• Home
  • »
  • News
  • »
  • business
  • »
  • Petrol-Diesel Price Today: ಬೆಂಗಳೂರಿನಲ್ಲಿ ಹೆಚ್ಚಿದ್ದ ಪೆಟ್ರೋಲ್ ಬೆಲೆ ಇಳಿಯಿತಾ? ಇಂದು ಹೇಗಿದೆ ಇಂಧನ ದರ

Petrol-Diesel Price Today: ಬೆಂಗಳೂರಿನಲ್ಲಿ ಹೆಚ್ಚಿದ್ದ ಪೆಟ್ರೋಲ್ ಬೆಲೆ ಇಳಿಯಿತಾ? ಇಂದು ಹೇಗಿದೆ ಇಂಧನ ದರ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಪೆಟ್ರೋಲ್-ಡೀಸೆಲ್ ಬೆಲೆ ನಿನ್ನೆ ಬೆಂಗಳೂರಿನಲ್ಲಿ ಏರಿಕೆಯಾಗಿದ್ದು ಇಂದು ಇಳಿಕೆಯಾಗಿದೆಯಾ? ಹೇಗಿದೆ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ?

  • Share this:

ಇಂದು ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ (Petrol-Diesel Price) ದೊಡ್ಡ ಪ್ರಮಾಣದ ಏರಿಕೆ ಅಥವಾ ಇಳಿಕೆಯಾಗಲಿ ಕಂಡುಬಂದಿಲ್ಲ. ಆದರೂ, ಬೆಂಗಳೂರಿನಲ್ಲಿ ಐದು ಪೈಸೆಗಳಷ್ಟು ಏರಿಕೆಯಾಗಿದ್ದ ಪೆಟ್ರೋಲ್ ಬೆಲೆ (Petrol Price) ಇಂದು ಮತ್ತೆ ತನ್ನ ಮೊದಲಿನ ಸ್ಥಿರ ಬೆಲೆಗೆ ಜಾರಿದೆ. ಆದರೂ ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಹಿಂದೊಮ್ಮೆ ಅತಿರೇಕಕ್ಕೆ ಹೋಗಿದ್ದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲದ (Crude Oil) ಬೆಲೆಯಿಂದಾಗಿ ಪೆಟ್ರೋಲ್-ಡೀಸೆಲ್ ಬೆಲೆಗಳು ಗಗನಕ್ಕೇರಿದ್ದವು, ವಾಹನ ಸವಾರರರು ರಸ್ತೆ ಮೇಲೆ ವಾಹನ ಇಳಿಸಲೂ ಸಹ ಪರದಾಡುವಂತಾಗಿತ್ತು. ಆದರೆ ಪರಿಸ್ಥಿತಿ ಇಂದು ಹಾಗಿಲ್ಲ. ಕೇಂದ್ರವು ಇಂಧನದ (Fuel) ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದರೂ, ಬೆಲೆ ಏರಿಳಿತಗಳ ಈ ಕಣ್ಣು ಮುಚ್ಚಾಲೆ ಆಟ ನಡೆಯುತ್ತಲೇ ಇರುತ್ತದೆ.


ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ-ತೈಲದ ಬೆಲೆ ಏರಿಳಿತಗಳು ನಿರಂತರವಾಗಿದ್ದು ನಿತ್ಯವೂ ಒಂದಿಷ್ಟು ಪೈಸೆಗಳಷ್ಟು ಇಂಧನದ ಬೆಲೆಗಳಲ್ಲಿ ಏರಿಳಿತವಾಗುವುದು ಸಹಜವೇ ಆಗಿದೆ. ಅಷ್ಟಕ್ಕೂ ಆಗಾಗ ಈ ಇಂಧನ ಬೆಲೆಗಳು ಎಂಬುದು ಶ್ರೀಸಾಮಾನ್ಯನ ಕೈಸುಡುವಂತೆ ಮಾಡುವುದು ಸುಳ್ಳಲ್ಲ. ಇನ್ನೊಂದೆಡೆ ರಷ್ಯಾ-ಉಕ್ರೇನ್ ಮಧ್ಯದ ಸಂಘರ್ಷ ಹಾಗೆ ಮುಂದುವರೆದಿದ್ದು ಭವಿಷ್ಯದಲ್ಲಿ ಇಂಧನದ ಬೆಲೆಗಳು ಏನಾಗುವುದೋ ಕಾದು ನೋಡಬೇಕು.




ಇನ್ನು, ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.74, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.33, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು


ಬಾಗಲಕೋಟೆ - ರೂ 102.68 (6 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (5 ಪೈಸೆ ಇಳಿಕೆ)
ಬೆಂಗಳೂರು ಗ್ರಾಮಾಂತರ - ರೂ. 102.05 (5 ಪೈಸೆ ಏರಿಕೆ)
ಬೆಳಗಾವಿ - ರೂ. 102.73 (97 ಪೈಸೆ ಏರಿಕೆ)
ಬಳ್ಳಾರಿ - ರೂ. 103.73 (52 ಪೈಸೆ ಏರಿಕೆ)
ಬೀದರ್ - ರೂ. 102.75 (17 ಪೈಸೆ ಇಳಿಕೆ)
ವಿಜಯಪುರ - ರೂ. 102.03 (10 ಪೈಸೆ ಏರಿಕೆ)
ಚಾಮರಾಜನಗರ - ರೂ. 102.07 (14 ಪೈಸೆ ಏರಿಕೆ)
ಚಿಕ್ಕಬಳ್ಳಾಪುರ - ರೂ. 102 (00)
ಚಿಕ್ಕಮಗಳೂರು - ರೂ. 103.06 (15 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 103.55 (35 ಪೈಸೆ ಏರಿಕೆ)
ದಕ್ಷಿಣ ಕನ್ನಡ - ರೂ. 101.81 (68 ಪೈಸೆ ಏರಿಕೆ)
ದಾವಣಗೆರೆ - ರೂ. 104.19 (10 ಪೈಸೆ ಇಳಿಕೆ)
ಧಾರವಾಡ - ರೂ. 101.70 (10 ಪೈಸೆ ಇಳಿಕೆ)
ಗದಗ - ರೂ. 102.25 (6 ಪೈಸೆ ಏರಿಕೆ)
ಕಲಬುರಗಿ - ರೂ. 102.45 (00)
ಹಾಸನ - ರೂ. 101.97 (51 ಪೈಸೆ ಇಳಿಕೆ)
ಹಾವೇರಿ - ರೂ. 102.41 (55 ಪೈಸೆ ಇಳಿಕೆ)
ಕೊಡಗು - ರೂ. 103.38 (69 ಪೈಸೆ ಏರಿಕೆ)
ಕೋಲಾರ - ರೂ. 101.87 (00)
ಕೊಪ್ಪಳ - ರೂ. 102.86 (00)
ಮಂಡ್ಯ - ರೂ. 101.74 (9 ಪೈಸೆ ಇಳಿಕೆ)
ಮೈಸೂರು - ರೂ. 101.83 (8 ಪೈಸೆ ಏರಿಕೆ)
ರಾಯಚೂರು - ರೂ. 102.20 (51 ಪೈಸೆ ಇಳಿಕೆ)
ರಾಮನಗರ - ರೂ. 102.25 (14 ಪೈಸೆ ಇಳಿಕೆ)
ಶಿವಮೊಗ್ಗ - ರೂ. 103.48 (34 ಪೈಸೆ ಇಳಿಕೆ)
ತುಮಕೂರು - ರೂ. 103.13 (57 ಪೈಸೆ ಏರಿಕೆ)
ಉಡುಪಿ - ರೂ. 101.43 (49 ಪೈಸೆ ಇಳಿಕೆ)
ಉತ್ತರ ಕನ್ನಡ - ರೂ. 103.01 (00)
ಯಾದಗಿರಿ - ರೂ. 102.43 (1 ಪೈಸೆ ಇಳಿಕೆ)


ಇದನ್ನೂ ಓದಿ: Cryptocurrency: ಅಬ್ಬಬ್ಬಾ ಕ್ರಿಪ್ಟೋಕರೆನ್ಸಿಯಿಂದ ಭಾರತೀಯರಿಗೆ ಈ ಲಾಭವೂ ಇದ್ಯಾ?


ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು


ಬಾಗಲಕೋಟೆ - ರೂ. 88.59
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.99
ಬೆಳಗಾವಿ - ರೂ. 88.63
ಬಳ್ಳಾರಿ - ರೂ. 89.53
ಬೀದರ್ - ರೂ. 88.65
ವಿಜಯಪುರ - ರೂ. 87.99
ಚಾಮರಾಜನಗರ - ರೂ. 88.01
ಚಿಕ್ಕಬಳ್ಳಾಪುರ - ರೂ. 87.95
ಚಿಕ್ಕಮಗಳೂರು - ರೂ. 88.87
ಚಿತ್ರದುರ್ಗ - ರೂ. 89.15
ದಕ್ಷಿಣ ಕನ್ನಡ - ರೂ. 87.74
ದಾವಣಗೆರೆ - ರೂ. 89.73
ಧಾರವಾಡ - ರೂ. 87.70
ಗದಗ - ರೂ. 88.20
ಕಲಬುರಗಿ - ರೂ. 88.38
ಹಾಸನ - ರೂ. 87.72
ಹಾವೇರಿ - ರೂ. 88.34
ಕೊಡಗು - ರೂ. 89
ಕೋಲಾರ - ರೂ. 87.83
ಕೊಪ್ಪಳ - ರೂ. 88.75
ಮಂಡ್ಯ - ರೂ. 87.71
ಮೈಸೂರು - ರೂ. 87.80
ರಾಯಚೂರು - ರೂ. 88.16
ರಾಮನಗರ - ರೂ. 88.17
ಶಿವಮೊಗ್ಗ - 89.18
ತುಮಕೂರು - ರೂ. 88.96
ಉಡುಪಿ - ರೂ. 87.40
ಉತ್ತರ ಕನ್ನಡ - ರೂ. 88.80
ಯಾದಗಿರಿ - ರೂ. 88.36

Published by:Divya D
First published: