ಈಗ ಈ ಕೆಲ ದಿನಗಳ ಹಿಂದೆ ಇದ್ದ ರೀತಿ ಪೆಟ್ರೋಲ್ ಹಾಗೂ ಡೀಸೆಲ್ (Petrol-Diesel) ದರಗಳಿಲ್ಲ. ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಅಲ್ಪ ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಅಂತಾರಾಷ್ಟ್ರ್ರೀಯ ಮಾರುಕಟ್ಟೆಯಲ್ಲಿ (International Market ಕಚ್ಚಾ ತೈಲದ (Crude Oil) ಬೆಲೆ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಬಹುತೇಕವಾಗಿ ಏರಿದಕ್ಕಿಂತ ಕೊಂಚ ಕಡಿಮೆ ಬೆಲೆಯಲ್ಲಿ ಇಂಧನ ಸಿಗುತ್ತಿದ್ದರೂ ಸಹ ನೂರರ ಗಡಿ ದಾಟಿರುವ ಇಂಧನದ ಬೆಲೆ ಶ್ರೀಸಾಮಾನ್ಯನಿಗೆ ಇದು ಇನ್ನೂ ನುಂಗಲಾರದ ತುತ್ತಾಗಿದೆ ಎನ್ನಬಹುದು. ಒಂದೆಡೆ ಜಗತ್ತಿನಾದ್ಯಂತ ಕಚ್ಚಾ ತೈಲದ ಬೆಲೆ ಗಗನಮುಖಿಯಾಗಿಯೇ ಇದ್ದು ಇಳಿಮುಖವಾಗುತ್ತಿಲ್ಲ. ಇನ್ನೊಂದೆಡೆ ದೇಶದಲ್ಲಿ ಹಣದುಬ್ಬರ ಸಹ ಹೆಚ್ಚಾಗುತ್ತಿದೆ. ಈ ಎಲ್ಲಾ ಅಂಶಗಳು ಜನಸಾಮಾನ್ಯರ ದಿನನಿತ್ಯದ ಬಳಕೆಯ ವಸ್ತುಗಳ ಮೇಲೆ ಪರಿಣಾಮ ಬೀರುತ್ತಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನ ಪೆಟ್ರೋಲ್ ದರ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.89 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63, ರೂ. 106.31, ರೂ. 106.03 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24, ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು
ಬಾಗಲಕೋಟೆ - ರೂ. 102.56 ( 0.11 ಪೈಸೆ ಏರಿಕೆ)
ಬೆಂಗಳೂರು - ರೂ. 101.94 (00)
ಬೆಂಗಳೂರು ಗ್ರಾಮಾಂತರ - ರೂ. 102.00 (0.42 ಪೈಸೆ ಏರಿಕೆ)
ಬೆಳಗಾವಿ - ರೂ. 102.56 (0.01 ಪೈಸೆ ಇಳಿಕೆ)
ಬಳ್ಳಾರಿ - ರೂ. 103.87 (0.29 ಪೈಸೆ ಏರಿಕೆ)
ಬೀದರ್ - ರೂ. 103.21 (0.98 ಪೈಸೆ ಏರಿಕೆ)
ವಿಜಯಪುರ - ರೂ. 102.05 (0.13 ಪೈಸೆ ಇಳಿಕೆ)
ಚಾಮರಾಜನಗರ - ರೂ. 101.88 (0.18 ಪೈಸೆ ಇಳಿಕೆ)
ಚಿಕ್ಕಬಳ್ಳಾಪುರ - ರೂ. 102.67 (0.73 ಪೈಸೆ ಏರಿಕೆ)
ಚಿಕ್ಕಮಗಳೂರು - ರೂ. 103.58 (0.82 ಪೈಸೆ ಇಳಿಕೆ)
ಚಿತ್ರದುರ್ಗ - ರೂ. 102.79 (0.38 ಪೈಸೆ ಇಳಿಕೆ)
ದಕ್ಷಿಣ ಕನ್ನಡ - ರೂ. 101.13 (0.35 ಪೈಸೆ ಇಳಿಕೆ)
ದಾವಣಗೆರೆ - ರೂ. 103.63 (0.22 ಪೈಸೆ ಏರಿಕೆ)
ಧಾರವಾಡ - ರೂ. 101.69 (00)
ಗದಗ - ರೂ. 102.79 (0.41 ಪೈಸೆ ಏರಿಕೆ)
ಕಲಬುರಗಿ - ರೂ. 102.16 (23 ಪೈಸೆ ಇಳಿಕೆ)
ಹಾಸನ - ರೂ. 102.26 (0.32 ಪೈಸೆ ಏರಿಕೆ)
ಹಾವೇರಿ - ರೂ. 102.55 (0.17 ಪೈಸೆ ಏರಿಕೆ)
ಕೊಡಗು - ರೂ. 103.42 (0.04 ಪೈಸೆ ಏರಿಕೆ)
ಕೋಲಾರ - ರೂ. 101.87 (0.06 ಪೈಸೆ ಏರಿಕೆ)
ಕೊಪ್ಪಳ - ರೂ. 102.83 (00)
ಮಂಡ್ಯ - ರೂ. 101.89 (00)
ಮೈಸೂರು - ರೂ. 101.46 (00)
ರಾಯಚೂರು - ರೂ. 101.63 (0.87 ಪೈಸೆ ಏರಿಕೆ )
ರಾಮನಗರ - ರೂ. 102.40 (0.01 ಪೈಸೆ ಏರಿಕೆ)
ಶಿವಮೊಗ್ಗ - ರೂ. 103.82 (1.02 ಪೈಸೆ ಏರಿಕೆ)
ತುಮಕೂರು - ರೂ. 102.97 (0.16 ಪೈಸೆ ಏರಿಕೆ)
ಉಡುಪಿ - ರೂ. 101.92 (0.11 ಪೈಸೆ ಏರಿಕೆ)
ಉತ್ತರ ಕನ್ನಡ - ರೂ. 104.20 ( 0.41 ಪೈಸೆ ಏರಿಕೆ)
ಯಾದಗಿರಿ - ರೂ. 102.74 (0.36 ಪೈಸೆ ಏರಿಕೆ )
ಇದನ್ನೂ ಓದಿ: Petrol-Diesel Price Today: 13 ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಇಳಿಕೆ, ನಿಮ್ಮಲ್ಲಿ ಹೇಗಿದೆ?
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
ಬಾಗಲಕೋಟೆ - ರೂ. 88.47
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.21
ಬಳ್ಳಾರಿ - ರೂ. 89.66
ಬೀದರ್ - ರೂ. 89.06
ವಿಜಯಪುರ - ರೂ. 88.01
ಚಾಮರಾಜನಗರ - ರೂ.87.84
ಚಿಕ್ಕಬಳ್ಳಾಪುರ - ರೂ. 88.55
ಚಿಕ್ಕಮಗಳೂರು - ರೂ. 89.19
ಚಿತ್ರದುರ್ಗ - ರೂ. 88.46
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.22
ಧಾರವಾಡ - ರೂ. 87.68
ಗದಗ - ರೂ. 88.65
ಕಲಬುರಗಿ - ರೂ. 88.17
ಹಾಸನ - ರೂ. 87.99
ಹಾವೇರಿ - ರೂ. 88.47
ಕೊಡಗು - ರೂ. 89.05
ಕೋಲಾರ - ರೂ. 87.83
ಕೊಪ್ಪಳ - ರೂ. 88.72
ಮಂಡ್ಯ - ರೂ. 87.85
ಮೈಸೂರು - ರೂ. 87.45
ರಾಯಚೂರು - ರೂ. 88.55
ರಾಮನಗರ - ರೂ. 88.31
ಶಿವಮೊಗ್ಗ - ರೂ. 89.48
ತುಮಕೂರು - ರೂ. 88.82
ಉಡುಪಿ - ರೂ. 87.84
ಉತ್ತರ ಕನ್ನಡ - ರೂ. 89.81
ಯಾದಗಿರಿ - ರೂ. 88.63
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ