ರಷ್ಯಾ (Russia) ಹಾಗೂ ಉಕ್ರೇನ್ (Ukraine) ಯುದ್ಧದ (War) ಪರಿಣಾಮ (effect) ಕೇವಲ ಕಚ್ಚಾ ತೈಲದ (crude oil) ಮೇಲಲ್ಲದೆ ಜಾಗತಿಕವಾಗಿ ಚಿನ್ನ (Gold) ಹಾಗೂ ಬೆಳ್ಳಿ ದರಗಳ (Silver Rate) ಮೇಲೆಯೂ ಬೀಳುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳು ಒಂದು ರೀತಿಯಲ್ಲಿ ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ. ಆದಾಗ್ಯೂ, ಬೆಲೆಯಲ್ಲಿ ಅಷ್ಟೊಂದು ದೊಡ್ಡ ಬದಲಾಣೆಗಳು ಕಂಡುಬರುತ್ತಿಲ್ಲ. ನಿನ್ನೆಗೆ ಹೋಲಿಸಿದರೆ ಭಾರತದ ಮಾರುಕಟ್ಟೆಯಲ್ಲಿ ಆಭರಣ ಚಿನ್ನವು ತನ್ನ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಅದೇ, ಅಪರಂಜಿ ಚಿನ್ನದಲ್ಲಿ ಅತಿ ಕೊಂಚ ಇಳಿಕೆಯಾಗಿದೆ.
ಭಾರತದಲ್ಲಿ ಎಷ್ಟಿದೆ ಬಂಗಾರದ ಬೆಲೆ?
ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ (22 ಕ್ಯಾರೆಟ್) ದರದಲ್ಲಿ ನಿನ್ನೆಗೆ ಹೋಲಿಸಿದರೆ ಬದಲಾವಣೆ ಕಂಡುಬಂದಿಲ್ಲ. ದೇಶದಲ್ಲಿ ಒಂದು ಗ್ರಾಂ ಆಭರಣ ಚಿನ್ನದ ಬೆಲೆ ಇಂದು ರೂ. 4,795 ಆಗಿದೆ.
ಇಂದಿನ ಗೋಲ್ಡ್ ರೇಟ್ ಬಗ್ಗೆ ಮಾಹಿತಿ
ಒಂದು ಗ್ರಾಂ (1GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,795
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,246
ಎಂಟು ಗ್ರಾಂ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,360
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,968
ಹತ್ತು ಗ್ರಾಂ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,950
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,460
ನೂರು ಗ್ರಾಂ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,79,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,24,600
ಇದನ್ನೂ ಓದಿ: Today's Petrol-Diesel Price : ತುಮಕೂರಿನಲ್ಲಿ 2 ರೂ. ಹೆಚ್ಚಳ ಕಂಡ ಪೆಟ್ರೋಲ್ ಬೆಲೆ : ಇಂದಿನ ಪೆಟ್ರೋಲ್-ಡೀಸೆಲ್ ದರ ಇಲ್ಲಿದೆ
ಮಹಾನಗರಗಳಲ್ಲಿ ಎಷ್ಟಿದೆ ಬಂಗಾರದ ಬೆಲೆ?
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,950 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.48,250, ರೂ. 47,950, ರೂ. 47,950 ಆಗಿದೆ.
ಇಂದಿನ ಬೆಳ್ಳಿ ದರ
ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲೂ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.
ಬೆಂಗಳೂರಿನಲ್ಲಿ ಎಷ್ಟಿದೆ ಬೆಳ್ಳಿ ದರ?
ಇಂದು, ಬೆಂಗಳೂರಿನಲ್ಲಿ ಬೆಳ್ಳಿಯ ದರದಲ್ಲಿ ನಿನ್ನೆಗೆ ಹೋಲಿಸಿದರೆ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ ಹಾಗೂ 10gm, 100gm, 1000gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 713, ರೂ. 7,130 ಹಾಗೂ ರೂ. 71,300 ಗಳಾಗಿವೆ.
ಪ್ರಮುಖ ನಗರಗಳಲ್ಲಿ ಬೆಳ್ಳಿ ರೇಟ್
ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 71,300 ಆಗಿದ್ದರೆ ದೆಹಲಿಯಲ್ಲಿ 66,800 ಮುಂಬೈನಲ್ಲಿ 66,800 ಹಾಗೂ ಕೋಲ್ಕತ್ತದಲ್ಲೂ ರೂ. 66,800 ಗಳಾಗಿದೆ.
ಇದನ್ನೂ ಓದಿ: Gift deed or Will: ಗಿಫ್ಟ್ ಡೀಡ್ ಅಥವಾ ವಿಲ್.. ನಿಮ್ಮವರಿಗೆ ಕೊಡಲು ಯಾವುದು ಉತ್ತಮ?
ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ