ಈಗ ತಿಂಗಳ ಹಿಂದೆ ಇದ್ದ ರೀತಿ ಪೆಟ್ರೋಲ್ (Petrol And Diesel Price) ಹಾಗೂ ಡೀಸೆಲ್ ದರಗಳಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು (Fuel Price) ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಇನ್ನು ನಿನ್ನೆಗೆ ಹೋಲಿಸಿದರೆ ಇಂದು ಪ್ರತಿ ಲೀ. ಪೆಟ್ರೋಲ್ ಬೆಲೆ ಹಾವೇರಿಯಲ್ಲಿ 1 ರೂ. 3 ಪೈಸೆ ಇಳಿಕೆಯಾಗಿದ್ದನ್ನು ಗಮನಿಸಬಹುದು. ಅತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಕಚ್ಚಾ ತೈಲದ ಬೆಲೆ ಮೊದಲಿನ ಸ್ಥಿತಿಗೆ ಇಳಿಯುತ್ತಿಲ್ಲ, ಹಾಗಾಗಿ, ಬೆಲೆ ಏರಿಳಿತಗಳ ಈ ಕಣ್ಣು ಮುಚ್ಚಾಲೆ ಆಟ ನಡೆಯುತ್ತಲೇ ಇದೆ.
ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಬಹುತೇಕವಾಗಿ ಏರಿದ ಬೆಲೆಯಲ್ಲೇ ಸಿಗುತ್ತಿದೆ. ಇದರ ಪರಿಣಾಮವಾಗಿ ದೇಶದಲ್ಲಿ ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಕೆಯಾಗುತ್ತಿದ್ದು ಶ್ರೀಸಾಮಾನ್ಯನ ಕೈಸುಡುವಂತಾಗಿದೆ. ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಮುಕ್ತಾಯವಾಗುವ ಸೂಚನೆಯೂ ಕಾಣುತ್ತಿಲ್ಲ.
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.74, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.33, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಬಳಕೆದಾರರಿಗೆ ಹೊಸ ಆ್ಯಪ್! ಬಳಸೋದು ಕೂಡ ವೆರಿ ಸಿಂಪಲ್
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.62 (6 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.05 (5 ಪೈಸೆ ಏರಿಕೆ)
ಬೆಳಗಾವಿ - ರೂ. 102.36 (67 ಪೈಸೆ ಏರಿಕೆ)
ಬಳ್ಳಾರಿ - ರೂ. 103.70 (17 ಪೈಸೆ ಇಳಿಕೆ)
ಬೀದರ್ - ರೂ. 102.70 (23 ಪೈಸೆ ಏರಿಕೆ)
ವಿಜಯಪುರ - ರೂ. 101.96 (3 ಪೈಸೆ ಇಳಿಕೆ)
ಚಾಮರಾಜನಗರ - ರೂ. 101.88 (15 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 101.94 (25 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 103.06 (64 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.61 (44 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.81 (68 ಪೈಸೆ ಏರಿಕೆ)
ದಾವಣೆಗೆರೆ - ರೂ. 104.17 (7 ಪೈಸೆ ಏರಿಕೆ)
ಧಾರವಾಡ - ರೂ. 101.67 (29 ಪೈಸೆ ಇಳಿಕೆ)
ಗದಗ - ರೂ. 102.76 (54 ಪೈಸೆ ಏರಿಕೆ)
ಕಲಬುರಗಿ - ರೂ. 102.40 (74 ಪೈಸೆ ಏರಿಕೆ)
ಹಾಸನ - ರೂ. 101.94 (00)
ಹಾವೇರಿ - ರೂ. 101.88 (1 ರೂ. 3 ಪೈಸೆ ಇಳಿಕೆ)
ಕೊಡಗು - ರೂ. 103.36 (6 ಪೈಸೆ ಇಳಿಕೆ)
ಕೋಲಾರ - ರೂ. 101.87 (00)
ಕೊಪ್ಪಳ - ರೂ. 102.83 (12 ಪೈಸೆ ಇಳಿಕೆ)
ಮಂಡ್ಯ - ರೂ. 101.84 (00)
ಮೈಸೂರು - ರೂ. 101.69 (11 ಪೈಸೆ ಏರಿಕೆ)
ರಾಯಚೂರು - ರೂ. 102.71 (17 ಪೈಸೆ ಏರಿಕೆ)
ರಾಮನಗರ - ರೂ. 102.25 (15 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.48 (1 ಪೈಸೆ ಏರಿಕೆ)
ತುಮಕೂರು - ರೂ. 102.81 (59 ಪೈಸೆ ಏರಿಕೆ)
ಉಡುಪಿ - ರೂ. 101.43 (4 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 104.20 (00)
ಯಾದಗಿರಿ - ರೂ. 102.59 (33 ಪೈಸೆ ಏರಿಕೆ)
ಇದನ್ನೂ ಓದಿ: ಅಲ್ಪ ಇಳಿದ ಬಂಗಾರದ ದರ, ಯಥಾ ಸ್ಥಿತಿ ಕಾಯ್ದುಕೊಂಡ ಬೆಳ್ಳಿ! ಇಂದಿನ ಬೆಲೆ ಹೀಗಿದೆ ನೋಡಿ
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.53
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.99
ಬೆಳಗಾವಿ - ರೂ. 88.29
ಬಳ್ಳಾರಿ - ರೂ. 89.50
ಬೀದರ್ - ರೂ. 88.60
ವಿಜಯಪುರ - ರೂ. 87.94
ಚಾಮರಾಜನಗರ - ರೂ. 87.84
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.87
ಚಿತ್ರದುರ್ಗ - ರೂ. 89.20
ದಕ್ಷಿಣ ಕನ್ನಡ - ರೂ. 87.74
ದಾವಣಗೆರೆ - ರೂ. 89.70
ಧಾರವಾಡ - ರೂ. 87.67
ಗದಗ - ರೂ. 88.65
ಕಲಬುರಗಿ - ರೂ. 88.33
ಹಾಸನ - ರೂ. 87.69
ಹಾವೇರಿ - ರೂ. 87.86
ಕೊಡಗು - ರೂ. 88.99
ಕೋಲಾರ - ರೂ. 87.83
ಕೊಪ್ಪಳ - ರೂ. 88.72
ಮಂಡ್ಯ - ರೂ. 87.80
ಮೈಸೂರು - ರೂ. 87.67
ರಾಯಚೂರು - ರೂ. 88.63
ರಾಮನಗರ - ರೂ. 88.17
ಶಿವಮೊಗ್ಗ - ರೂ. 89.18
ತುಮಕೂರು - ರೂ. 88.68
ಉಡುಪಿ - ರೂ. 87.40
ಉತ್ತರ ಕನ್ನಡ - ರೂ. 89.81
ಯಾದಗಿರಿ - ರೂ. 88.50
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ