Petrol-Diesel Price Today: ಪೆಟ್ರೋಲ್-ಡಿಸೇಲ್ ದರ ಇಳಿಯುತ್ತಾ? ಇಂದಿನ ಬೆಲೆ ಹೀಗಿದೆ
ಭಾರತದಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ 37 ದಿನಗಳಿಂದ ಇಂಧನ ದರ ಸ್ಥಿರವಾಗಿದೆ. ಮುಂಬೈ ನಗರದಲ್ಲಿ ಪೆಟ್ರೋಲ್ ದರ 120 ರೂ ಪ್ರತಿ ಲೀಟರ್ ದಾಟಿದೆ. ರಾಜ್ಯದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಹೇಗಿದೆ ನೋಡಿ
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಕಳೆದ ಮಾರ್ಚ್ 22ರಂದು ಪೆಟ್ರೋಲ್ ಹಾಗೂ ಡೀಸೆಲ್ (Petrol -Diesel) ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು.100ರ ಗಡಿ ದಾಟಿ ಹೊರಟಿರುವ ಇಂಧನ ಬೆಲೆಗಳು ವಾಹನ ಸವಾರರಿಗೆ ಬರೆ ಎಳೆದಂತಾಗಿದೆ. ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಇತ್ತೀಚೆಗೆ ಬದಲಾಗುತ್ತಿರುವ ಪೆಟ್ರೋಲ್ ದರಗಳಿಂದ ಗ್ರಾಹಕರಲ್ಲಿ (Customers) ಗೊಂದಲಗಳಿದ್ದು, ಈ ನಿಟ್ಟಿನಲ್ಲಿ ಒಂದೇ ಸೂರಿನಡಿ ಎಲ್ಲಾ ಮಾಹಿತಿಗಳನ್ನು ನೀಡುವ ಉದ್ದೇಶದಿಂದ ದೇಶದಲ್ಲಿ ಇಂಧನ ಬೆಲೆ ಎಲ್ಲೆಲ್ಲಿ ಎಷ್ಟಿದೆ ಎಂಬುದರ ಬಗ್ಗೆ ಒಂದು ಸಮಗ್ರ ಮಾಹಿತಿ ಇಲ್ಲಿದೆ. ಪೆಟ್ರೋಲ್, ಡೀಸೆಲ್ ಕೊಂಚ ಮಟ್ಟಿಗೆ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಕಳೆದ ಕೆಲ ದಿನಗಳಿಂದ ಭಾರತದಲ್ಲಿ (India) ಬೆಂಗಳೂರು (Bengaluru) ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರಗಳು ಅತಿಶಯವಾದ ಏರಿಳಿತಗಳಿಲ್ಲದೆ ಸ್ಥಿರವಾಗಿವೆ. ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಇಂಧನ ಬೆಲೆ ಸ್ಥಿರವಾಗಿದೆ. ಜಾಗತಿಕವಾಗಿ ಎಲ್ಲಾ ಉತ್ಪನ್ನಗಳ ಬೆಲೆ ಗಗನಕ್ಕೇರಿವೆ.
ಸಾಮಾಜಿಕ, ಆರ್ಥಿಕ, ಅಂತಾರಾಷ್ಟ್ರೀಯ ಸಮಾಚಾರಗಳು ಇಂಧನದ ಬೆಲೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಈ ಬೆಲೆ ಏರಿಕೆ ಶ್ರೀಸಾಮಾನ್ಯರ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ 37 ದಿನಗಳಿಂದ ಇಂಧನ ದರ ಸ್ಥಿರವಾಗಿದೆ. ಮುಂಬೈ ನಗರದಲ್ಲಿ ಪೆಟ್ರೋಲ್ ದರ 120 ರೂ ಪ್ರತಿ ಲೀಟರ್ ದಾಟಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ ನಿನ್ನೆಯಷ್ಟೇ ಇಂದೂ ಸಹ ಪೆಟ್ರೋಲ್ ಬೆಲೆ ಮುಂದುವರೆದಿದೆ. ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 111.09 ಆಗಿದ್ದರೆ ಡೀಸೆಲ್ ದರ ರೂ. 94.79 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.110.85, ರೂ. 120.51, ರೂ. 115.12 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 100.94, ರೂ. 104.77, ರೂ. 99.83 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 105.41 ಆಗಿದ್ದರೆ ಡೀಸೆಲ್ ದರ ರೂ. 96.67 ಆಗಿದೆ.