Gold Price: ಚಿನ್ನ ನೋಡೋ ಹಾಗಿಲ್ಲ, ಬೆಳ್ಳಿ ಕೊಳ್ಳೋ ಹಾಗಿಲ್ಲ! ಇಂದು ಎಷ್ಟಾಗಿದೆ ಗೊತ್ತಾ ಗೋಲ್ಡ್-ಸಿಲ್ವರ್ ರೇಟ್?

ಚಿನ್ನ ಹಾಗೂ ಬೆಳ್ಳಿ ದರಗಳು ಒಂದು ರೀತಿಯಲ್ಲಿ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದರೂ ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡು ಬಂದಿತ್ತಾದರೂ ಇಂದು ಮತ್ತೆ ಬೆಲೆ ಹೆಚ್ಚಳವಾಗಿದೆ. ನಿನ್ನೆ 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,380 ರೂಪಾಯಿ ಬೆಲೆ ಇದ್ದರೆ, ಇಂದು ಅದೇ ಚಿನ್ನದ ಬೆಲೆ 54,390 ರೂಪಾಯಿ ಆಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Gold And Silver Price On April 19, 2022: ನಿನ್ನೆಗೆ ಹೋಲಿಸಿದರೆ ಮಾರುಕಟ್ಟೆಯಲ್ಲಿ (Market) ಇಂದು ಚಿನ್ನದ ಬೆಲೆ (Gold Price) ಮತ್ತೆ ಗಗನಮುಖಿಯಾಗಿದೆ. ಕಳೆದ ಒಂದು ತಿಂಗಳಿಗಿಂತಲೂ ಅಧಿಕ ಸಮಯದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಕಚ್ಚಾ ತೈಲದ (Crude oil) ಬೆಲೆ ಏರಿಕೆ ಮತ್ತು ಮುಂದುವರೆದಿರುವ ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮವು ಜಾಗತಿಕ ಮಟ್ಟದಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳ ಮೇಲೆ ಬೀರುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳು ಒಂದು ರೀತಿಯಲ್ಲಿ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದರೂ ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡು ಬಂದಿತ್ತಾದರೂ ಇಂದು ಮತ್ತೆ ಬೆಲೆ ಹೆಚ್ಚಳವಾಗಿದೆ. ನಿನ್ನೆ 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,380 ರೂಪಾಯಿ ಬೆಲೆ ಇದ್ದರೆ, ಇಂದು ಅದೇ ಚಿನ್ನದ ಬೆಲೆ 54,390 ರೂಪಾಯಿ ಆಗಿದೆ.

    ಹಾಗಾದರೆ ಭಾರತದ ಮಾರುಕಟ್ಟೆಯಲ್ಲಿ ಇಂದು ಬಂಗಾರದ ಬೆಲೆ ಎಷ್ಟಿದೆ ಎನ್ನುವುದನ್ನು ತಿಳಿದುಕೊಳ್ಳೋಣ…

    ಒಂದು ಗ್ರಾಂ (1GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,986

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,439

     ಎಂಟು ಗ್ರಾಂ (8GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 39,880

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,504

     ಹತ್ತು ಗ್ರಾಂ (10GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 49,860

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 54,390

     ನೂರು ಗ್ರಾಂ (100GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,98,600

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,43,900

    ಇದನ್ನೂ ಓದಿ: Petrol-Diesel Price Today: ಸ್ವಲ್ಪ ಏರಿಳಿತ, ಇಂದಿನ ಪೆಟ್ರೋಲ್, ಡಿಸೇಲ್ ಬೆಲೆ ಹೀಗಿದೆ

    ಬೆಂಗಳೂರಿನಲ್ಲಿಂದು ಬಂಗಾರದ ಬೆಲೆ ಎಷ್ಟು?

     ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,850 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 50,470, ರೂ. 49,850, ರೂ. 49,850 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 49,850 ರೂ. ಆಗಿದೆ.

     ಇಂದಿನ ಬೆಳ್ಳಿ ದರ

    ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲೂ ಹೆಚ್ಚಳ ಕಂಡುಬಂದಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

    ಬೆಂಗಳೂರಿನಲ್ಲಿ ಇಂದಿನ ಸಿಲ್ವರ್ ರೇಟ್

    ಇಂದು, ಬೆಂಗಳೂರಿನಲ್ಲಿ 10gm, 100gm, 1000gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 752, ರೂ. 7,520 ಹಾಗೂ ರೂ. 75,200 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 75,200 ಆಗಿದ್ದರೆ ದೆಹಲಿಯಲ್ಲಿ ರೂ. 69,900 ಮುಂಬೈನಲ್ಲಿ ರೂ. 69,900 ಹಾಗೂ ಕೊಲ್ಕತ್ತದಲ್ಲೂ ರೂ. 69,900 ಗಳಾಗಿದೆ.

    ಇದನ್ನೂ ಓದಿ: PPF Account Holders: ಅರ್ಧದಲ್ಲೇ ಪಿಎಫ್ ಹಣವನ್ನು ತೆಗೆಯಬಹುದು; ಆ 5 ನಿಯಮಗಳ ಬಗ್ಗೆ ತಿಳಿಯಿರಿ

    ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
    Published by:Annappa Achari
    First published: