Gold and Silver Rate on April 12, 2022: ಕಳೆದ 2 ದಿನಗಳಿಂದ ಚಿನ್ನದ ಬೆಲೆಯಲ್ಲಿ (Gold Price) ಯಾವುದೇ ವ್ಯತ್ಯಾಸವಾಗಿಲ್ಲ. ಇದರಿಂದ ಬಂಗಾರದ ಬೆಲೆ ಏರಿಕೆಯ ಶಾಕ್ನಲ್ಲಿದ್ದ (Shock) ಗ್ರಾಹಕರಿಗೆ ಸ್ವಲ್ಪ ರಿಲೀಫ್ (Relief) ಸಿಕ್ಕಂತಾಗಿದೆ. ಹೌದು, ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,600 ರೂ. ಇತ್ತು. ಇಂದು ಸಹ ಅಷ್ಟೇ ಬೆಲೆ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 53,020 ರೂ. ಇತ್ತು. ಇಂದು ಸಹ ಅದೇ ದರ ಇದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ (City) ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?
ನೀವು ಚಿನ್ನ ಖರೀದಿಸುವ ಆಲೋಚನೆಯಲ್ಲಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 53,020 ರೂ. ಇತ್ತು. ಇಂದು ಸಹ ಅದೇ ದರ ಇದೆ. ಅದೇ ರೀತಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,600 ರೂ. ಇತ್ತು. ಇಂದು ಸಹ ಅಷ್ಟೇ ಬೆಲೆ ಇದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.
ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೋಲ್ಡ್ ರೇಟ್?
ಇನ್ನು, ದೇಶದ ಇತರೇ ಪ್ರಮುಖ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈ, ಚಂಡೀಗಢ, ಸೂರತ್, ನಾಶಿಕ್ನಲ್ಲೂ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರದಿಂದ 54 ಸಾವಿರದ ಆಸುಪಾಸಿನಲ್ಲೇ ಇದೆ.
ಇದನ್ನೂ ಓದಿ: ಒಂದಲ್ಲ..ಎರಡಲ್ಲ.. 900 ಕೋಟಿ ರೂ. ಕಳೆದುಕೊಂಡ ಉದ್ಯಮಿ Rakesh Jhunjhunwala.. ಏನಾಯ್ತು?
ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್ ನಗರಗಳಾದ ಚೆನ್ನೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 53,960 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್ ಬಂಗಾರದ ಬೆಲೆ 53,020 ರೂ. ಆಗಿದೆ.
ಭಾರತದಲ್ಲಿ ಬೆಳ್ಳಿ ಬೆಲೆ ಎಷ್ಟು?
ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದರೆ ಬೆಳ್ಳಿ ದರ (Silver Rate) ದಲ್ಲಿ ಭಾರಿ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 71,500 ರೂ. ಇತ್ತು. ಇಂದು 3,800 ರೂ. ಇಳಿಕೆಯಾಗಿ 67,700 ರೂ. ಆಗಿದೆ.
ಬೆಂಗಳೂರಿನಲ್ಲಿ ಎಷ್ಟಿದೆ ಬೆಳ್ಳಿ ದರ?
ಇನ್ನು, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 800 ರೂ. ಜಾಸ್ತಿ ಆಗಿದ್ದು 72,300 ರೂ. ಆಗಿದೆ. ಇದೇ ರೀತಿ ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣಂ, ಕೇರಳ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 72,300 ರೂ ಆಗಿದೆ.
ಇತರೆ ಪ್ರಮುಖ ನಗರಗಳಲ್ಲಿ ಸಿಲ್ವರ್ ರೇಟ್
ಇನ್ನೊಂದೆಡೆ, ಪುಣೆ, ಸೂರತ್, ನಾಶಿಕ್, ಚಂಡೀಗಢ ಸೇರಿ ಹಲವು ನಗರಗಳಲ್ಲಿ 1 ಕೆಜಿ ಬೆಳ್ಳಿಯ ಮೌಲ್ಯ 67,700 ರೂ. ಇದೆ. ಈ ಮಧ್ಯೆ, ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿಯ ದರ 67,700 ರೂ. ಇದ್ದರೆ, ಚೆನ್ನೈನಲ್ಲಿ 1 ಕೆಜಿ ಬೆಳ್ಳಿಯ ದರ 71,500 ರೂ. ಆಗಿದೆ.
ಇದನ್ನೂ ಓದಿ: Bank Holiday: ನಾಳೆ, ನಾಡಿದ್ದು ಬ್ಯಾಂಕ್ಗಳಿಗೆ ರಜೆ ಇದೆಯಾ?
ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ