ವಾರಾಂತ್ಯದ ನಂತರ ಇಂದು ರಾಜ್ಯ ದ ಬಹುತೇಕ ನಗರಗಳಲ್ಲಿ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ದರಗಳಲ್ಲಿ ಕೆಲ ಪೈಸೆಗಳಷ್ಟು ಇಳಿಕೆಯಾಗಿರುವುದನ್ನು ಗಮನಿಸಬಹುದು. ಸಾಮಾನ್ಯವಾಗಿ ಇಂಧನ ಬೆಲೆ (Fuel Price) ಗಳ ಏರಿಳಿತಗಳಿಂದಾಗಿ ನಿತ್ಯವೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಉಂಟಾಗುತ್ತಲೇ ಇರುತ್ತದೆ. ಪ್ರಸ್ತುತ ಇಂಧನ ಎಂಬುದು ಸಾಕಷ್ಟು ಮೌಲ್ಯಯುತವಾಗಿದ್ದು ಹೆಚ್ಚಿನ ಬೇಡಿಕೆ ಹಾಗೂ ಅವಶ್ಯಕತೆಯನ್ನು ಅದು ಹೊಂದಿದೆ. ಕೈಗಾರಿಕೆಗಳಿಂದ ಹಿಡಿದು ವಾಹನ ಚಾಲನೆ ಹಾಗೂ ಹಲವು ಯಂತ್ರಗಳಿಗೆ ಇಂಧನದ ಅಗತ್ಯ ಅವಶ್ಯಕವಾಗಿದೆ.
ಇನ್ನು, ಜಾಗತಿಕವಾಗಿ ಉಂಟಾಗುವ ಕಚ್ಚಾ ತೈಲದ ಬೆಲೆಗಳಲ್ಲಿನ ವ್ಯತ್ಯಾಸದಿಂದಾಗಿಯೇ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಪ್ರಭಾವಿತವಾಗುತ್ತಿರುತ್ತವೆ ಎಂಬುದರಲ್ಲಿ ಸಂಶಯವಿಲ್ಲ . ಅದಾಗ್ಯೂ ಇತರೆ ಜಾಗತಿಕ ಕಾರಣಗಳೂ ಸಹ ಇದರ ಬೆಲೆಗಳ ಮೇಲೆ ಪ್ರಭಾವ ಬೀರುತ್ತವೆ ಮತ್ತು ಅದರಿಂದಾಗಿ ಬೆಲೆಗಳಲ್ಲಿ ವ್ಯತ್ಯಾಸ ಕಾಣಬಹುದು.
ಪೈಸೆಗಳಷ್ಟು ಕಡಿಮೆಯಾದ ಪೆಟ್ರೋಲ್ ಬೆಲೆ!
ಕೆಲ ಸಮಯದ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ ಬೆಲೆ ಗಗನಕ್ಕೇರಿದ್ದವು. ಆ ಸಮಯದಲ್ಲಿ ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು. ಆದರೆ ಪರಿಸ್ಥಿತಿ ಇಂದು ಹಾಗಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಅಲ್ಪ ಸ್ವಲ್ಪ ವ್ಯತ್ಯಾಸಗಳೊಂದಿಗೆ ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಇಂದು ಗಮನಿಸಬಹುದು.
ಇದನ್ನೂ ಓದಿ: ಮಾರುತಿ ಕಾರು ಖರೀದಿಸುವವರಿಗೆ ಬಿಗ್ ಶಾಕ್! ಇನ್ನೊಂದೇ ತಿಂಗಳು ಬಾಕಿ, ಬೇಗ ಡಿಸೈಡ್ ಮಾಡಿ
ಬೆಂಗಳೂರಿನಲ್ಲಿಲ್ಲ ಯಾವುದೇ ಬದಲಾವಣೆ!
ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.48 (2 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.58 (43 ಪೈಸೆ ಇಳಿಕೆ)
ಬೆಳಗಾವಿ - ರೂ. 102.59 (62 ಪೈಸೆ ಏರಿಕೆ)
ಬಳ್ಳಾರಿ - ರೂ. 103.61 (29 ಪೈಸೆ ಇಳಿಕೆ)
ಬೀದರ್ - ರೂ. 102.28 (24 ಪೈಸೆ ಇಳಿಕೆ)
ವಿಜಯಪುರ - ರೂ. 101.72 (40 ಪೈಸೆ ಇಳಿಕೆ)
ಚಾಮರಾಜನಗರ - ರೂ. 102.10 (3 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 101.94 (00)
ಚಿಕ್ಕಮಗಳೂರು - ರೂ. 102.92 (40 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.11 (36 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.48 (35 ಪೈಸೆ ಏರಿಕೆ)
ದಾವಣಗೆರೆ - ರೂ. 103.35 (69 ಪೈಸೆ ಇಳಿಕೆ)
ಧಾರವಾಡ - ರೂ. 101.71 (00)
ಗದಗ - ರೂ. 102.38 (13 ಪೈಸೆ ಏರಿಕೆ)
ಕಲಬುರಗಿ - ರೂ. 102.44 (44 ಪೈಸೆ ಏರಿಕೆ)
ಹಾಸನ - ರೂ. 101.88 (00)
ಹಾವೇರಿ - ರೂ. 102.38 (3 ಪೈಸೆ ಇಳಿಕೆ)
ಕೊಡಗು - ರೂ. 103.28 (28 ಪೈಸೆ ಇಳಿಕೆ)
ಕೋಲಾರ - ರೂ. 101.81 (35 ಪೈಸೆ ಇಳಿಕೆ)
ಕೊಪ್ಪಳ - ರೂ. 102.86 (27 ಪೈಸೆ ಇಳಿಕೆ)
ಮಂಡ್ಯ - ರೂ. 101.94 (16 ಪೈಸೆ ಏರಿಕೆ)
ಮೈಸೂರು - ರೂ. 101.50 (00)
ರಾಯಚೂರು - ರೂ. 101.84 (45 ಪೈಸೆ ಇಳಿಕೆ)
ರಾಮನಗರ - ರೂ. 102.39 (1 ಪೈಸೆ ಇಳಿಕೆ)
ಶಿವಮೊಗ್ಗ - ರೂ. 102.76 (69 ಪೈಸೆ ಇಳಿಕೆ)
ತುಮಕೂರು - ರೂ. 102.81 (36 ಪೈಸೆ ಏರಿಕೆ)
ಉಡುಪಿ - ರೂ. 102.02 (58 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 103.79 (50 ಪೈಸೆ ಏರಿಕೆ)
ಯಾದಗಿರಿ - ರೂ. 102.43 (00)
ಇದನ್ನೂ ಓದಿ: ಭಾರತದ ಟಾಪ್ 5 ಸ್ಕೂಟರ್ಗಳಿವು! ಮೈಲೇಜ್ ಬಂಪರ್, ಲುಕ್ ಮಾತ್ರ ಸೂಪರ್!
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.40
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.50
ಬಳ್ಳಾರಿ - ರೂ. 89.42
ಬೀದರ್ - ರೂ. 88.23
ವಿಜಯಪುರ - ರೂ. 87.71
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 88.48
ಚಿತ್ರದುರ್ಗ - ರೂ. 88.79
ದಕ್ಷಿಣ ಕನ್ನಡ - ರೂ. 87.44
ದಾವಣಗೆರೆ - ರೂ. 89
ಧಾರವಾಡ - ರೂ. 87.71
ಗದಗ - ರೂ. 88.31
ಕಲಬುರಗಿ - ರೂ. 88.37
ಹಾಸನ - ರೂ. 87.67
ಹಾವೇರಿ - ರೂ. 88.31
ಕೊಡಗು - ರೂ. 88.94
ಕೋಲಾರ - ರೂ. 87.77
ಕೊಪ್ಪಳ - ರೂ. 88.75
ಮಂಡ್ಯ - ರೂ. 87.89
ಮೈಸೂರು - ರೂ. 87.49
ರಾಯಚೂರು - ರೂ. 87.84
ರಾಮನಗರ - ರೂ. 88.29
ಶಿವಮೊಗ್ಗ - 88.54
ತುಮಕೂರು - ರೂ. 88.68
ಉಡುಪಿ - ರೂ. 87.93
ಉತ್ತರ ಕನ್ನಡ - ರೂ. 89.52
ಯಾದಗಿರಿ - ರೂ. 88.36
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ