• Home
  • »
  • News
  • »
  • business
  • »
  • Karnataka Petrol Price Today: ಚಿತ್ರದುರ್ಗದಲ್ಲಿ 1 ರೂ ಏರಿಕೆಯಾದ ಪೆಟ್ರೋಲ್‌ ಬೆಲೆ, ವಿವಿಧ ಜಿಲ್ಲೆಗಳ ತೈಲ ದರ ಹೀಗಿದೆ

Karnataka Petrol Price Today: ಚಿತ್ರದುರ್ಗದಲ್ಲಿ 1 ರೂ ಏರಿಕೆಯಾದ ಪೆಟ್ರೋಲ್‌ ಬೆಲೆ, ವಿವಿಧ ಜಿಲ್ಲೆಗಳ ತೈಲ ದರ ಹೀಗಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Petrol and Diesel Price Today: ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ.

  • Trending Desk
  • Last Updated :
  • Karnataka, India
  • Share this:

ಪೆಟ್ರೋಲ್‌-ಡೀಸೆಲ್‌ (Petrol-Diesel) ದರಗಳು ಸರ್ಕಾರದ ಆದೇಶದ ಹೊರತಾಗಿ ಹೆಚ್ಚಿನ ಏರಿಕೆ-ಇಳಿಕೆ ಕಾಣುವುದಿಲ್ಲ, ಬದಲಿಗೆ ಸಣ್ಣ ವ್ಯತ್ಯಾಸಗಳು ನಡೆಯುತ್ತಿರುತ್ತವೆ. ಅಂತೆಯೇ ಇಂದೂ ಸಹ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ (District)  ಪೆಟ್ರೋಲ್-ಡೀಸೆಲ್ ದರಗಳಲ್ಲಿ ಮಾಮೂಲಿನಂತೆ ಕೆಲ ಪೈಸೆಗಳಷ್ಟು ವ್ಯತ್ಯಾಸ ಕಂಡು ಬಂದಿದೆ. ಇಂದು ಇಂಧನ ಸಹ ಚಿನ್ನ-ಬೆಳ್ಳಿಯಂತೆ ಆಗಿದ್ದು, ಅಪಾರವಾದ ಬೇಡಿಕೆ ಹಾಗೂ ಅವಶ್ಯಕತೆಯನ್ನು ಹೊಂದಿದೆ. ಕೈಗಾರಿಕೆಗಳಿಂದ ಹಿಡಿದು ವಾಹನ ಚಾಲನೆಯವರೆಗೆ ಇಂಧನದ (Fuel) ಅಗತ್ಯ ಆಗತ್ಯವಾಗಿದ್ದು ನಿತ್ಯವೂ ಇದರ ಬೆಲೆಗಳಲ್ಲಿ ಬದಲಾವಣೆಗಳಾಗುತ್ತಿರುತ್ತದೆ. ಜಾಗತಿಕವಾಗಿ ಉಂಟಾಗುವ ಕಚ್ಚಾ ತೈಲದ ಬೆಲೆಗಳಲ್ಲಿನ ವ್ಯತ್ಯಾಸದಿಂದಾಗಿಯೇ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಪ್ರಭಾವಿತವಾಗುತ್ತಿರುತ್ತವೆ ಎಂಬುದರಲ್ಲಿ ಸಂಶಯವಿಲ್ಲ . ಅದಾಗ್ಯೂ ಇತರೆ ಜಾಗತಿಕ ಕಾರಣಗಳೂ ಸಹ ಇದರ ಬೆಲೆಗಳ ಮೇಲೆ ಪ್ರಭಾವ ಬೀರುತ್ತಿರುತ್ತವೆ.


ಕೆಲ ಸಮಯದ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆ ಗಗನಕ್ಕೇರಿದ್ದವು. ಆ ಸಮಯದಲ್ಲಿ ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು. ಆದರೆ ಪರಿಸ್ಥಿತಿ ಇಂದು ಹಾಗಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಅಲ್ಪ ಸ್ವಲ್ಪ ವ್ಯತ್ಯಾಸಗಳೊಂದಿಗೆ ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಇಂದು ಗಮನಿಸಬಹುದು.


ಮಹಾನಗರಗಳಲ್ಲಿ ಹೇಗಿದೆ ದರ?


ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.68 (2 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.01 (43 ಪೈಸೆ ಏರಿಕೆ)
ಬೆಳಗಾವಿ - ರೂ. 102.13 (34 ಪೈಸೆ ಇಳಿಕೆ)
ಬಳ್ಳಾರಿ - ರೂ. 103.78 (49 ಪೈಸೆ ಏರಿಕೆ)
ಬೀದರ್ - ರೂ. 102.28 (24 ಪೈಸೆ ಇಳಿಕೆ)
ವಿಜಯಪುರ - ರೂ. 102.12 (12 ಪೈಸೆ ಇಳಿಕೆ)
ಚಾಮರಾಜನಗರ - ರೂ. 102.10 (00)
ಚಿಕ್ಕಬಳ್ಳಾಪುರ - ರೂ. 101.94 (55 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 103.27 (5 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 104.62 (1 ರೂ. 15 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.13 (28 ಪೈಸೆ ಇಳಿಕೆ)


ಇದನ್ನೂ ಓದಿ: ಟಿಶ್ಯೂ ಕಲ್ಚರ್ ಟೆಕ್ನಿಕ್​ನಲ್ಲಿ ಬಾಳೆ ಗಿಡ ತಯಾರಿಸಿ ಲಕ್ಷಗಟ್ಟಲೆ ಸಂಪಾದಿಸಿ!


ದಾವಣಗೆರೆ - ರೂ. 103.67 (37 ಪೈಸೆ ಇಳಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.25 (28 ಪೈಸೆ ಇಳಿಕೆ)
ಕಲಬುರಗಿ - ರೂ. 101.71 (31 ಪೈಸೆ ಏರಿಕೆ)
ಹಾಸನ - ರೂ. 102.34 (44 ಪೈಸೆ ಏರಿಕೆ)
ಹಾವೇರಿ - ರೂ. 102.85 (27 ಪೈಸೆ ಏರಿಕೆ)
ಕೊಡಗು - ರೂ. 103.11 (36 ಪೈಸೆ ಇಳಿಕೆ)
ಕೋಲಾರ - ರೂ. 101.81 (17 ಪೈಸೆ ಏರಿಕೆ)
ಕೊಪ್ಪಳ - ರೂ. 103.05 (2 ಪೈಸೆ ಏರಿಕೆ)
ಮಂಡ್ಯ - ರೂ. 101.61 (62 ಪೈಸೆ ಇಳಿಕೆ)
ಮೈಸೂರು - ರೂ. 101.50 (42 ಪೈಸೆ ಇಳಿಕೆ)
ರಾಯಚೂರು - ರೂ. 101.84 (99 ಪೈಸೆ ಇಳಿಕೆ)
ರಾಮನಗರ - ರೂ.102.40 (15 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.43 (2 ಪೈಸೆ ಇಳಿಕೆ)
ತುಮಕೂರು - ರೂ. 102.45 (00)
ಉಡುಪಿ - ರೂ. 101.44 (21 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 102.49 (27 ಪೈಸೆ ಏರಿಕೆ)
ಯಾದಗಿರಿ - ರೂ. 102.43 (00)


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.59
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.09
ಬಳ್ಳಾರಿ - ರೂ. 89.58
ಬೀದರ್ - ರೂ. 88.23
ವಿಜಯಪುರ - ರೂ. 88.07
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.99
ಚಿತ್ರದುರ್ಗ - ರೂ. 90.15
ದಕ್ಷಿಣ ಕನ್ನಡ - ರೂ. 87.13


ಇದನ್ನೂ ಓದಿ: ಹೀಗಿದೆ ಇಂದಿನ ಚಿನ್ನ-ಬೆಳ್ಳಿ ದರ: ಗ್ರಾಹಕರಿಗೆ ನಿರಾಳ


ದಾವಣಗೆರೆ - ರೂ. 89.29
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.71
ಹಾಸನ - ರೂ. 88.09
ಹಾವೇರಿ - ರೂ. 88.74
ಕೊಡಗು - ರೂ. 88.75
ಕೋಲಾರ - ರೂ. 87.77
ಕೊಪ್ಪಳ - ರೂ. 88.91
ಮಂಡ್ಯ - ರೂ. 87.59
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.31
ಶಿವಮೊಗ್ಗ - 89.15
ತುಮಕೂರು - ರೂ. 88.36
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 88.36
ಯಾದಗಿರಿ - ರೂ. 88.36

Published by:Sandhya M
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು