Gold Price: ಮತ್ತಷ್ಟು ತುಟ್ಟಿಯಾದ ಬಂಗಾರ, ಇಳಿಕೆಯಾದ ಬೆಳ್ಳಿ! ಇಂದಿನ ಬೆಲೆಗಳು ಎಷ್ಟಿವೆ ತಿಳಿದುಕೊಳ್ಳಿ

ಬೆಂಗಳೂರಿನಲ್ಲಿ (Bengaluru) ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,750 ಆಗಿದೆ. ಒಂದು ವಾರದಿಂದ ಭಾರತದಲ್ಲಿ ಬೆಳ್ಳಿ ದರದಲ್ಲಿ ಏರಿಳಿತ ಕಂಡುಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಇಳಿಕೆ ಕಂಡುಬಂದಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 61,600 ರೂ. ಆಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Gold and Silver Price on May 25, 2022: ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ (Indian Market) ಚಿನ್ನದ ಬೆಲೆಯಲ್ಲಿ (Gold Price) ಮತ್ತಷ್ಟು ನೆಗೆತ ಕಂಡುಬಂದಿದೆ. ಇಂದು ಒಂದು ಗ್ರಾಂ ಆಭರಣದ (Jewellery) ಚಿನ್ನದ ಬೆಲೆ ರೂ. 4,775 ಆಗಿದೆ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ (Cured Oil) ಬೆಲೆ ಏರಿಕೆ (Price Hike) ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ. ಬೆಂಗಳೂರಿನಲ್ಲಿ (Bengaluru) ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,750 ಆಗಿದೆ. ಒಂದು ವಾರದಿಂದ ಭಾರತದಲ್ಲಿ ಬೆಳ್ಳಿ ದರದಲ್ಲಿ (Silver Price) ಏರಿಳಿತ ಕಂಡುಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಇಳಿಕೆ ಕಂಡುಬಂದಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 61,600 ರೂ. ಆಗಿದೆ.

    ಆರ್ಥಿಕ ಸಂಕಷ್ಟದ ಕಾಲದಲ್ಲಿ ಕೈಯನ್ನು ಹಿಡಿಯುವ ನಂಬಿಕಸ್ಥ ಗೆಳೆಯ ಎಂದು ನಂಬಲಾಗಿರುವ ಚಿನ್ನವು ಈಗ ಹೂಡಿಕೆಯ ವಸ್ತುವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ. ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಬನ್ನಿ ತಿಳಿದುಕೊಳ್ಳೋಣ

    ಒಂದು ಗ್ರಾಂ (1GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,775

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,209

    ಎಂಟು ಗ್ರಾಂ (8GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,200

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,672

    ಹತ್ತು ಗ್ರಾಂ (10GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 47,750

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,090

     ನೂರು ಗ್ರಾಂ (100GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,77,500

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,20,900

    ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,750 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,350, ರೂ. 47,750, ರೂ. 47,750 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,750 ರೂ. ಆಗಿದೆ.

    ಇದನ್ನೂ ಓದಿ: Hotel Bill: ಹೋಟೆಲ್ ಬಿಲ್ ನಲ್ಲಿ ಸೇವಾ ಶುಲ್ಕ ವಿಧಿಸಬಹುದಾ? ಈ ಬಗ್ಗೆ ಕೇಂದ್ರ ಸರ್ಕಾರ ಏನು ಹೇಳುತ್ತೆ?

    ಇಂದಿನ ಬೆಳ್ಳಿ ದರ

    ಒಂದು ವಾರದಿಂದ ಭಾರತದಲ್ಲಿ ಬೆಳ್ಳಿ ದರದಲ್ಲಿ ಏರಿಳಿತ ಕಂಡುಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಇಳಿಕೆ ಕಂಡುಬಂದಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 61,600 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

    ಇದನ್ನೂ ಓದಿ: Petrol-Diesel Price Today: 9 ಜಿಲ್ಲೆಗಳಲ್ಲಿ ಮಾತ್ರ ಪೆಟ್ರೋಲ್ ಬೆಲೆ ಏರಿಕೆ, ಇಂದಿನ ದರ ಹೀಗಿದೆ

    ಬೆಂಗಳೂರಿನಲ್ಲಿ ಇಂದು ಎಷ್ಟಿದೆ ಬೆಳ್ಳಿ ಬೆಲೆ?

    ಪ್ರಸ್ತುತ, ಬೆಂಗಳೂರು ನಗರದಲ್ಲಿ ಇಂದು 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 661, ರೂ. 6,610 ಹಾಗೂ ರೂ. 66,100 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 66,100 ಆಗಿದ್ದರೆ ದೆಹಲಿಯಲ್ಲಿ ರೂ. 61,600 ಮುಂಬೈನಲ್ಲಿ ರೂ. 61,600 ಹಾಗೂ ಕೊಲ್ಕತ್ತದಲ್ಲೂ ರೂ. 61,600 ಗಳಾಗಿದೆ.
    Published by:Annappa Achari
    First published: