Karnataka Fuel Tax: ಕರ್ನಾಟಕವೂ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿಮೆ ಮಾಡಲಿದೆಯೇ? ಸಿಎಂ ಮಾತಿನ ಅರ್ಥವೇನು?

ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

Karnataka Fuel Rates: ಕೇಂದ್ರ ಸರ್ಕಾರವು ಇಂಧನದ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ನಂತರ ಇಂತಹ ನಿರ್ಧಾರವನ್ನು ತೆಗೆದುಕೊಂಡ ಮೊದಲ ರಾಜ್ಯವಾಗಿದೆ ಕೇರಳ. ಹೀಗಾಗಿ ಕರ್ನಾಟಕ ರಾಜ್ಯದಲ್ಲಿಯೂ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡುವ ನಿರೀಕ್ಷೆ ಜನರಲ್ಲಿ ಆರಂಭವಾಗಿದೆ.

ಮುಂದೆ ಓದಿ ...
  • Share this:

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲೂ ತೈಲ ಸುಂಕ ಕಡಿಮೆ (Karnataka Tax On Petrol, Diesel ಮಾಡಲಾಗುತ್ತದೆ ಎಂಬ ನಿರೀಕ್ಷೆ ಹೆಚ್ಚಾಗಿದೆ. ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಕಡಿತ ಮಾಡುವ (Reduces Excise Duty On Fuel) ಪರಿಶೀಲನೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Karnataka CM Basavaraj Bommai) ತಿಳಿಸಿದ್ದಾರೆ. ಹೀಗಾಗಿ ಕರ್ನಾಟಕ ಸರ್ಕಾರವೂ ತೆರಿಗೆ ಕಡಿತ ಮಾಡುವ ಕುರಿತು ನಿರೀಕ್ಷೆ ಚಿಗುರಿದೆ. ಕರ್ನಾಟಕದ ನೆರೆಯ ರಾಜ್ಯ ಕೇರಳ ಸರ್ಕಾರ (Kerala Government) ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲಿನ ತೆರಿಗೆಯನ್ನು ಲೀಟರ್‌ಗೆ ಕ್ರಮವಾಗಿ ₹ 2.41 ಮತ್ತು ₹ 1.36 ರಷ್ಟು ಕಡಿತಗೊಳಿಸುವುದಾಗಿ ಘೋಷಿಸಿದೆ.


ಕೇಂದ್ರ ಸರ್ಕಾರವು ಇಂಧನದ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಕಡಿಮೆ ಮಾಡಿದ ನಂತರ ಇಂತಹ ನಿರ್ಧಾರವನ್ನು ತೆಗೆದುಕೊಂಡ ಮೊದಲ ರಾಜ್ಯವಾಗಿದೆ ಕೇರಳ. ಹೀಗಾಗಿ ಕರ್ನಾಟಕ ರಾಜ್ಯದಲ್ಲಿಯೂ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ ಮಾಡುವ ನಿರೀಕ್ಷೆ ಜನರಲ್ಲಿ ಆರಂಭವಾಗಿದೆ.


ಇಂದು ಬೆಲೆ ಇಳಿಕೆಯಾಗಿದೆ
ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ (Petrol Diesel Price) ದರಗಳು ಅತಿಶಯವಾದ ಏರಿಳಿತಗಳಿಲ್ಲದೆ ಸ್ಥಿರವಾಗಿತ್ತು. ಕಳೆದ ನಾಲ್ಕು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿತ್ತು.


ಇದನ್ನೂ ಓದಿ: Petrol-Diesel Price Today: ಗುಡ್​ನ್ಯೂಸ್! ಎಲ್ಲಾ ಜಿಲ್ಲೆಗಳಲ್ಲಿಯೂ ಪೆಟ್ರೋಲ್ ಬೆಲೆ ಭಾರೀ ಇಳಿಕೆ


ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಇಂಧನ ಬೆಲೆ ಸ್ಥಿರವಾಗಿತ್ತು. ಆದರೆ ಇಂದು ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಂಧನ ಬೆಲೆ ಇಳಿಕೆಯಾಗಿದೆ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಇಲ್ಲಿದೆ ಇಂದಿನ ಅಂಕಿ ಅಂಶ


ಬಾಗಲಕೋಟೆ - ರೂ. 102.43 (9.15 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (9.15 ಪೈಸೆಇಳಿಕೆ)
ಬೆಂಗಳೂರು ಗ್ರಾಮಾಂತರ - ರೂ. 102.00 (9.40 ಪೈಸೆ ಇಳಿಕೆ)
ಬೆಳಗಾವಿ - ರೂ. 102.56 (9.21 ಪೈಸೆ ಇಳಿಕೆ)
ಬಳ್ಳಾರಿ - ರೂ. 103.13 ( 9.60 ಪೈಸೆ ಇಳಿಕೆ)
ಬೀದರ್ - ರೂ. 102.47 (9.77 ಪೈಸೆ ಇಳಿಕೆ)
ವಿಜಯಪುರ - ರೂ. 101.94 (8.95 ಪೈಸೆ ಇಳಿಕೆ)
ಚಾಮರಾಜನಗರ - ರೂ. 101.88 (9.16 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 111.54 (9.14 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 103.21 (9.41 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 102.62 (10.46 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.13 (9.16 ಪೈಸೆ ಇಳಿಕೆ)
ದಾವಣಗೆರೆ - ರೂ. 104.09 (9.06 ಪೈಸೆ ಇಳಿಕೆ)
ಧಾರವಾಡ - ರೂ. 101.69 (9.27 ಪೈಸೆ ಇಳಿಕೆ)
ಗದಗ - ರೂ. 102.47 (9.41 ಪೈಸೆ ಇಳಿಕೆ)
ಕಲಬುರಗಿ - ರೂ. 102.24 (9.20 ಪೈಸೆ ಇಳಿಕೆ)
ಹಾಸನ - ರೂ. 102.28 (9.08 ಪೈಸೆ ಇಳಿಕೆ)
ಹಾವೇರಿ - ರೂ. 102.55 (9.16 ಪೈಸೆ ಇಳಿಕೆ)
ಕೊಡಗು - ರೂ. 102.69 (9.65 ಪೈಸೆ ಇಳಿಕೆ)
ಕೋಲಾರ - ರೂ. 102.31 (8.72 ಪೈಸೆ ಇಳಿಕೆ)
ಕೊಪ್ಪಳ - ರೂ. 102.83 (9.16 ಪೈಸೆ ಇಳಿಕೆ)
ಮಂಡ್ಯ - ರೂ. 102.01 (8.89 ಪೈಸೆ ಇಳಿಕೆ)
ಮೈಸೂರು - ರೂ. 101.46 (9.44 ಇಳಿಕೆ)
ರಾಯಚೂರು - ರೂ. 102.70 (9.16 ಇಳಿಕೆ)
ರಾಮನಗರ - ರೂ. 102.28 (9.12 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.42 (8.89 ಇಳಿಕೆ)
ತುಮಕೂರು - ರೂ. 102.76( 8.76 ಪೈಸೆ ಇಳಿಕೆ)
ಉಡುಪಿ - ರೂ. 101.44 (9.55 ಪೈಸೆ ಇಳಿಕೆ )
ಉತ್ತರ ಕನ್ನಡ - ರೂ. 104.14 (7.00 ರೂಪಾಯಿ ಇಳಿಕೆ)
ಯಾದಗಿರಿ - ರೂ. 102.39 (9.15 ಪೈಸೆ ಇಳಿಕೆ)


ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆಯ ವಿವರ ಇಲ್ಲಿದೆ
ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ ₹ 8 ಮತ್ತು ಡೀಸೆಲ್‌ಗೆ ₹ 6 ರಷ್ಟು ಕಡಿಮೆ ಮಾಡುತ್ತಿದ್ದೇವೆ. ಇದರಿಂದ ಪೆಟ್ರೋಲ್ ದರ  ಲೀಟರ್‌ಗೆ ₹9.5 ಮತ್ತು ಡೀಸೆಲ್‌ಗೆ ₹7 ಇಳಿಕೆ ಆಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಸುಮಾರು 9 ಕೋಟಿ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್‌ಗೆ (ಒಟ್ಟು 12 ಸಿಲಿಂಡರ್‌ಗಳವರೆಗೆ) 200 ರೂಪಾಯಿ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಶನಿವಾರ ಘೋಷಿಸಿದೆ.


ಇದನ್ನೂ ಓದಿ: LPG Cylinder Subsidy: ಎಲ್​ಪಿಜಿ ಸಿಲಿಂಡರ್​ಗೆ 200 ರೂ. ಸಬ್ಸಿಡಿ ಘೋಷಣೆ, ಕೇಂದ್ರದಿಂದ ಭಾರೀ ಕೊಡುಗೆ


ಇಂದಿನ ಪೆಟ್ರೋಲ್ ಡೀಸೆಲ್ ಬೆಲೆಯ ವಿವರ ಇಲ್ಲಿದೆ
ಉಕ್ರೇನ್ ಯುದ್ಧದ ಹಿನ್ನೆಲೆ ಜಾಗತಿಕ ಕಚ್ಚಾತೈಲಬೆಲೆ ಕೆಲವು ದಿನಗಳಿಂದ ಏರಿಕೆಯಾಗುತ್ತಲೇ ಇದೆ. 100ರ ಗಡಿ ದಾಟಿ ಹೊರಟಿರುವ ಇಂಧನ ಬೆಲೆಗಳು ವಾಹನ ಸವಾರರಿಗೆ ಬರೆ ಎಳೆದಂತಾಗಿದೆ. ಆದರೆ ಇದೀಗ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಡಿರುವ ಘೋಷಣೆಯಿಂದ ಸ್ವಲ್ಪ ನಿರಾಳವಾದಂತಾಗಿದೆ.

top videos
    First published: