Gold and Silver Price on May 9, 2022: ನಿನ್ನೆಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ (Market) ಚಿನ್ನದ ಬೆಲೆಯಲ್ಲಿ (Gold Price) ಯಾವುದೇ ಹೆಚ್ಚಳವಾಗಿಲ್ಲ. ಇಂದು ಒಂದು ಗ್ರಾಂ ಆಭರಣ (Jewellery) ಚಿನ್ನದ ಬೆಲೆಯು ಇಂದು 4,740 ರೂಪಾಯಿ ಆಗಿದೆ. ಪ್ರಸಕ್ತ ನಡೆಯುತ್ತಿರುವ ಯುದ್ಧದ (War) ಸನ್ನಿವೇಶದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ (Crude oil) ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳು ಚಿನ್ನ ಹಾಗೂ ಬೆಳ್ಳಿ ದರಗಳ (Silver) ಮೇಲೆ ಪ್ರಭಾವ ಬೀರುತ್ತಿವೆ.
ಭಾರತದಲ್ಲಿ ಇಂದು ಎಷ್ಟಿದೆ ಚಿನ್ನದ ಬೆಲೆ?
ಇನ್ನು ಪೆಟ್ರೋಲ್ ಡೀಸೆಲ್ ಗಳಂತೆ ಬಂಗಾರದ ಬೆಲೆಗಳಲ್ಲೂ ಆಗಾಗ ವ್ಯತ್ಯಾಸಗಳು ಆಗುತ್ತಲೇ ಇರುತ್ತವೆ. ದೇಶದಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,400 ಆಗಿದೆ. ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಬನ್ನಿ ತಿಳಿದುಕೊಳ್ಳೋಣ…
ಒಂದು ಗ್ರಾಂ (1GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,740
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,171
ಎಂಟು ಗ್ರಾಂ (8GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 37,920
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,368
ಹತ್ತು ಗ್ರಾಂ (10GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 47,400
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,710
ನೂರು ಗ್ರಾಂ (100GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,74,000
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,17,100
ಇದನ್ನೂ ಓದಿ: Toyota Invest in Karnataka: ಟೊಯೋಟಾ ಕರ್ನಾಟಕದಲ್ಲೇ 4,800 ಕೋಟಿ ಹೂಡಿಕೆ ಮಾಡಿದ್ದೇಕೆ?
ಬೆಂಗಳೂರಿನಲ್ಲಿ ಎಷ್ಟಿದೆ ಚಿನ್ನದ ಬೆಲೆ?
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,400 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,770, ರೂ. 47,400, ರೂ. 47,400 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,400 ರೂ. ಆಗಿದೆ.
ಇಂದಿನ ಬೆಳ್ಳಿ ದರ
ಒಂದು ವಾರದಿಂದ ಭಾರತದಲ್ಲಿ ಬೆಳ್ಳಿ ದರದಲ್ಲಿ ಏರಿಳಿತ ಕಂಡುಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಒಂದು ಕೆಜಿಗೆ ಬೆಳ್ಳಿ ಬೆಲೆ ಇಂದು ರೂ. 62,500 ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.
ಬೆಂಗಳೂರಿನಲ್ಲಿಂದು ಸಿಲ್ವರ್ ರೇಟ್
ಇಂದು, ಬೆಂಗಳೂರಿನಲ್ಲಿ ಬೆಳ್ಳಿ ದರ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 668, ರೂ. 6,680 ಹಾಗೂ ರೂ. 66,800 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 66,800 ಆಗಿದ್ದರೆ ದೆಹಲಿಯಲ್ಲಿ ರೂ. 62,500 ಮುಂಬೈನಲ್ಲಿ ರೂ. 62,500 ಹಾಗೂ ಕೊಲ್ಕತ್ತದಲ್ಲೂ ರೂ. 62,500 ಗಳಾಗಿದೆ.
ಇದನ್ನೂ ಓದಿ: AC Best Offers : ಫ್ಲಿಫ್ಕಾರ್ಟ್ನಲ್ಲಿ ಅತ್ಯಂತ ಕಡಿಮೆ ಬೆಲೆಗೆ ACಗಳು ಲಭ್ಯ, ಭರ್ಜರಿ ಡಿಸ್ಕೌಂಟ್ ಇಲ್ಲಿದೆ ನೋಡಿ
ಒಟ್ಟಾರೆ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ-ಇಳಿಕೆ ಆಗಬಹುದು. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ