಕೋರ್ಸ್​ಗಳ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅನುಕೂಲವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್​ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: Karnataka Budget 2023: ಉಚಿತ ಬಸ್ ಪಾಸ್ ಜೊತೆ ಮತ್ತಷ್ಟು ಸವಲತ್ತು, ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ಬಂಪರ್!


100 ಪಿಯು ಕಾಲೇಜುಗಳಲ್ಲಿ ವಿಜ್ಞಾನ ವಿಭಾಗ ಆರಂಭ


ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದಲ್ಲಿ 100 ಆಯ್ದ ಪದವಿ ಕಾಲೇಜುಗಳಲ್ಲಿ ಪ್ರೊಫೆಸರ್ ಸಿಎನ್ ಆರ್ ರಾವ್ ವಿಜ್ಞಾನ ಕಾರ್ಯಕ್ರಮದಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿಜ್ಞಾನ ವಿಭಾಗ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಹಳ್ಳಿ ಮುತ್ತು ಯೋಜನೆ


'ಹಳ್ಳಿ ಮುತ್ತು' ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣ ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.


125 ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆ


ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಉನ್ನತ ಶಿಕ್ಷಣವನ್ನು ಬಲಪಡಿಸಲು ಒಟ್ಟು 125 ಕೋಟಿ ರೂ ವೆಚ್ಚದಲ್ಲಿ ಕೊಠಡಿಗಳು, ಶೌಚಾಲಯ ಮತ್ತು ಪ್ರಯೋಗಾಲಯಗಳ ನಿರ್ಮಾಣ ಮಾಡಲಾಗುವುದು. ವಿದ್ಯಾವರ್ದಿನಿ ಯೋಜನೆಯಡಿ ಎಲ್ಲಾ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಕಾಲೇಜು​ಗಳಿಗೆ ಅಗತ್ಯ ಮೂಲ ಸೌಕರ್ಯ ನೀಡಲಾಗುವುದು. ಯೋಗ ತರಬೇತಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.


Karnataka budget 2023 congress reaction mrq
ಬಸವರಾಜ್ ಬೊಮ್ಮಾಯಿ


7 ಹೊಸ ವಿಶ್ವವಿದ್ಯಾಲಯ ಸ್ಥಾಪನೆ


ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆಗೆ ಘೋಷಿಸಲಾಗಿದೆ. ಜೊತೆಗೆ ರಾಜ್ಯದಲ್ಲಿ ಹೊಸದಾಗಿ ಬೀದರ್​, ಕೊಪ್ಪಳ, ಚಾಮರಾಜನಗರ, ಹಾಸನ, ಹಾವೇರಿ, ಬಾಗಲಕೋಟೆ, ಕೊಡಗು ಜಿಲ್ಲೆಗಳಲ್ಲಿ 7 ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗಿದೆ. ಈ ವರ್ಷ ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವವಿದ್ಯಾಲಯ, ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್​ ಕಾಲೇಜು, ಶಿಗ್ಗಾಂವ್​ ತಾಲೂಕಿನ ಬಂಕಾಪುರದಲ್ಲಿರುವ ಪಾಲಿಟೆಕ್ನಿಕ್​ ಕಾಲೇಜನ್ನು ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಆಗಿ ಉನ್ನತೀಕರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Published by:Rajesha M B
First published: