Petrol And Diesel Price: ಇಂದು ಭಾನುವಾರ ನಿಮ್ಮ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 100.58 ರೂಪಾಯಿ ಆಗಿದೆ. ಹಾಗೆಯೇ ಒಂದು ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ಹಾಗಿದ್ರೆ ರಾಜ್ಯದ ಉಳಿದ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಓದಿ ಸಂಪೂರ್ಣ ಮಾಹಿತಿ...
Petrol And Diesel Price, Feb 20, 2022: ದೇಶದಲ್ಲಿ ಇಂಧನ (Fuel) ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಸಾಮಾನ್ಯವಾಗಿ ವ್ಯತ್ಯಾಸವಾಗುತ್ತಲೇ ಇರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳ (International Market) ಅನುಗುಣವಾಗಿಯೂ ಇಂಧನ ಬೆಲೆಯಲ್ಲಿ ಏರಿಕೆ, ಇಳಿಕೆ ಕಾಣುತ್ತಿದೆ. ಇದೇ ರೀತಿ, ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಮಾತ್ರ ಈ ವರ್ಷ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸ್ತುತ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇಂದು 1 ಲೀಟರ್ ಪೆಟ್ರೋಲ್ ಅನ್ನು 100.58 ರೂಪಾಯಿಗೆ ಮಾರಾಟ ಮಾಡುತ್ತಿದ್ದರೆ, ಡೀಸೆಲ್ ಅನ್ನು 85.01 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇದೇ ರೀತಿ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ..
ರಾಜ್ಯದ ವಿವಿಧ ನಗರಗಳಲ್ಲಿ ಇಂದು ಪೆಟ್ರೋಲ್ ಬೆಲೆ (ಪ್ರತಿ ಲೀ.ಗೆ):
ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ.
ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.
Published by:Annappa Achari
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ