• Home
  • »
  • News
  • »
  • business
  • »
  • Petrol-Diesel Price Today: ಇಂದೇ ಟ್ಯಾಂಕ್ ತುಂಬಾ ಪೆಟ್ರೋಲ್ ತುಂಬಿಸ್ಬೇಕಾ ಬೇಡ್ವಾ?

Petrol-Diesel Price Today: ಇಂದೇ ಟ್ಯಾಂಕ್ ತುಂಬಾ ಪೆಟ್ರೋಲ್ ತುಂಬಿಸ್ಬೇಕಾ ಬೇಡ್ವಾ?

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು. ಆದರೆ ಪರಿಸ್ಥಿತಿ ಇಂದು ಹಾಗಿಲ್ಲ.

  • News18 Kannada
  • Last Updated :
  • Bangalore [Bangalore], India
  • Share this:

ಇಂದು ರಾಜ್ಯದಲ್ಲಿ ಬಹುತೇಕ ಎಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ (Petrol-Diesel Price Today) ದೊಡ್ಡ ಪ್ರಮಾಣದ ಏರಿಕೆ ಅಥವಾ ಇಳಿಕೆಯಾಗಲಿ ಕಂಡುಬಂದಿಲ್ಲ. ಆದರೂ ಬೆಂಗಳೂರು ಮಹಾನಗರದಲ್ಲಿ (Bengaluru Petrol-Diesel Price Today) ಇಂದು ಪೆಟ್ರೋಲ್ ಬೆಲೆಯಲ್ಲಿ ನಿನ್ನೆಗೆ ಹೋಲಿಸಿದರೆ ಐದು ಪೈಸೆಗಳಷ್ಟು ಕಡಿಮೆಯಾಗಿದ್ದು ಮುಂಚಿದ್ದ ಸ್ಥಿರ ಬೆಲೆಗೆ ಬಂದಿದೆ. ಮಿಕ್ಕಂತೆ ಎಲ್ಲೆಡೆ ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದೆ. ಹಿಂದೊಮ್ಮೆ ಅತಿರೇಕಕ್ಕೆ ಹೋಗಿದ್ದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆಯಿಂದಾಗಿ ಪೆಟ್ರೋಲ್-ಡೀಸೆಲ್ ಬೆಲೆಗಳು ಗಗನಕ್ಕೇರಿದ್ದವು, ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು. ಆದರೆ ಪರಿಸ್ಥಿತಿ ಇಂದು ಹಾಗಿಲ್ಲ.


ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದರೂ ಬೆಲೆ ಏರಿಳಿತಗಳ ಈ ಕಣ್ಣು ಮುಚ್ಚಾಲೆ ಆಟ ನಡೆಯುತ್ತಲೇ ಇರುತ್ತದೆ.


ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ
ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ-ತೈಲದ ಬೆಲೆ ಏರಿಳಿತಗಳು ನಿರಂತರವಾಗಿದ್ದು ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಳಿತವಾಗುವುದು ಸಹಜವೇ ಆಗಿದೆ. ಅಷ್ಟಕ್ಕೂ ಆಗಾಗ ಈ ಇಂಧನ ಬೆಲೆಗಳು ಎಂಬುದು ಶ್ರೀಸಾಮಾನ್ಯನ ಕೈಸುಡುವಂತೆ ಮಾಡುವುದು ಸುಳ್ಳಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಹಾಗೆ ಮುಂದುವರೆದಿದ್ದು ಭವಿಷ್ಯದಲ್ಲಿ ಇಂಧನದ ಬೆಲೆಗಳು ಏನಾಗುವುದೋ ಕಾದು ನೋಡಬೇಕು.


ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ ಎಷ್ಟಿದೆ?
ಇನ್ನು ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಇದನ್ನೂ ಓದಿ: Tiger Dance: ನೀವೂ ಹುಲಿ ವೇಷ ಹಾಕಿ! ಇಲ್ಲಿದೆ ಚಾನ್ಸ್!


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ. 102.49 (00)
ಬೆಂಗಳೂರು - ರೂ. 101.94 (5 ಪೈಸೆ ಇಳಿಕೆ)
ಬೆಂಗಳೂರು ಗ್ರಾಮಾಂತರ - ರೂ. 102 (42 ಪೈಸೆ ಏರಿಕೆ)
ಬೆಳಗಾವಿ - ರೂ. 102.39 (63 ಪೈಸೆ ಏರಿಕೆ)
ಬಳ್ಳಾರಿ - ರೂ. 103.90 (69 ಪೈಸೆ ಏರಿಕೆ)
ಬೀದರ್ - ರೂ. 102.52 (40 ಪೈಸೆ ಇಳಿಕೆ)
ವಿಜಯಪುರ - ರೂ. 101.72 (21 ಪೈಸೆ ಇಳಿಕೆ)
ಚಾಮರಾಜನಗರ - ರೂ. 101.93 (00)
ಚಿಕ್ಕಬಳ್ಳಾಪುರ - ರೂ. 102.40 (40 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 102.92 (29 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.11 (00)
ದಕ್ಷಿಣ ಕನ್ನಡ - ರೂ. 101.21 (8 ಪೈಸೆ ಏರಿಕೆ)
ದಾವಣಗೆರೆ - ರೂ. 104.11 (9 ಪೈಸೆ ಇಳಿಕೆ)
ಧಾರವಾಡ - ರೂ. 101.71 (9 ಪೈಸೆ ಇಳಿಕೆ)
ಗದಗ - ರೂ. 102.19 (00)
ಕಲಬುರಗಿ - ರೂ. 102.29 (58 ಪೈಸೆ ಏರಿಕೆ)
ಹಾಸನ - ರೂ. 101.88 (44 ಪೈಸೆ ಇಳಿಕೆ)
ಹಾವೇರಿ - ರೂ. 102.58 (38 ಪೈಸೆ ಇಳಿಕೆ)
ಕೊಡಗು - ರೂ. 103.32 (63 ಪೈಸೆ ಏರಿಕೆ)
ಕೋಲಾರ - ರೂ. 101.81 (6 ಪೈಸೆ ಇಳಿಕೆ)
ಕೊಪ್ಪಳ - ರೂ. 102.86 (00)
ಮಂಡ್ಯ - ರೂ. 102.05 (22 ಪೈಸೆ ಏರಿಕೆ)
ಮೈಸೂರು - ರೂ. 101.72 (3 ಪೈಸೆ ಇಳಿಕೆ)
ರಾಯಚೂರು - ರೂ. 101.97 (00)
ರಾಮನಗರ - ರೂ. 102.28 (11 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.78 (35 ಪೈಸೆ ಏರಿಕೆ)
ತುಮಕೂರು - ರೂ. 102.45 (2 ಪೈಸೆ ಇಳಿಕೆ)
ಉಡುಪಿ - ರೂ. 101.92 (00)
ಉತ್ತರ ಕನ್ನಡ - ರೂ. 102.14 (87 ಪೈಸೆ ಇಳಿಕೆ)
ಯಾದಗಿರಿ - ರೂ. 102.79 (35 ಪೈಸೆ ಏರಿಕೆ)


ಇದನ್ನೂ ಓದಿ: KSRTC ದೀಪಾವಳಿ ಆಪರ್! ಶುರುವಾಗಲಿದೆ ಭರ್ಜರಿ ಟೂರ್ ಪ್ಯಾಕೇಜ್


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.41
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.33
ಬಳ್ಳಾರಿ - ರೂ. 89.68
ಬೀದರ್ - ರೂ. 88.44
ವಿಜಯಪುರ - ರೂ. 87.71
ಚಾಮರಾಜನಗರ - ರೂ. 87.88
ಚಿಕ್ಕಬಳ್ಳಾಪುರ - ರೂ. 88.31
ಚಿಕ್ಕಮಗಳೂರು - ರೂ. 88.48
ಚಿತ್ರದುರ್ಗ - ರೂ. 88.79
ದಕ್ಷಿಣ ಕನ್ನಡ - ರೂ. 87.20
ದಾವಣಗೆರೆ - ರೂ. 89.68
ಧಾರವಾಡ - ರೂ. 87.71
ಗದಗ - ರೂ. 88.14
ಕಲಬುರಗಿ - ರೂ. 88.24
ಹಾಸನ - ರೂ. 87.67
ಹಾವೇರಿ - ರೂ. 88.49
ಕೊಡಗು - ರೂ. 88.98
ಕೋಲಾರ - ರೂ. 87.77
ಕೊಪ್ಪಳ - ರೂ. 88.75
ಮಂಡ್ಯ - ರೂ. 87.99
ಮೈಸೂರು - ರೂ. 87.70
ರಾಯಚೂರು - ರೂ. 87.96
ರಾಮನಗರ - ರೂ. 88.20
ಶಿವಮೊಗ್ಗ - 89.45
ತುಮಕೂರು - ರೂ. 88.36
ಉಡುಪಿ - ರೂ. 87.84
ಉತ್ತರ ಕನ್ನಡ - ರೂ. 88.09
ಯಾದಗಿರಿ - ರೂ. 88.68

Published by:ಗುರುಗಣೇಶ ಡಬ್ಗುಳಿ
First published: