Gold Price: ಮತ್ತೆ ಏರಿಕೆಯಾದ ಚಿನ್ನ, ಬೆಳ್ಳಿ ದರ! ನಿಮ್ಮ ನಗರಗಳಲ್ಲಿ ಗೋಲ್ಡ್-ಸಿಲ್ವರ್ ಬೆಲೆಯೆಷ್ಟು?

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ? ಹಾಗಾದ್ರೆ ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Gold and Silver Price on March 14, 2022: ಇತ್ತೀಚೆಗೆ ದೇಶದಲ್ಲಿ ಬಂಗಾರ (Gold), ಬೆಳ್ಳಿ (Silver) ದರದಲ್ಲಿ (Price) ಭಾರಿ ಏರುಪೇರು ಉಂಟಾಗುತ್ತಿದೆ. ರಷ್ಯಾ (Russia) - ಉಕ್ರೇನ್ (Ukraine) ಯುದ್ಧ (War) ಪರಿಣಾಮ, ಭಾರತದ ಷೇರುಪೇಟೆಯಲ್ಲಿ ಏರಿಳಿತ - ಮುಂತಾದ ಕಾರಣಗಳಿಂದ ಈ ವ್ಯತ್ಯಾಸಗಳಾಗುತ್ತಿದೆ ಎನ್ನಲಾಗುತ್ತಿದೆ. ಇದೇ ರೀತಿ ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,400 ರೂ. ಇತ್ತು. ಇಂದು 10 ರೂ. ಹೆಚ್ಚಾಗಿ 48,410 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 52,800 ರೂ. ಇತ್ತು. ಇಂದು 10 ರೂ. ಹೆಚ್ಚಾಗಿ 52,810 ರೂ. ಆಗಿದೆ.

    ದೇಶದಲ್ಲಿ ಆಭರಣ ಪ್ರಿಯರ ಜನಸಂಖ್ಯೆಗೇನೂ ಕೊರತೆ ಇಲ್ಲ. ಈ ಹಿನ್ನೆಲೆ ಚಿನ್ನ ಖರೀದಿ, ವಹಿವಾಟು ಹೆಚ್ಚು ನಡೆಯುತ್ತಲೇ ಇರುತ್ತದೆ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ. ಚಿನ್ನವನ್ನು ಬಾಂಡ್‌ ರೂಪದಲ್ಲೂ ತೆಗೆದುಕೊಳ್ಳಲಾಗುತ್ತದೆ.

    ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ? ಹಾಗಾದ್ರೆ ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

    ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

    ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 52,800 ರೂ. ಇತ್ತು. ಇಂದು 10 ರೂ. ಹೆಚ್ಚಾಗಿ 52,810 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,400 ರೂ. ಇತ್ತು. ಇಂದು 10 ರೂ. ಹೆಚ್ಚಾಗಿ 48,410 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

    ಇತರೇ ಮಹಾನಗರಗಳಲ್ಲಿ ಇಂದಿನ ಚಿನ್ನದ ಬೆಲೆ

    ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 53,400 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 52,810 ರೂ. ಆಗಿದೆ.

     ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರದ ಆಸುಪಾಸಿನಲ್ಲೇ ಇದೆ.

    ಇದನ್ನೂ ಓದಿ: ICICI Bank ಗ್ರಾಹಕರಿಗೆ ಶುಭ ಸುದ್ದಿ.. FDಗಳ ಮೇಲಿನ ಬಡ್ಡಿ ದರ ಏರಿಕೆ.. ಎಷ್ಟು % ನೋಡಿ..

    ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರದ ಆಸುಪಾಸಿನಲ್ಲೇ ಇದೆ.

    ಇಂದು ಬೆಳ್ಳಿ ದರದಲ್ಲೂ ಏರಿಕೆ

    ದೇಶದಲ್ಲಿಂದು ಚಿನ್ನದ ಬೆಲೆ ಏರಿಕೆಯಾಗಿದ್ದರೆ ಬೆಳ್ಳಿ ದರ (Silver Rate) ಸಹ ಮತ್ತಷ್ಟು ಹೆಚ್ಚಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 70,300 ರೂ. ಇತ್ತು. ಇಂದು 4,400 ರೂ. ಏರಿಕೆಯಾಗಿ 74,700 ರೂ. ಆಗಿದೆ.

    ಕರ್ನಾಟಕದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ

    ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 74,700 ರೂ. ಆಗಿದೆ.

    ದೇಶದ ಇತರೇ ನಗರಗಳಲ್ಲಿ ಸಿಲ್ವರ್ ರೇಟ್

    ಈ ಮಧ್ಯೆ, ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಕೋಲ್ಕತ್ತದಲ್ಲಿ 70,300 ರೂ. ಆಗಿದೆ. ಇದೇ ರೀತಿ ಮುಂಬೈ, ಚೆನ್ನೈ, ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 74,700 ರೂ. ಆಗಿದೆ.

    ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

    ಇದನ್ನೂ ಓದಿ: Home Loan: ಮಾರ್ಚ್ 31ರೊಳಗೆ ಗೃಹ ಸಾಲ ಪಡೆದರೆ ಭರ್ಜರಿ ವಿನಾಯಿತಿ.. ಸಂಪೂರ್ಣ ಮಾಹಿತಿ ಇಲ್ಲಿದೆ..

    ಬೆಲೆಯಲ್ಲಿ ಏರಿಕೆ-ಇಳಿಕೆ ಆಗಬಹುದು


    ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು
    Published by:Annappa Achari
    First published: