Crude Oil Price Hike: ಮತ್ತೆ ಪಟ್ರೋಲ್, ಡೀಸೆಲ್ ಬೆಲೆ ಏರಿಕೆ ಸಾಧ್ಯತೆ: ಇದು 7 ವರ್ಷಗಳಲ್ಲಿ ಅತ್ಯಧಿಕ!

ಹಲವು ತಿಂಗಳ ನಂತರ ಅಲ್ಪ ಇಳಿಕೆ ಕಂಡಿರುವ ಪೆಟ್ರೋಲ್ ಬೆಲೆ (Petrol Price) ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಕಚ್ಚಾ ತೈಲ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಪರಿಣಾಮವೇ ಬೆಲೆ ಏರಿಕೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಹಲವು ತಿಂಗಳ ನಂತರ ಅಲ್ಪ ಇಳಿಕೆ ಕಂಡಿರುವ ಪೆಟ್ರೋಲ್ ಬೆಲೆ (Petrol Price) ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಕಚ್ಚಾ ತೈಲ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಪರಿಣಾಮವೇ ಬೆಲೆ ಏರಿಕೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈಗ ಏಳು ವರ್ಷಗಳಲ್ಲಿ ಅತ್ಯಧಿಕ ಬೆಲೆ ದಾಖಲಾಗುವ ಸಾಧ್ಯತೆಗಳಿವೆ ಎಂದು ಮಾರುಕಟ್ಟೆ ತಜ್ಱರು (Market Experts) ಅಂದಾಜಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ಗುಣಮಟ್ಟದ ಕಚ್ಚಾ ತೈಲ, ಬ್ರೆಂಟ್ ಕಚ್ಚಾ ತೈಲ ಬೆಲೆ (Brent Crude Oil Price) ಪ್ರತಿ ಬ್ಯಾರೆಲ್‌ ಗೆ ಡಾಲರ್ 87 (ಬ್ಯಾರೆಲ್‌ಗೆ ಸುಮಾರು 6,490 ರೂ.) ಕ್ಕೆ ಏರಿಕೆಯಾಗಿದೆ. ಇದು ಕಳೆದ 7 ವರ್ಷಗಳಲ್ಲೇ ಗರಿಷ್ಠ ಮಟ್ಟದ ಕಚ್ಚಾ ತೈಲದ ಬೆಲೆಯಾಗಿದೆ. ಕಳೆದ ಕೆಲವು ವಾರಗಳಿಂದ ಕಚ್ಚಾ ತೈಲದ (Crude Oil) ಈ ಏರಿಕೆ ನಿರಂತರವಾಗಿ ಕಂಡುಬರುತ್ತಿದೆ.

ಪಿಟಿಐ ಸುದ್ದಿ ಪ್ರಕಾರ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯ ತೈಲ ಕಂಪನಿಯ ಮೇಲೆ ಯೆಮೆನ್‌ನ ಯಹೂದಿ ಬಂಡುಕೋರರು ದಾಳಿ ನಡೆಸಿದ್ದರಿಂದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದೇ ವೇಳೆ ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಕಚ್ಚಾ ತೈಲದ ಬೆಲೆಯನ್ನು ಹೆಚ್ಚಿಸಲು ಪೂರಕವಾಗುತ್ತಿದೆ.

ಲೀಟರ್‌ಗೆ 2 ರಿಂದ 3 ರೂ. ಏರಿಕೆ ಸಾಧ್ಯತೆ

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಈ ರೀತಿ ತ್ವರಿತ ಏರಿಕೆಯಾದರೆ, ದೇಶೀಯ ಮಟ್ಟದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಬಹುದು ಎಂದು ತಜ್ಞರು ಊಹಿಸಿದ್ದಾರೆ. ಕಚ್ಚಾ ತೈಲ ಬೆಲೆ 90 ಡಾಲರ್‌ಗೆ ತಲುಪಿದರೆ, ದೇಶೀಯ ಇಂಧನ ಬೆಲೆಗಳು ಲೀಟರ್‌ಗೆ 2 ರಿಂದ 3 ರೂ.ಗಳಷ್ಟು ಹೆಚ್ಚಾಗಬಹುದು.

ಇದನ್ನೂ ಓದಿ:  ವರ್ಷದ ಅಂತ್ಯದ ಆರ್ಥಿಕ ತ್ರೈಮಾಸಿಕದಲ್ಲಿ ದಾಖಲೆಯ ಆದಾಯ ಗಳಿಸಿರುವ Network18

ಬೆಲೆ ಏರಿಕೆ ವಿಧಾನಸಭಾ ಚುನಾವಣೆ ಅಡ್ಡಿ!

ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ದೇಶದ 5 ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ಘೋಷಣೆ ಆಗಿರುವ ಹಿನ್ನೆಲೆ ತೈಲ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ತಡೆಯಬಹುದಾಗಿದೆ. ಈ ಹಿನ್ನೆಲೆ ಕೆಲ ದಿನಗಳವರೆಗೆ ಜನಸಾಮನ್ಯರು ಬೆಲೆ ಏರಿಕೆಯಿಂದ ತಪ್ಪಿಸಕೊಳ್ಳಬಹುದಾಗಿದೆ. ವಿಧಾನಸಭಾ ಚುನಾವಣೆ ನಂತರ ಬೆಲೆ ಏರಿಕೆ ಮಾಡುವ ಸಾಧ್ಯತೆಗಳೇ ಎಂದು ಹೆಚ್ಚು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ. ದಾಟಿದೆ, ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಲೆ ಏರಿಕೆ ನಿಂತಿದೆ. ಕಳೆದ 74 ದಿನಗಳಿಂದ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. ಮಂಗಳವಾರ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 100.58 ರೂ ಮತ್ತು ಡೀಸೆಲ್ ಬೆಲೆ 85.01 ರೂ.ಗೆ ಮಾರಾಟವಾಗುತ್ತಿದೆ.

ಪ್ರತಿದಿನ ದರ ಪರಿಷ್ಕರಣೆ

ಭಾರತದಲ್ಲಿ ಪೆಟ್ರೋಲ್ ದರಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಪ್ರತಿದಿನ ಬೆಳಗ್ಗೆ 06:00 ಗಂಟೆಗೆ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜಾಗತಿಕ ತೈಲ ಬೆಲೆಯಲ್ಲಿ ಒಂದು ನಿಮಿಷದ ವ್ಯತ್ಯಾಸವನ್ನು ಇಂಧನ ಬಳಕೆದಾರರು ಮತ್ತು ವಿತರಕರಿಗೆ ರವಾನಿಸಬಹುದು ಎಂದು ಇದು ಖಚಿತಪಡಿಸುತ್ತದೆ. ಇಂಧನದ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಅನ್ನು ಒಳಗೊಂಡಿದೆ. ವ್ಯಾಟ್ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ.

ಇದನ್ನೂ ಓದಿ: Business Idea: 2022ರಲ್ಲಿ ಹೊಸ ಉದ್ದಿಮೆ ಆರಂಭಿಸಲು ಇಲ್ಲಿವೆ 5 ಹೊಸ ಐಡಿಯಾ

ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ವ್ಯಾಟ್ ಸೇರಿಸಿದ ನಂತರ, ಪೆಟ್ರೋಲ್‌ನ ಚಿಲ್ಲರೆ ಮಾರಾಟ ಬೆಲೆ ದ್ವಿಗುಣಗೊಳ್ಳುತ್ತದೆ. ವಿವಿಧ ಅಂಶಗಳು ಇಂಧನದ ಬೆಲೆಯ ಮೇಲೆ ಪ್ರಭಾವ ಬೀರುತ್ತವೆ. ಇವುಗಳಲ್ಲಿ ರೂಪಾಯಿಗಳಿಂದ ಯುಎಸ್ ಡಾಲರ್ ವಿನಿಮಯ ದರ, ಕಚ್ಚಾ ತೈಲದ ಬೆಲೆ, ಜಾಗತಿಕ ಸೂಚನೆಗಳು, ಇಂಧನದ ಬೇಡಿಕೆ ಇತ್ಯಾದಿಗಳು ಸೇರಿವೆ. ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಗಳು ಹೆಚ್ಚಾದಾಗ ಭಾರತದಲ್ಲೂ ಸಾಮಾನ್ಯವಾಗಿ ಬೆಲೆ ಏರಿಕೆಯಾಗುವುದು ವಾಡಿಕೆಯಾಗಿದೆ.‘
Published by:Mahmadrafik K
First published: