Karnataka Budget 2023: ನೀರಾವರಿ ಕ್ಷೇತ್ರಕ್ಕೆ 25,000 ಕೋಟಿ ಅನುದಾನ, ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಕ್ರಮ

ನೀರಾವರಿಗೆ 25 ಸಾವಿರ ಕೋಟಿ ಅನುದಾನ

ನೀರಾವರಿಗೆ 25 ಸಾವಿರ ಕೋಟಿ ಅನುದಾನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚುನಾವಣಾ (Election) ವರ್ಷದ ಆಯವ್ಯಯದಲ್ಲಿ(Budget) ನೀರಾವರಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ. ರಾಜ್ಯ ಬಹಳ ಪ್ರಮುಖವಾದ ಕಳಸ ಬಂಡೂರಿ, ಎತ್ತಿನಹೊಳೆ, ಕೆ.ಸಿ ವ್ಯಾಲಿ ಯೋಜನೆಗಳಿಗೆ ಅನುದಾನ ನೀಡಲಾಗಿದೆ. ಬೊಮ್ಮಾಯಿ ಬಜೆಟ್​ನಲ್ಲಿ ನೀರಾವರಿ ಅಭಿವೃದ್ಧಿಗಾಗಿ 2022-23 ನೀರಾವರಿ (Irrigation) ಕ್ಷೇತ್ರಕ್ಕೆ ಒಟ್ಟಾರೆ 25,000 ಕೋಟಿ ರೂ. ಗಳ ಅನುದಾನ ನೀಡಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು: ಕರ್ನಾಟಕ ಸರ್ಕಾರದ (Karnataka Government)  ಪ್ರಸಕ್ತ ಸಾಲಿನ ಬಜೆಟ್​ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಶುಕ್ರವಾರ ಮಂಡಿಸಿದ್ದು, ಚುನಾವಣಾ (Election) ವರ್ಷದ ಆಯವ್ಯಯದಲ್ಲಿ(Budget) ನೀರಾವರಿಗೆ ಭರ್ಜರಿ ಅನುದಾನ ಘೋಷಿಸಿದ್ದಾರೆ. ರಾಜ್ಯ ಬಹಳ ಪ್ರಮುಖವಾದ ಕಳಸ ಬಂಡೂರಿ, ಎತ್ತಿನಹೊಳೆ, ಕೆ.ಸಿ ವ್ಯಾಲಿ ಯೋಜನೆಗಳಿಗೆ ಅನುದಾನ ನೀಡಲಾಗಿದೆ. ಬೊಮ್ಮಾಯಿ ಬಜೆಟ್​ನಲ್ಲಿ ನೀರಾವರಿ ಅಭಿವೃದ್ಧಿಗಾಗಿ 2022-23 ನೀರಾವರಿ (Irrigation) ಕ್ಷೇತ್ರಕ್ಕೆ ಒಟ್ಟಾರೆ 25,000 ಕೋಟಿ ರೂ. ಗಳ ಅನುದಾನ ನೀಡಿದ್ದಾರೆ. ಈ ವರ್ಷ 1.25 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿಯನ್ನು ವ್ಯಕ್ತಪಡಿಸಿದೆ.


ಕೃಷ್ಣಾ ಮೇಲ್ದಂಡೆ ಯೋಜನೆಗೆ 5000 ಕೋಟಿ


ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಗೆ ಮೂರನೇ ಹಂತಕ್ಕೆ ಈ ಬಾರಿಯ ಬಜೆಟ್​ನಲ್ಲಿ 5000 ಕೋಟಿ ರೂ ಅನುದಾನ ಘೋಷಣೆ ಮಾಡಲಾಗಿದೆ. ಈ ಯೋಜನೆಯಡಿ ಭೂಸ್ವಾದೀನಕ್ಕೆ ಏಕರೂಪ ದರ ನಿಗದಿಪಡಿಸುವ ಸಂಬಂಧದಲ್ಲಿ ಒಪ್ಪಂದದ ತೀರ್ಪನ್ನು ರಚಿಸುವ ಕುರಿತು ಪ್ರಸಕ್ತ ಸರ್ಕಾರ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ. ಇದರಿಂದ ರೈತರು ಭೂಮಾಲೀಕರಿಗೆ ಶೀಘ್ರ ಭೂಪರಿಹಾರ ದೊರಕಲಿದೆ ಎಂದರು.


ನೀರಾವರಿ ಆದ್ಯತೆ ದೃಷ್ಟಿಯಿಂದ 2022-23ನೇ ಸಾಲಿನಲ್ಲಿ ಒಟ್ಟು 11, 236 ಕೋಟಿ ರೂ ಮೊತ್ತದ 38 ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ಇದೀಗ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುವುದು. ಜಲಸಂಪನ್ಯೂಲ ಇಲಾಖೆಯ ವತಿಯಿಂದ ಸುಮಾರು 1.5 ಲಕ್ಷ ಎಕರೆ ನೀರಾವರಿ ಸಾಮರ್ಥ್ಯವನ್ನು ಸೃಷ್ಟಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.


ಕೆರೆಗಳನ್ನು ತುಂಬಿಸುವ ಯೋಜನೆ ಪೂರ್ಣ


ಪ್ರಸಕ್ತ ಸಾಲಿನಲ್ಲಿ ಪ್ರಗತಿಯಲ್ಲಿರುವ ಜಗಳೂರು, ಕಿತ್ತೂರು, ಬಾಳಂಬೀಡ, ಹರಪನಹಳ್ಳಿ, ಯಾದಗಿರಿ, ರಾಯಚೂರಿನ ವಿವಿಧ ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಈ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಸಸಾಲಟ್ಟಿ-ಶಿವಲಿಂಗೇಶ್ವರ ಮಂಟೂರು ಮಹಾಲಕ್ಷ್ಮ ಮತ್ತು ಶ್ರೀ ವೆಂಕಟೇಶ್ವರ ಏತ ನೀರಾವರಿ ಯೋಜನೆ, ಪೂರಿಗಾಲಿ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.


ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ಅನುದಾನ


ಕಳಸಾ ಮತ್ತು ಬಂಡೂರಾ ನಾಲಾ ತಿರುವು ಯೋಜನೆಗಳಿಗೆ ಮಹದಾಯಿ ನ್ಯಾಯಾಧೀಕರಣದಿಂದ ಹಂಚಿಕೆಯಾಗಿರುವ 3.90 ಟಿಎಂಸಿ ನೀರಿನ ಬಳಕೆಗಾಗಿ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಸಿಕ್ಕಿದೆ. ಈ ಯೋಜನೆಯ ಕಾಮಗಾರಿ ಪ್ರಾರಂಭಿಸಿಲು 1000 ಕೋಟಿ ರೂ ಅನುಮೋದನೆ ನೀಡಲಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ ತ್ವರಿತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.


ಇದನ್ನೂ ಓದಿ: Karnataka Budget 2023-24 Live: ಸರ್ಕಾರಿ ಉದ್ಯೋಗಿಗಳ ಆಸೆಗೆ ತಣ್ಣೀರೆರಚಿದ ಬಜೆಟ್​, 7ನೇ ವೇತನ ಆಯೋಗದ ಬಗ್ಗೆ ಸಿಎಂ ಮೌನ


ಭದ್ರಾ ಮೇಲ್ದಂಡೆ ಯೋಜನೆಗೆ ಸರ್ಕಾರ ಬದ್ಧ


ಕೇಂದ್ರ ಸರ್ಕಾರವು 2023-24ನೇ ಸಾಲಿನ ಆಯವ್ಯಯದಲ್ಲಿ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಸಕ್ತ ಸರ್ಕಾರದ ತೀವ್ರ ಪ್ರಯತ್ನದ ಫಲವಾಗಿ 'ರಾಷ್ಟ್ರೀಯ ಯೋಜನೆ' ಮಾನ್ಯತೆ ದೊರೆಯುವ ಹಿನ್ನಲೆಯಲ್ಲಿ, ಕೇಂದ್ರ ಸರ್ಕಾರವು 5,300 ಕೋಟಿ ರೂ. ಸಹಾಯಧನ ಘೋಷಣೆ ಮಾಡಿದೆ. ಸದರಿ ಯೋಜನೆಯ ತೀವ್ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರವು ಬದ್ಧವಾಗಿದೆ ಬೊಮ್ಮಾಯಿ ತಿಳಿಸಿದ್ದಾರೆ.




ಎತ್ತಿನಗೊಳೆ ಕಾಮಗಾರಿ ಪೂರ್ಣ


ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಪ್ರಥಮ ಹಂತದ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು, ತುಮಕೂರು ಜಿಲ್ಲೆವರೆಗಿನ ಗುರುತ್ವ ಕಾಲುವೆ ಮತ್ತು ಫೀಡರ್ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಿ. 2023-24ರಲ್ಲಿ ನೀರು ಪೂರೈಸಲು ಉದ್ದೇಶಿಸಲಾಗಿದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರನ್ನು ಪೂರೈಸುವ ಕಾಮಗಾರಿಗಳ ಹಾಗೂ ಶ್ರೀನಿವಾಸಪುರ ಮತ್ತು ಕೋಲಾರ ಫೀಡರ್ ಚಾನೆಲ್‌ಗಳ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿಗಳನ್ನು ಪ್ರಾರಂಭಿಸಿ ಪೂರ್ಣಗೊಳಿಸಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ:Karnataka Budget 2023: ಕರ್ನಾಟಕ ರೈಲು ಜಾಲ ಅಭಿವೃದ್ಧಿಗೆ 7561 ಕೋಟಿ; ಯಾವ ಮಾರ್ಗಕ್ಕೆ ಎಷ್ಟು?


ಮೇಕೆದಾಟು ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ


ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ರಾಜ್ಯ ದಾವೆ ಹೂಡಿದೆ. ಇದನ್ನು ಶೀಘ್ರದಲ್ಲಿಯೇ ಇತ್ಯರ್ಥಪಡಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈ ಯೋಜನೆಗೆ ಅಗತ್ಯ ಅನುದಾನವನ್ನು ಕಲ್ಪಿಸಲಾಗುವುದು ಹೇಳಿದ್ದಾರೆ.


ಸಮತೋಲನಾ ಜಲಾಶಯ ನಿರ್ಮಾಣ


ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಿಸಲು ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ. ಸದರಿ ಯೋಜನೆಯು ಅಂತರ್ ರಾಜ್ಯ ಯೋಜನೆಯಾಗಿದ್ದು, ಈಗಾಗಲೇ ಆಂಧ್ರಪ್ರದೇಶ ಸರ್ಕಾರದೊಂದಿಗೆ ಸಭೆ ನಡೆಸಲಾಗಿದೆ. ಈ ವಿಷಯದ ಕುರಿತು ಆಂಧ್ರಪ್ರದೇಶ ಹಾಗೂ ಮುಖ್ಯಮಂತ್ರಿಗಳೊಂದಿಗೆ ಸಭೆ ಜರುಗಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು ಎಂದು ಬೊಮ್ಮಾಯಿ ಅವರು ತಿಳಿಸಿದ್ದಾರೆ.


ಒಟ್ಟಾರೆ ಸರ್ಕಾರ ಪ್ರಸಕ್ತ ವರ್ಷದಲ್ಲಿ ನೀರಾವರಿ ಕ್ಷೇತ್ರಕ್ಕೆ ಒಟ್ಟಾರೆ 25,000 ಕೋಟಿ ರೂ. ಹಾಗೂ ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 39,031 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Published by:Rajesha M B
First published: