• Home
  • »
  • News
  • »
  • business
  • »
  • Karnataka Petrol Price: ಹಲವೆಡೆ ಯಥಾಸ್ಥಿತಿ ಕಾಯ್ದುಕೊಂಡ ತೈಲ ಬೆಲೆ, ಇಂದಿನ ಪೆಟ್ರೋಲ್ ದರ ಇಲ್ಲಿದೆ

Karnataka Petrol Price: ಹಲವೆಡೆ ಯಥಾಸ್ಥಿತಿ ಕಾಯ್ದುಕೊಂಡ ತೈಲ ಬೆಲೆ, ಇಂದಿನ ಪೆಟ್ರೋಲ್ ದರ ಇಲ್ಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Petrol and Diesel Price Today: ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ-ತೈಲದ ಬೆಲೆ ಏರಿಳಿತಗಳು ನಿರಂತರವಾಗಿದ್ದು ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಳಿತವಾಗುವುದು ಸಹಜವೇ ಆಗಿದೆ.

  • News18 Kannada
  • Last Updated :
  • New Delhi, India
  • Share this:

ಇಂದು ರಾಜ್ಯದಲ್ಲಿ ಬಹುತೇಕ ಎಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ (Petrol Diesel Price) ದೊಡ್ಡ ಪ್ರಮಾಣದ ಏರಿಕೆ ಅಥವಾ ಇಳಿಕೆಯಾಗಲಿ ಕಂಡುಬಂದಿಲ್ಲ. ಆದರೂ ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ಒಂದಿಷ್ಟು ಪೈಸೆಗಳಷ್ಟು ಏರಿಳಿತಗಳನ್ನು ಕಾಣಬಹುದು. ಹಿಂದೊಮ್ಮೆ ಅತಿರೇಕಕ್ಕೆ ಹೋಗಿದ್ದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆಯಿಂದಾಗಿ ಪೆಟ್ರೋಲ್-ಡೀಸೆಲ್ ಬೆಲೆಗಳು ಗಗನಕ್ಕೇರಿದ್ದವು, ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು. ಆದರೆ ಪರಿಸ್ಥಿತಿ ಇಂದು ಹಾಗಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು (Oil Price) ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದರೂ, ಬೆಲೆ ಏರಿಳಿತಗಳ ಈ ಕಣ್ಣು ಮುಚ್ಚಾಲೆ ಆಟ ನಡೆಯುತ್ತಲೇ ಇರುತ್ತದೆ.


ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ-ತೈಲದ ಬೆಲೆ ಏರಿಳಿತಗಳು ನಿರಂತರವಾಗಿದ್ದು ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಳಿತವಾಗುವುದು ಸಹಜವೇ ಆಗಿದೆ. ಅಷ್ಟಕ್ಕೂ ಆಗಾಗ ಈ ಇಂಧನ ಬೆಲೆಗಳು ಎಂಬುದು ಶ್ರೀಸಾಮಾನ್ಯರ ಕೈಸುಡುವಂತೆ ಮಾಡುವುದು ಸುಳ್ಳಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಹಾಗೆ ಮುಂದುವರೆದಿದ್ದು ಭವಿಷ್ಯದಲ್ಲಿ ಇಂಧನದ ಬೆಲೆಗಳು ಏನಾಗುವುದೋ ಕಾದು ನೋಡಬೇಕು.


ಬೆಂಗಳೂರಲ್ಲಿ ಎಷ್ಟಿದೆ ಪೆಟ್ರೊಲ್ ದರ?
ಇನ್ನು ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.50 (20 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.1 (43 ಪೈಸೆ ಏರಿಕೆ)
ಬೆಳಗಾವಿ - ರೂ. 102.43 (23 ಪೈಸೆ ಇಳಿಕೆ)
ಬಳ್ಳಾರಿ - ರೂ. 102.89 (1.31 ಪೈಸೆ ಇಳಿಕೆ)
ಬೀದರ್ - ರೂ. 103.54 (92 ಪೈಸೆ ಏರಿಕೆ)
ವಿಜಯಪುರ - ರೂ. 102.24 (00)
ಚಾಮರಾಜನಗರ - ರೂ. 102.79 (69 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 102.40 (46 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 103.65 (33 ಪೈಸೆ ಏರಿಕೆ)
ಚಿತ್ರದುರ್ಗ - ರೂ. 103.42 (45 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101. 47 (21 ಪೈಸೆ ಏರಿಕೆ)
ದಾವಣಗೆರೆ - ರೂ. 104.16 (31 ಪೈಸೆ ಏರಿಕೆ)
ಧಾರವಾಡ - ರೂ. 101.85 (14 ಪೈಸೆ ಏರಿಕೆ)
ಗದಗ - ರೂ. 102.19 (06 ಪೈಸೆ ಇಳಿಕೆ)
ಕಲಬುರಗಿ - ರೂ. 102.14 (43 ಪೈಸೆ ಏರಿಕೆ)
ಹಾಸನ - ರೂ. 101.88 (12 ಪೈಸೆ ಇಳಿಕೆ)
ಹಾವೇರಿ - ರೂ. 101.91 (50 ಪೈಸೆ ಇಳಿಕೆ)
ಕೊಡಗು - ರೂ. 103.56 (00)
ಕೋಲಾರ - ರೂ. 102.14 (50 ಪೈಸೆ ಏರಿಕೆ)
ಕೊಪ್ಪಳ - ರೂ. 103.10 (8 ಪೈಸೆ ಏರಿಕೆ)
ಮಂಡ್ಯ - ರೂ. 102.04 (31 ಪೈಸೆ ಏರಿಕೆ)
ಮೈಸೂರು - ರೂ. 101.75 (25 ಪೈಸೆ ಏರಿಕೆ)
ರಾಯಚೂರು - ರೂ. 101.84 (99 ಪೈಸೆ ಇಳಿಕೆ)
ರಾಮನಗರ - ರೂ. 102.25 (15 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.43 (2 ಪೈಸೆ ಇಳಿಕೆ)
ತುಮಕೂರು - ರೂ. 103.45 (34 ಪೈಸೆ ಏರಿಕೆ)
ಉಡುಪಿ - ರೂ. 101.39 (16 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 102.14 (23 ಪೈಸೆ ಇಳಿಕೆ)
ಯಾದಗಿರಿ - ರೂ. 102.79 (36 ಪೈಸೆ ಏರಿಕೆ)


ಇದನ್ನೂ ಓದಿ: ಕಾಸ್ಮೆಟಿಕ್ಸ್​​ ಚಿಕಿತ್ಸೆಗೂ ಇನ್ಶೂರೆನ್ಸ್​ ಕ್ಲೈಮ್ ಆಗುತ್ತಾ? ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.42
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.36
ಬಳ್ಳಾರಿ - ರೂ. 89.77
ಬೀದರ್ - ರೂ. 88.75
ವಿಜಯಪುರ - ರೂ. 88.19
ಚಾಮರಾಜನಗರ - ರೂ. 88.66
ಚಿಕ್ಕಬಳ್ಳಾಪುರ - ರೂ. 88.31
ಚಿಕ್ಕಮಗಳೂರು - ರೂ. 89.33
ಚಿತ್ರದುರ್ಗ - ರೂ. 89.10
ದಕ್ಷಿಣ ಕನ್ನಡ - ರೂ. 87.43
ದಾವಣಗೆರೆ - ರೂ. 89.79
ಧಾರವಾಡ - ರೂ. 87.83
ಗದಗ - ರೂ. 88.14
ಕಲಬುರಗಿ - ರೂ. 88.10
ಹಾಸನ - ರೂ. 87.67
ಹಾವೇರಿ - ರೂ. 88.08
ಕೊಡಗು - ರೂ. 89.20
ಕೋಲಾರ - ರೂ. 88.08
ಕೊಪ್ಪಳ - ರೂ. 88.96


ಇದನ್ನೂ ಓದಿ: ನಟನೆ ಮಾತ್ರ ಅಲ್ಲ ಬ್ಯುಸಿನೆಸ್ ಮೂಲಕವೂ ಲಾಭ ಗಳಿಸುತ್ತಿರುವ ಬಾಲವುಡ್​ನ ಸ್ಟಾರ್​ಗಳು!


ಮಂಡ್ಯ - ರೂ. 87.99
ಮೈಸೂರು - ರೂ. 87.72
ರಾಯಚೂರು - ರೂ. 87.84
ರಾಮನಗರ - ರೂ. 88.17
ಶಿವಮೊಗ್ಗ - 89.15
ತುಮಕೂರು - ರೂ. 89.06
ಉಡುಪಿ - ರೂ. 87.36
ಉತ್ತರ ಕನ್ನಡ - ರೂ. 88.099
ಯಾದಗಿರಿ - ರೂ. 88.68

Published by:Sandhya M
First published: