Gold and Silver Price: ಗ್ರಾಹಕರಿಗೆ ಇಲ್ಲಿದೆ ಭರ್ಜರಿ ನ್ಯೂಸ್, ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ!

ನಿನ್ನೆ ಒಂದು ಒಂದು ಗ್ರಾಂ ಚಿನ್ನದ ಬೆಲೆ (Gold Price) 4,690 ರೂಪಾಯಿ ಆಗಿತ್ತು. ಇಂದು ಇಳಿಕೆಯಾಗಿರುವ ಬಂಗಾರದ ಬೆಲೆ ಒಂದು ಗ್ರಾಂಗೆ 4,658 ರೂಪಾಯಿ ಆಗಿದೆ. ಅಂದರೆ ಬರೋಬ್ಬರಿ 10 ಗ್ರಾಂ ಚಿನ್ನದ ಮೇಲೆ 320 ರೂ. ಕಡಿಮೆಯಾಗಿದೆ.

ಚಿನ್ನದ ಆಭರಣಗಳ ಸಂಗ್ರಹ ಚಿತ್ರ

ಚಿನ್ನದ ಆಭರಣಗಳ ಸಂಗ್ರಹ ಚಿತ್ರ

  • Share this:
    Gold and Silver Price, July 27, 2022: ಕಳೆದ ಮೂರು ದಿನಗಳಿಂದ ಏರಿಕೆಯಾಗಿದ್ದ ಚಿನ್ನ (Gold) ಇಂದು ಇಳಿಕೆ ಕಂಡಿದ್ದು, ಗ್ರಾಹಕರಿಗೆ (Customers) ಖುಷಿ ನೀಡಿದೆ. ನಿನ್ನೆ ಒಂದು ಒಂದು ಗ್ರಾಂ ಚಿನ್ನದ ಬೆಲೆ (Gold Price) 4,690 ರೂಪಾಯಿ ಆಗಿತ್ತು. ಇಂದು ಇಳಿಕೆಯಾಗಿರುವ ಬಂಗಾರದ ಬೆಲೆ ಒಂದು ಗ್ರಾಂಗೆ 4,658 ರೂಪಾಯಿ ಆಗಿದೆ. ಬರೋಬ್ಬರಿ 10 ಗ್ರಾಂ ಚಿನ್ನದ ಮೇಲೆ 320 ರೂ. ಕಡಿಮೆಯಾಗಿದೆ. ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸುತ್ತಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹಾಗಾಗಿ ಚಿನ್ನ ಇನ್ನಷ್ಟು ದುಬಾರಿ ಆಗೋ ಮುಂಚೆ ಅದನ್ನು ಈಗಲೇ ಖರೀದಿಸುವುದು ಉತ್ತಮ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (Indian Market) ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು, ಹಣದುಬ್ಬರ ಹಾಗೂ ಕಚ್ಚಾ ತೈಲದಲ್ಲಾಗಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.

    ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 46,580 ಆಗಿದೆ.

    ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು  ಮಾಹಿತಿ ಪಡೆಯೋಣ ಬನ್ನಿ

    ಒಂದು ಗ್ರಾಂ (1GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,658
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,078

    ಎಂಟು ಗ್ರಾಂ (8GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,264
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,624

    ಹತ್ತು ಗ್ರಾಂ (10GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,580
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,780

    ನೂರು ಗ್ರಾಂ (100GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,65,800
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,07,800

    ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,580 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,280 ರೂ. 46,580, ರೂ. 46,580 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,580 ರೂ. ಆಗಿದೆ.

    ಇದನ್ನೂ ಓದಿ: Stock Market: ಲಕ್ಷಕ್ಕೆ ಎರಡೂವರೆ ಕೋಟಿ ರಿಟರ್ನ್ಸ್! ಅಂದು ಈ ಷೇರು ಖರೀದಿಸಿದ್ದವರು ಈಗ ಮಿಲಿಯನೇರ್

    ಬೆಳ್ಳಿ ದರ

    ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬೆಳ್ಳಿ ದರ ಒಂದು ಕೆಜಿಗೆ ಬೆಳ್ಳಿ ಬೆಲೆ 54,500 ರೂ. ಆಗಿದ್ದು, ಕೊಂಚ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

    ಬೆಂಗಳೂರಿನಲ್ಲಿ ಬೆಳ್ಳಿ ದರ

    ಬೆಂಗಳೂರಿನಲ್ಲೂ ಬೆಳ್ಳಿ ದರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 608, ರೂ. 6,080 ಹಾಗೂ ರೂ. 60,800 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 60,800 ಆಗಿದ್ದರೆ ದೆಹಲಿಯಲ್ಲಿ ರೂ. 54,500 ಮುಂಬೈನಲ್ಲಿ ರೂ. 54,500 ಹಾಗೂ ಕೊಲ್ಕತ್ತದಲ್ಲೂ ರೂ. 54,500 ಗಳಾಗಿದೆ.

    ಇದನ್ನೂ ಓದಿ: PMSYM scheme: 2 ರೂಪಾಯಿ ಉಳಿಸಿ, ಮಾಸಿಕ 3 ಸಾವಿರ ಪಿಂಚಣಿ ಪಡೆಯಿರಿ; ಕೇಂದ್ರ ಸರ್ಕಾರದ ಯೋಜನೆ ಬಗ್ಗೆ ನಿಮಗೆಷ್ಟು ಗೊತ್ತು?

    ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
    Published by:Annappa Achari
    First published: