Gold And Silver Price On April 21, 2022: ಇಂದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಕುಸಿತ ಉಂಟಾಗಿದ್ದು ಬಂಗಾರ ಖರೀದಿಸಬಯಸುವವರು ಆ ಕಾರ್ಯವನ್ನು ಮಾಡಬಹುದು. ನಿನ್ನೆ ಒಂದು ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,985 ಇದ್ದದ್ದು ಇಂದು ಕುಸಿದು ರೂ. 4,915ಕ್ಕೆ ತಲುಪಿದೆ. ಕಳೆದ ಎರಡು ದಿನಗಳಲ್ಲಿ ಸ್ವಲ್ಪ ಮಟ್ಟಿಗಿನ ಸ್ಥಿರತೆ ಕಂಡುಬಂದಿತ್ತಾದರೂ ಇಂದು ಚಿನ್ನದ ಬೆಲೆ ಮತ್ತೆ ಕುಸಿದಿದೆ. ಪ್ರಸಕ್ತ ನಡೆಯುತ್ತಿರುವ ಯುದ್ಧದ ಸನ್ನಿವೇಷದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳು ಚಿನ್ನ ಹಾಗೂ ಬೆಳ್ಳಿ ದರಗಳ ಮೇಲೆ ಪ್ರಭಾವ ಬೀರುತ್ತಿವೆ.
ಭಾರತದಲ್ಲಿ ಎಷ್ಟಿದೆ ಇಂದು ಬಂಗಾರದ ಬೆಲೆ?
ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ (22 ಕ್ಯಾರೆಟ್) ದರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಕೊಂಚ ಬದಲಾವಣೆ ಕಂಡುಬಂದಿದೆ. ದೇಶದಲ್ಲಿ ಇಂದು ಒಂದು ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,915 ಆಗಿದೆ.
ಒಂದು ಗ್ರಾಂ (1GM)
22 ಕ್ಯಾರೆೆಟ್ ಆಭರಣ ಚಿನ್ನದ ಬೆಲೆ - ರೂ. 4,915
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,362
ಎಂಟು ಗ್ರಾಂ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 39,320
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 42,896
ಹತ್ತು ಗ್ರಾಂ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 49,150
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 53,620
ನೂರು ಗ್ರಾಂ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,91,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,36,200
ಇದನ್ನೂ ಓದಿ: Tax Saving Techniques: ಕೆಲವರಿಗಷ್ಟೇ ಗೊತ್ತಿರುವ ಟ್ಯಾಕ್ಸ್ ಉಳಿಸುವ 5 ಸ್ಮಾರ್ಟ್ ವಿಧಾನಗಳು ಇಲ್ಲಿವೆ
ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್ ರೇಟ್?
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,150 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 49,630, ರೂ. 49,150, ರೂ. 49,150 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 49,150 ರೂ. ಆಗಿದೆ.
ಇಂದಿನ ಬೆಳ್ಳಿ ದರ ಹೀಗಿದೆ
ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲೂ ಇಳಿಕೆಯಾಗಿದ್ದು ಬೆಳ್ಳಿ ಉಪಕರಣ ಹಾಗೂ ಆಭರಣಾಸಕ್ತರು ಇಂದು ಅದರ ಖರೀದಿ ಮಾಡಬಹುದು. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.
ಬೆಂಗಳೂರಿನಲ್ಲಿ ಎಷ್ಟಿದೆ ಬೆಳ್ಳಿ ಬೆಲೆ?
ಇಂದು, ಬೆಂಗಳೂರಿನಲ್ಲಿ 10gm, 100gm, 1000gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 733, ರೂ. 7,330 ಹಾಗೂ ರೂ. 73,300 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 73,300 ಆಗಿದ್ದರೆ ದೆಹಲಿಯಲ್ಲಿ ರೂ. 68,300 ಮುಂಬೈನಲ್ಲಿ ರೂ. 68,300 ಹಾಗೂ ಕೊಲ್ಕತ್ತಾದಲ್ಲೂ ರೂ. 68,300 ಗಳಾಗಿದೆ.
ಇದನ್ನೂ ಓದಿ: ನಿಮ್ಮ ಬಳಿ Health Insurance ಇದೆಯಾ? ಆದರೆ, ಯಾವೆಲ್ಲಾ ಖರ್ಚುಗಳು ಆರೋಗ್ಯ ವಿಮೆಗೆ ಒಳಪಡಲ್ಲ ತಿಳಿದುಕೊಳ್ಳಿ
ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ