Gold and Silver Price: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ; ನಿಮ್ಮ ನಗರಗಳಲ್ಲಿ ಇಂದು ಬೆಲೆ ಎಷ್ಟಿದೆ ನೋಡಿ

ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 52,590 ರೂ. ಇತ್ತು. ಇಂದು ಸಹ ಅದೇ ದರ ಇದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,200 ರೂ. ಇತ್ತು. ಇಂದು ಸಹ ಅಷ್ಟೇ ದರ ಇದೆ.

ಚಿನ್ನಾಭರಣ

ಚಿನ್ನಾಭರಣ

  • Share this:
    Gold and Silver Price on March 28th, 2022: ಚಿನ್ನ (Gold), ಬೆಳ್ಳಿ ದರ (Silver Rate) ಕಳೆದ ಒಂದು ತಿಂಗಳಿಂದ ಹೆಚ್ಚುತ್ತಲೇ ಇದೆ. ರಷ್ಯಾ (Russia)- ಉಕ್ರೇನ್‌ (Ukraine) ಯುದ್ಧ (War), ಷೇರು ಮಾರುಕಟ್ಟೆಯಲ್ಲಿ (Share Market) ಅಲ್ಲೋಲ - ಕಲ್ಲೋಲ ಇದಕ್ಕೆ ಪ್ರಮುಖ ಕಾರಣಗಳು. ಆದರೆ, ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,200 ರೂ. ಇತ್ತು. ಇಂದು ಸಹ ಅದೇ ದರ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 52,590 ರೂ. ಇತ್ತು. ಇಂದು ಸಹ ಅದೇ ದರ ಇದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

    ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

    ನೀವು ಚಿನ್ನ ಖರೀದಿಸುವ ಆಲೋಚನೆಯಲ್ಲಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 52,590 ರೂ. ಇತ್ತು. ಇಂದು ಸಹ ಅದೇ ದರ ಇದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,200 ರೂ. ಇತ್ತು. ಇಂದು ಸಹ ಅಷ್ಟೇ ದರ ಇದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

    ಇತರೇ ಮಹಾನಗರಗಳಲ್ಲಿ ಎಷ್ಟಿದೆ ಚಿನ್ನದ ಬೆಲೆ?

    ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರದ ಆಸುಪಾಸಿನಲ್ಲೇ ಇದೆ.

    ಇದನ್ನೂ ಓದಿ:

    ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 52,840 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 52,590 ರೂ. ಆಗಿದೆ.

    ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರದ ಆಸುಪಾಸಿನಲ್ಲೇ ಇದೆ.

    ಬೆಳ್ಳಿ ದರ:

    ದೇಶದಲ್ಲಿಂದು ಚಿನ್ನದ ಬೆಲೆ ಸ್ಥಿರತೆ ಕಾಯ್ದುಕೊಂಡಂತೆ ಬೆಳ್ಳಿ ದರ (Silver Rate) ದಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ನಿನ್ನೆ 1 ಕೆಜಿ ಬೆಳ್ಳಿಗೆ 68,900 ರೂ. ಇತ್ತು. ಇಂದಿನ ಬೆಲೆಯೂ ಅಷ್ಟೇ ಇದೆ.

    ಬೆಂಗಳೂರಿನಲ್ಲಿ ಇಂದಿನ ಬೆಳ್ಳಿ ದರ

    ಆದರೆ ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 73,400 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 73,400 ರೂ. ಆಗಿದೆ.

    ಇತರೇ ನಗರಗಳಲ್ಲಿ ಎಷ್ಟಿದೆ ಬೆಳ್ಳಿ ದರ?

    ಈ ಮಧ್ಯೆ, ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಕೋಲ್ಕತ್ತದಲ್ಲಿ ಬೆಳ್ಳಿ ದರ 68,900 ರೂ. ಆಗಿದೆ.

    ಇದನ್ನೂ ಓದಿ:

    ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.
    Published by:Annappa Achari
    First published: