Gold and Silver Price on April 24, 2022: ಈ ಇಡೀ ವಾರ ಚಾತಕ ಪಕ್ಷಿಗಳಂತೇ ಕಾಯುತ್ತಿದ್ದ ಆಭರಣ (Jewellery) ಪ್ರಿಯರಿಗೆ ಕೊನೆಗೂ ಇಂದು ಗುಡ್ ನ್ಯೂಸ್ (Good News) ಸಿಕ್ಕಿದೆ. ಅದೇನಪ್ಪಾ ಅಂದ್ರೆ ಚಿನ್ನ (Gold) ಹಾಗೂ ಬೆಳ್ಳಿ ಬೆಲೆಯಲ್ಲಿ (Silver Price) ಇಂದು ಇಳಿಕೆಯಾಗಿದೆ. ನಿನ್ನೆ 22 ಕ್ಯಾರೆಟ್ನ 10 ಗ್ರಾಂ ಆಭರಣ ಚಿನ್ನದ ಬೆಲೆ 49,300 ರೂಪಾಯಿ ಇದ್ದರೆ, 24 ಕ್ಯಾರೆಟ್ನ 10 ಗ್ರಾಂ ಬಂಗಾರದ ಬೆಲೆ 53,780 ಇತ್ತು. ಇಂದು ಭಾರತದ ಮಾರುಕಟ್ಟೆಯಲ್ಲಿ (Indian Market) 22 ಕ್ಯಾರೆಟ್ನ 10 ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ 300 ರೂಪಾಯಿ ಇಳಿಕೆಯಾಗಿ, 49,000 ರೂಪಾಯಿ ಆಗಿದೆ. ಹಾಗೆಯೇ ಇಂದು 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 330 ರೂಪಾಯಿ ಇಳಿಕೆಯಾಗಿದ್ದು, 53,450 ರೂಪಾಯಿ ನಿಗದಿಯಾಗಿದೆ. ಇನ್ನು ಬೆಳ್ಳಿ ದರವೂ ಇಳಿಕೆಯಾಗಿದೆ.
ಭಾರತದ ಮಾರುಕಟ್ಟೆಯಲ್ಲಿ ಇಂದು ಬಂಗಾರದ ಬೆಲೆ ಎಷ್ಟಿದೆ?
ಒಂದು ಗ್ರಾಂ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,378
ಎಂಟು ಗ್ರಾಂ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 39,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 42,760
ಹತ್ತು ಗ್ರಾಂ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 49,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 53,450
ನೂರು ಗ್ರಾಂ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,90,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,34,500
ಇದನ್ನೂ ಓದಿ: Petrol-Diesel Price Today: ಪೈಸೆಗಳ ವ್ಯತ್ಯಾಸ, ಇಂದು ಪೆಟ್ರೋಲ್-ಡಿಸೇಲ್ ಬೆಲೆ ಹೀಗಿದೆ
ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್ ರೇಟ್?
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್: ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,000 ಆಗಿದ್ದರೆ ಚೆನ್ನೈಯಲ್ಲಿ ಬೆಲೆ ರೂ. 49,450 ರೂ. ಆಗಿದೆ. ಮುಂಬೈ, ಕೋಲ್ಕತ್ತಾ ಹಾಗೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 49,000 ರೂ. ಆಗಿದೆ.
ಭಾರತದಲ್ಲಿ ಇಂದಿನ ಸಿಲ್ವರ್ ರೇಟ್
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಬೆಳ್ಳಿ ದರ ಕೆಜಿಗೆ ರೂ. 500 ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂಗಿನ ಬೆಳ್ಳಿ ಬೆಲೆ
ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 716, ರೂ. 7,160 ಹಾಗೂ ರೂ. 71,600 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 71,600 ಆಗಿದ್ದರೆ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ ಬೆಳ್ಳಿ ದರ 66,600 ರೂಪಾಯಿಗಳಾಗಿದೆ.
ಇದನ್ನೂ ಓದಿ: Plants to get rich: ಈ 5 ಗಿಡಗಳು ಮನೆಲಿದ್ರೆ ನೀವು ಶ್ರೀಮಂತರಾಗ್ತೀರಿ!
ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ