Gold and Silver price on May 17, 2022: ಆಭರಣ (Jewellery) ಖರೀದಿ ಮಾಡಲು ಬಯಸುವವರಿಗೆ ಈ ದಿನ ಕೊಂಚ ಸೂಕ್ತವಾಗಿದ್ದು, ನಿಮ್ಮಿಷ್ಟದ ಆಭರಣಗಳನ್ನು ಖರೀದಿ ಮಾಡಬಹುದು. ಯಾಕೆಂದರೆ ಹಳದಿ ಲೋಹದ ದರದಲ್ಲಿ ಕಳೆದೆರೆಡು ದಿನಗಳಲ್ಲಿ ಯಾವುದೇ ಬದಲಾವಣೆ (Changes) ಆಗಿಲ್ಲ. ನಿನ್ನೆ ಒಂದು ಗ್ರಾಂ ಆಭರಣ ಚಿನ್ನದ ಬೆಲೆ (Gold Price) 4,625 ರೂ. ಆಗಿತ್ತು. ದಿನದ ಕೊನೆಯಲ್ಲೂ ಸಹ ಅದರ ಬೆಲೆ ಸ್ಥಿರವಾಗಿದೆ, ಇಂದು ಸಹ ಒಂದು ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,625 ರೂ. ಇದೆ. ದೇಶದಲ್ಲಿ ಇಂದು 10 ಗ್ರಾಂ ಚಿನ್ನದ ಬೆಲೆ ರೂ. 46,250 ಆಗಿದೆ. ಇನ್ನು ನಿನ್ನೆ ಒಂದು ಕೆಜಿಗೆ ಬೆಳ್ಳಿ ಬೆಲೆ (Silver Price) 59,400 ಇದ್ದದ್ದು ಇಂದು ಸಹ ರೂ. 59,400 ಆಗಿದೆ.
ಹಾಗಾದರೆ ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ…
ಒಂದು ಗ್ರಾಂ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,625
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,045
ಎಂಟು ಗ್ರಾಂ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,360
ಹತ್ತು ಗ್ರಾಂ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,250
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,450
ನೂರು ಗ್ರಾಂ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,62,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,04,500
ಇದನ್ನೂ ಓದಿ: Unicorns of India: ಭಾರತದಲ್ಲಿ ಅತ್ಯಧಿಕ ಉದ್ಯೋಗ ಸೃಷ್ಟಿಸಿದ ಕಂಪನಿಗಳಿವು!
ಬೆಂಗಳೂರಿನಲ್ಲಿ ಇಂದಿನ ಗೋಲ್ಡ್ ರೇಟ್
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,250 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,440, ರೂ. 46,250, ರೂ. 47,250 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,250 ರೂ. ಆಗಿದೆ. ಚೆನ್ನೈ ಮತ್ತು ದೆಹಲಿಯಲ್ಲಿ ಕೊಂಚ ಏರಿತಿತ ಕಂಡಿದೆ.
ಇಂದಿನ ಬೆಳ್ಳಿ ದರ
ಭಾರತದ ಇತರ ನಗರಗಳ ಜೊತೆಗೇ ಬೆಂಗಳೂರಿನಲ್ಲಿಯೂ ಬೆಳ್ಳಿಯ ಬೇಡಿಕೆ ಹೆಚ್ಚುತ್ತಿದೆ. ಇದಕ್ಕೆ ಪ್ರಮುಖ ಕಾರಣವೆಂದರೆ ಕಳೆದ ಕೆಲವು ವರ್ಷಗಳಲ್ಲಿ ಚಿನ್ನದ ಬೆಲೆ ಗಗನಕ್ಕೇರಿದ್ದು ಇದನ್ನು ಭರಿಸಲಾಗದ ಮಧ್ಯಮವರ್ಗ ಬೆಳ್ಳಿಯತ್ತ ಚಿತ್ತ ಹರಿಸಿರುವುದು. ಏಕೆಂದರೆ ಬೆಳ್ಳಿಯ ಬೆಲೆ ಚಿನ್ನಕ್ಕಿಂತಲೂ ಕಡಿಮೆ ಇದ್ದು ಮಧ್ಯಮವರ್ಗದ ಜನರು ಭರಿಸುವಂತಿದೆ.
ನಿನ್ನೆ ಒಂದು ಕೆಜಿಗೆ ಬೆಳ್ಳಿ ಬೆಲೆ 59,400 ಇದ್ದದ್ದು ಇಂದು ಸಹ ರೂ. 59,400 ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.
ಇದನ್ನೂ ಓದಿ: China Economy Collapsed: ಚೀನಾದಲ್ಲಿ ಕುಸಿಯುತ್ತಿದೆ ಆರ್ಥಿಕ ಚಟುವಟಿಕೆ! ಏನು ಕಾರಣ?
ಪ್ರಸ್ತುತ, ಬೆಂಗಳೂರು ನಗರದಲ್ಲಿ ಇಂದು 1gm, 10gm, 100 gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 59.40, ರೂ. 594.20, ಹಾಗೂ ರೂ. 5,940 ಮತ್ತು 59,400 ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,500 ಆಗಿದ್ದರೆ ದೆಹಲಿಯಲ್ಲಿ ರೂ. 59,400 ಮುಂಬೈನಲ್ಲಿ ರೂ. 59,400 ಹಾಗೂ ಕೊಲ್ಕತ್ತದಲ್ಲೂ ರೂ. 59,400 ಗಳಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ