Gold and Silver price on May 13, 2022: ನಿನ್ನೆಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ (Market) ಚಿನ್ನದ ಬೆಲೆಯಲ್ಲಿ (Gold Price) ಮತ್ತೆ ಏರಿಕೆಯಾಗಿದೆ. ನಿನ್ನೆ ಒಂದು ಗ್ರಾಂ ಆಭರಣ (Jewellery) ಚಿನ್ನದ ಬೆಲೆ 4,675 ರೂ. ಆಗಿತ್ತು. ದಿನದ ಕೊನೆಯಲ್ಲಿ ಅದರ ಬೆಲೆಯಲ್ಲಿ ಏರಿಕೆ (Hike) ಕಂಡುಬಂದು, ಇಂದು ಒಂದು ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,720 ಕ್ಕೆ ತಲುಪಿದೆ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬಂದಿತ್ತು. ಇನ್ನು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (International Market) ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳು ಚಿನ್ನ ಹಾಗೂ ಬೆಳ್ಳಿ ದರಗಳ (Silver Price) ಮೇಲೆ ಪ್ರಭಾವ ಬೀರುತ್ತಿವೆ.
ಭಾರತದಲ್ಲಿ ಇಂದು ಎಷ್ಟಿದೆ ಗೋಲ್ಡ್ ರೇಟ್?
ದೇಶದಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,200 ಆಗಿದೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ತಿಳಿದುಕೊಳ್ಳೋಣ ಬನ್ನಿ…
ಒಂದು ಗ್ರಾಂ (1GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,720
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,149
ಎಂಟು ಗ್ರಾಂ (8GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 37,760
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,192
ಹತ್ತು ಗ್ರಾಂ (10GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 47,200
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,490
ನೂರು ಗ್ರಾಂ (100GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,72,000
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,14,900
ಇದನ್ನೂ ಓದಿ: Electric Auto Tour: ಎಲೆಕ್ಟ್ರಿಕ್ ಆಟೋದಲ್ಲೇ ಯುವಕನ ಪ್ರವಾಸ! ಭೇಷ್, ಭೇಷ್ ಎಂದ ಆನಂದ್ ಮಹೀಂದ್ರಾ
ಬೆಂಗಳೂರಿನಲ್ಲಿ ಬಂಗಾರದ ಬೆಲೆ ಎಷ್ಟು?
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,200 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,350, ರೂ. 47,200, ರೂ. 47,200 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,200 ರೂ. ಆಗಿದೆ.
ಇಂದಿನ ಬೆಳ್ಳಿ ದರ
ಒಂದು ವಾರದಿಂದ ಭಾರತದಲ್ಲಿ ಬೆಳ್ಳಿ ದರದಲ್ಲಿ ಏರಿಳಿತ ಕಂಡುಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಕೊಂಚ ಏರಿಕೆಯಾಗಿದೆ. ನಿನ್ನೆಯಷ್ಟೆ ಒಂದು ಕೆಜಿಗೆ ಬೆಳ್ಳಿ ಬೆಲೆ 60,400 ಇದ್ದದ್ದು ಇಂದು ರೂ. 60,800 ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.
ಇದನ್ನೂ ಓದಿ: Old Currency Notes: ಹಳೆಯ, ಹರಿದ ನೋಟನ್ನ ಹೀಗೆ ಈಗ್ಲೇ ಎಕ್ಸ್ಚೇಂಜ್ ಮಾಡ್ಕೊಳ್ಳಿ!
ಬೆಂಗಳೂರಿನಲ್ಲಿ ಎಷ್ಟಿದೆ ಬೆಳ್ಳಿ ರೇಟ್?
ನಿನ್ನೆಗೆ ಹೋಲಿಸಿದರೆ ಇಂದು ಬೆಂಗಳೂರಿನಲ್ಲಿ ಬೆಳ್ಳಿ ದರದಲ್ಲಿ ಸ್ವಲ್ಪ ಏರಿಕೆ ಕಂಡುಬಂದಿದೆ. ಪ್ರಸ್ತುತ, ನಗರದಲ್ಲಿ ಇಂದು 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 650, ರೂ. 6,500 ಹಾಗೂ ರೂ. 65,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 65,000 ಆಗಿದ್ದರೆ ದೆಹಲಿಯಲ್ಲಿ ರೂ. 60,800 ಮುಂಬೈನಲ್ಲಿ ರೂ. 60,800 ಹಾಗೂ ಕೊಲ್ಕತ್ತದಲ್ಲೂ ರೂ. 60,800 ಗಳಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ