Gold Price: ನಿನ್ನೆಯ ಬೆಲೆಯನ್ನೇ ಉಳಿಸಿಕೊಂಡ ಚಿನ್ನ, ಸ್ವಲ್ಪ ಏರಿಕೆ ಕಂಡ ಬೆಳ್ಳಿ! ಇಂದಿನ ದರ ವಿವರ ಹೀಗಿದೆ ನೋಡಿ

ಚಿನ್ನ ಇನ್ನಷ್ಟು ದುಬಾರಿ ಆಗೋ ಮುಂಚೆ ಇಂದೇ ಅದನ್ನು ಕೊಳ್ಳಲು ಉತ್ತಮ ಸಮಯ. ಯಾಕೆಂದ್ರೆ ನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ (Indian Market) ಚಿನ್ನದ ಬೆಲೆಯಲ್ಲಿ (Gold Price) ಯಾವ ವ್ಯತ್ಯಾಸವೂ ಆಗಿಲ್ಲ. ಹಾಗಾದ್ರೆ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ತಿಳಿದುಕೊಳ್ಳಿ

ಚಿನ್ನದ ಆಭರಣಗಳ ಸಂಗ್ರಹ ಚಿತ್ರ

ಚಿನ್ನದ ಆಭರಣಗಳ ಸಂಗ್ರಹ ಚಿತ್ರ

  • Share this:
    Gold and Silver Price on July 19, 2022: ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ (Indian Market) ಚಿನ್ನದ ಬೆಲೆಯಲ್ಲಿ (Gold Price) ಯಾವ ವ್ಯತ್ಯಾಸವೂ ಆಗಿಲ್ಲ. ಇಂದೂ ಸಹ ಪ್ರತಿ ಗ್ರಾಂ ಆಭರಣ (Jewellery) ಚಿನ್ನದ ಬೆಲೆ ರೂ. 4,619 ಆಗಿದೆ. ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹಾಗಾಗಿ ಚಿನ್ನ ಇನ್ನಷ್ಟು ದುಬಾರಿ ಆಗೋ ಮುಂಚೆ ಇಂದೇ ಅದನ್ನು ಕೊಳ್ಳಲು ಉತ್ತಮ ಸಮಯ. ಅಲ್ಲದೆ, ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು ಹಾಗೂ ಕಚ್ಚಾ ತೈಲದಲ್ಲಾಗಿರುವ (Crude oil) ಬೆಲೆ ಏರಿಕೆ (Price Hike) ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ. ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 46,290 ಆಗಿದೆ.

    ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಇಲ್ಲಿ ತಿಳಿದುಕೊಳ್ಳೋಣ ಬನ್ನಿ…

    ಒಂದು ಗ್ರಾಂ (1GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,619

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,039

    ಎಂಟು ಗ್ರಾಂ (8GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 36,952

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,312

    ಹತ್ತು ಗ್ರಾಂ (10GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,190

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,390

    ನೂರು ಗ್ರಾಂ (100GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,61,900

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,03,900

    ಇದನ್ನೂ ಓದಿ: Nalin Jain: ವೋಕ್ಸ್ ವ್ಯಾಗನ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನಳಿನ್ ಜೈನ್ ನೇಮಕ

    ಬೆಂಗಳೂರು ಹಾಗೂ ಇತರೇ ಮಹಾನಗರದಲ್ಲಿ ಚಿನ್ನದ ಬೆಲೆ

    ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,290 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 46,880, ರೂ. 46,190, ರೂ. 46,190 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,190 ರೂ. ಆಗಿದೆ.

    ಇಂದಿನ ಬೆಳ್ಳಿ ದರ

    ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಅತ್ಯಲ್ಪ ಏರಿಕೆಯಾಗಿದೆ. ಆದಾಗ್ಯೂ ಕಳೆದ ತಿಂಗಳಿನಲ್ಲಿ ಅಂದರೆ ಜೂನ್ ಒಂದರಂದು ಬೆಳ್ಳಿಯ ಗರಿಷ್ಠ ಬೆಲೆ ಪ್ರತಿ ಕೆಜಿಗೆ ರೂ. 60,600 ಗೆ ತಲುಪಿತ್ತು ಹಾಗೂ ಜೂನ್ 30 ರಂದು ಕನಿಷ್ಠ ಬೆಲೆ ರೂ. 58,600ಗೆ ಕುಸಿದಿತ್ತು. ಇಂದು ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 56,000 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

    ಬೆಂಗಳೂರಿನಲ್ಲಿ ಇಂದು ಎಷ್ಟಿದೆ ಸಿಲ್ವರ್ ರೇಟ್?

    ಬೆಂಗಳೂರಿನಲ್ಲಿ ಬೆಳ್ಳಿ ದರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಏರಿಕೆಯಾಗಿದೆ. ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 617, ರೂ. 6,170 ಹಾಗೂ ರೂ. 61,700 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,700 ಆಗಿದ್ದರೆ ದೆಹಲಿಯಲ್ಲಿ ರೂ. 56,000 ಮುಂಬೈನಲ್ಲಿ ರೂ. 56,000 ಹಾಗೂ ಕೊಲ್ಕತ್ತದಲ್ಲೂ ರೂ. 56,000 ಗಳಾಗಿದೆ.

    ಇದನ್ನೂ ಓದಿ: Best Village Business: ಹಳ್ಳಿಯಲ್ಲಿದ್ದುಕೊಂಡೇ ಈ ಬ್ಯುಸಿನೆಸ್​ ಶುರು ಮಾಡಿ! ಕುಂತಲ್ಲೇ ತಿಂಗಳಿಗೆ 1 ಲಕ್ಷ ಪ್ರಾಫಿಟ್ ಬಾಸ್​

    ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
    Published by:Annappa Achari
    First published: