Gold And Silver Price On April 23, 2022: ಅಯ್ಯೋ ನಿನ್ನೆನೇ ಚಿನ್ನ (Gold) ಕೊಳ್ಳಬೇಕಿತ್ತು. ಇವತ್ತು ರೇಟ್ (Rate) ಎಷ್ಟು ಜಾಸ್ತಿಯಾಗುತ್ತೋ ಏನೋ ಅಂತ ಚಿಂತೆ ಮಾಡುತ್ತಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್ (Good News). ಅದೇನಪ್ಪಾ ಅಂದ್ರೆ ಭಾರತದಲ್ಲಿ ಇಂದು ಆಭರಣ (Jewellery) ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ನಿನ್ನೆ 22 ಕ್ಯಾರೆಟ್ನ 10 ಗ್ರಾಂ ಆಭರಣ ಚಿನ್ನದ ಬೆಲೆ 49,300 ರೂಪಾಯಿ ಇದ್ದರೆ, 24 ಕ್ಯಾರೆಟ್ನ 10 ಗ್ರಾಂ ಬಂಗಾರದ ಬೆಲೆ 53,780 ಇತ್ತು. ಇಂದೂ ಕೂಡ ಇದೇ ದರ (Price) ಕಾಯ್ದುಕೊಂಡಿದೆ. ಇನ್ನು ಬೆಳ್ಳಿ (Silver) ಖರೀದಿಸುವವರಿಗೂ ಗುಡ್ ನ್ಯೂಸ್ ಇದ್ದು, ಬೆಳ್ಳಿ ಬೆಲೆಯಲ್ಲಿ ಇಂದು ಬರೋಬ್ಬರಿ 900 ರೂಪಾಯಿ ಕುಸಿತವಾಗಿದೆ.
ಭಾರತದಲ್ಲಿ ಇಂದು ಬಂಗಾರದ ಬೆಲೆ ಎಷ್ಟಿದೆ?
ಇಂದು ಏಪ್ರಿಲ್ 23 ಶನಿವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರೆಟ್) ಬಂಗಾರದ ಬೆಲೆ 5,378 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿಯೂ 1 ಗ್ರಾಂ (24 ಕ್ಯಾರೆಟ್) ಬಂಗಾರಕ್ಕೆ 5,378 ರೂಪಾಯಿ ಬೆಲೆ ನಿಗದಿಯಾಗಿದೆ.
ಒಂದು ಗ್ರಾಂ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,930
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,378
ಎಂಟು ಗ್ರಾಂ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 39,440
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,024
ಹತ್ತು ಗ್ರಾಂ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 49,300
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 53,780
ನೂರು ಗ್ರಾಂ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,93,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,37,800
ಇದನ್ನೂ ಓದಿ: Petrol-Diesel Price Today: ಹಲವೆಡೆ ಬೆಲೆ ಇಳಿಕೆ, ಇಂದಿನ ಪೆಟ್ರೋಲ್, ಡಿಸೇಲ್ ಬೆಲೆ ಹೀಗಿದೆ
ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್ ರೇಟ್?
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್: ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,300 ಆಗಿದ್ದರೆ ಚೆನ್ನೈಯಲ್ಲಿ ಬೆಲೆ ರೂ. 49,692ರೂ. ಆಗಿದೆ. ಮುಂಬೈ, ಕೋಲ್ಕತ್ತಾ ಹಾಗೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 49,300 ರೂ. ಆಗಿದೆ.
ಇಂದು ಬೆಳ್ಳಿ ಬೆಲೆ ಎಷ್ಟಿದೆ?
ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ 67,100 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 72,100 ರೂ. ಇದೆ. ದೇಶಾದ್ಯಂತ ಕೆಲವು ನಗರಗಳನ್ನು ಹೊರತುಪಡಿಸಿ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏಕರೂಪವಿದೆ. ಚೆನ್ನೈ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣಂದಲ್ಲಿಯೂ 72,100 ರೂ. ನಿಗದಿಯಾಗಿದೆ.
ಬೆಂಗಳೂರಿನಲ್ಲಿ ಇಂದಿನ ಸಿಲ್ವರ್ ರೇಟ್
ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 721, ರೂ. 7,210 ಹಾಗೂ ರೂ. 72,100 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 72,100 ಆಗಿದ್ದರೆ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ ಬೆಳ್ಳಿ ದರ ರೂ. 67,100 ಗಳಾಗಿದೆ.
ಇದನ್ನೂ ಓದಿ: Amazon Kids+: ಮಕ್ಕಳಿಗಾಗಿ ಅಮೆಜಾನ್ ಬಿಡುಗಡೆ ಮಾಡಲಿದೆ ಹೊಸ ಗೇಮ್ಸ್! ಏನೆಲ್ಲ ಇರಲಿದೆ?
ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ