Petrol-Diesel Price Today: 10 ಜಿಲ್ಲೆಯಲ್ಲಿ ಮಾತ್ರ ಪೆಟ್ರೋಲ್ ಬೆಲೆ ಇಳಿಕೆ, ಲಿಸ್ಟ್​​ನಲ್ಲಿ ನಿಮ್ಮ ಊರಿದೆಯಾ?

Petrol-Diesel Price: ಪೆಟ್ರೋಲ್-ಡೀಸೆಲ್ ಬೆಲೆ ಇಂದು ಹೇಗಿದೆ? ಸಂಡೇ ಫನ್​ ಡೇ ಆಗಿಲ್ಲ, 10 ಜಿಲ್ಲೆ ಬಿಟ್ಟು ಮತ್ತೆಲ್ಲ ಕಡೆ ಬೆಲೆ ಏರಿಕೆಯಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಇಂದು ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ (Petrol Diesel Price) ಗಮನಾರ್ಹವಾದ ಏರಿಕೆ ಅಥವಾ ಇಳಿಕೆ ಕಂಡುಬಂದಿಲ್ಲ. ಆದರೂ ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಶಿವಮೊಗ್ಗದಲ್ಲಿ (Shivamogga) ಪೆಟ್ರೋಲ್ ಬೆಲೆ 1 ರೂ. 2 ಪೈಸೆಗಳಷ್ಟು ಇಳಿದಿದ್ದು ಮಿಕ್ಕೆಲ್ಲ ಕಡೆ ನಿತ್ಯದಂತೆ ಅಲ್ಪ ಏರಿಳಿತಗಳಿವೆ. ಹಿಂದೊಮ್ಮೆ ಅತಿರೇಕಕ್ಕೆ ಹೋಗಿದ್ದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ (Crude Oil) ಬೆಲೆ ಇದೀಗ ಮತ್ತೆ ನಿಧಾನವಾಗಿ ಸುಧಾರಿಸುತ್ತಿದೆ, ಹಾಗಾಗಿ, ಬೆಲೆ ಏರಿಳಿತಗಳ ಈ ಕಣ್ಣು ಮುಚ್ಚಾಲೆ ಆಟ ನಡೆಯುತ್ತಲೇ ಇರುತ್ತದೆ. ಅಷ್ಟಕ್ಕೂ, ಈ ಹಿಂದೆ ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು, ಏಕೆಂದರೆ ಪೆಟ್ರೋಲ್-ಡೀಸೆಲ್ ದರಗಳು ಅಷ್ಟು ದುಬಾರಿಯಾಗಿದ್ದವು. ತದನಂತರ ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು.

ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ-ತೈಲದ ಬೆಲೆ ಏರಿಳಿತಗಳು ನಿರಂತರವಾಗಿದ್ದು ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಳಿತವಾಗುವುದು ಸಹಜವೇ ಆಗಿದೆ. ಅಷ್ಟಕ್ಕೂ ಆಗಾಗ ಈ ಇಂಧನ ಬೆಲೆಗಳು ಎಂಬುದು ಶ್ರೀಸಾಮಾನ್ಯನ ಕೈಸುಡುವಂತೆ ಮಾಡುವುದು ಸುಳ್ಳಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಹಾಗೆ ಮುಂದುವರೆದಿದ್ದು ಭವಿಷ್ಯದಲ್ಲಿ ಇಂಧನದ ಬೆಲೆಗಳು ಏನಾಗುವುದೋ ಕಾದು ನೋಡಬೇಕು.

ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು

ಬಾಗಲಕೋಟೆ - ರೂ. 102.49 (0.21 ಪೈಸೆ ಇಳಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 101.58 (00)
ಬೆಳಗಾವಿ - ರೂ. 102.38 (0.31 ಪೈಸೆ ಇಳಿಕೆ)
ಬಳ್ಳಾರಿ - ರೂ. 103.90 (1.01 ಪೈಸೆ ಏರಿಕೆ)
ಬೀದರ್ - ರೂ. 103.27 (0.69 ಪೈಸೆ ಏರಿಕೆ)
ವಿಜಯಪುರ - ರೂ. 102.57 (0.85 ಪೈಸೆ ಏರಿಕೆ)
ಚಾಮರಾಜನಗರ - ರೂ. 102.06 (0.04 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 101.83 (0.11 ಪೈಸೆ ಇಳಿಕೆ)
ಚಿಕ್ಕಮಗಳೂರು - ರೂ. 103.58 (0.12 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.20 (0.73 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.21 (0.08 ಪೈಸೆ ಏರಿಕೆ)
ದಾವಣಗೆರೆ - ರೂ. 104.19 (0.26 ಪೈಸೆ ಏರಿಕೆ)
ಧಾರವಾಡ - ರೂ. 102.19 (0.06 ಪೈಸೆ ಇಳಿಕೆ)
ಗದಗ - ರೂ. 102.34 (0.63 ಪೈಸೆ ಏರಿಕೆ)
ಕಲಬುರಗಿ - ರೂ. 102.12 (0.03 ಏರಿಕೆ)
ಹಾಸನ - ರೂ. 102.47 (0.06 ಪೈಸೆ ಏರಿಕೆ)
ಹಾವೇರಿ - ರೂ. 103.42 (0.04 ಪೈಸೆ ಏರಿಕೆ)
ಕೊಡಗು - ರೂ. 101.87 (0.23 ಪೈಸೆ ಏರಿಕೆ)
ಕೋಲಾರ - ರೂ. 103.05 (0.03 ಪೈಸೆ ಏರಿಕೆ)
ಕೊಪ್ಪಳ - ರೂ. 101.20 (0.14 ಪೈಸೆ ಏರಿಕೆ)
ಮಂಡ್ಯ - ರೂ. 101.88 (0.14 ಪೈಸೆ ಏರಿಕೆ)
ಮೈಸೂರು - ರೂ. 102.17 (67 ಪೈಸೆ ಏರಿಕೆ)
ರಾಯಚೂರು - ರೂ. 101.97 (0.86 ಪೈಸೆ ಇಳಿಕೆ)
ರಾಮನಗರ - ರೂ. 102.40 (0.01 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.47 (0.67 ಪೈಸೆ ಏರಿಕೆ)
ತುಮಕೂರು - ರೂ. 102.97 (0.16 ಪೈಸೆ ಏರಿಕೆ)
ಉಡುಪಿ - ರೂ. 101.92 (0.69 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 102.14 (0.65 ಪೈಸೆ ಇಳಿಕೆ)
ಯಾದಗಿರಿ - ರೂ. 102.79 (0.36 ಪೈಸೆ ಏರಿಕೆ)

ಇದನ್ನೂ ಓದಿ: Gold Price: ವೀಕೆಂಡ್‌ನಲ್ಲಿ ದುಬಾರಿಯಾಯ್ತು ಬಂಗಾರ! ಇಂದು ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಕೆ

ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು

ಬಾಗಲಕೋಟೆ - ರೂ. 88.60
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.57
ಬೆಳಗಾವಿ - ರೂ. 88.60
ಬಳ್ಳಾರಿ - ರೂ. 88.77
ಬೀದರ್ - ರೂ. 88.50
ವಿಜಯಪುರ - ರೂ. 87.71
ಚಾಮರಾಜನಗರ - ರೂ. 88.04
ಚಿಕ್ಕಬಳ್ಳಾಪುರ - ರೂ. 87.89
ಚಿಕ್ಕಮಗಳೂರು - ರೂ. 89.35
ಚಿತ್ರದುರ್ಗ - ರೂ. 89.49
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.50
ಧಾರವಾಡ - ರೂ. 87.71
ಗದಗ - ರೂ. 88.20
ಕಲಬುರಗಿ - ರೂ. 87.71
ಹಾಸನ - ರೂ. 87.84
ಹಾವೇರಿ - ರೂ. 88.34
ಕೊಡಗು - ರೂ. 89
ಕೋಲಾರ - ರೂ. 87.62
ಕೊಪ್ಪಳ - ರೂ. 88.69
ಮಂಡ್ಯ - ರೂ. 88.89
ಮೈಸೂರು - ರೂ. 87.49
ರಾಯಚೂರು - ರೂ. 87.49
ರಾಮನಗರ - ರೂ. 88.
ಶಿವಮೊಗ್ಗ - ರೂ. 88.56
ತುಮಕೂರು - ರೂ. 88.68
ಉಡುಪಿ - ರೂ. 87.93
ಉತ್ತರ ಕನ್ನಡ - ರೂ. 89.52
ಯಾದಗಿರಿ - ರೂ. 88.36
Published by:Divya D
First published: