Gold Price: ಎರಡು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ ಚಿನ್ನದ ಬೆಲೆ! ಮತ್ಯಾಕೆ ತಡ ಈಗಲೇ ಬಂಗಾರ ಖರೀದಿಸಿ

ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ (22 ಕ್ಯಾರೆಟ್) ದರದಲ್ಲಿ ನಿನ್ನೆಗೆ ಹೋಲಿಸಿದರೆ ಬದಲಾವಣೆ ಕಂಡುಬಂದಿಲ್ಲ. ದೇಶದಲ್ಲಿ ಒಂದು ಗ್ರಾಂ ಆಭರಣ ಚಿನ್ನದ ಬೆಲೆ ಇಂದು ರೂ. 4,780 ಆಗಿದೆ.

ಬಂಗಾರದ ಆಭರಣಗಳ ಸಂಗ್ರಹ ಚಿತ್ರ

ಬಂಗಾರದ ಆಭರಣಗಳ ಸಂಗ್ರಹ ಚಿತ್ರ

  • Share this:
    Gold And Silver Price on April 7, 2022: ಕಳೆದ ಕೆಲದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಕಚ್ಚಾ (International Market) ತೈಲದ ಬೆಲೆ ಏರಿಕೆ (Oil Price Hike) ಮತ್ತು ಮುಂದುವರೆದಿರುವ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ (Russia and Ukraine War) ಪರಿಣಾಮವು ಜಾಗತಿಕ ಮಟ್ಟದಲ್ಲಿ ಚಿನ್ನ (Gold)  ಬೆಳ್ಳಿ ದರಗಳ (Silver Price) ಮೇಲೆ ಬೀರುತ್ತಿರುವುದನ್ನು ಗಮನಿಸಬಹುದಾಗಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳು ಒಂದು ರೀತಿಯಲ್ಲಿ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದರೂ ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡು ಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ ಆಭರಣ (Jewellery) ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ.

    ಭಾರತದಲ್ಲಿ ಇಂದು ಎಷ್ಟಿದೆ ಚಿನ್ನದ ಬೆಲೆ?

    ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ (22 ಕ್ಯಾರಟ್) ದರದಲ್ಲಿ ನಿನ್ನೆಗೆ ಹೋಲಿಸಿದರೆ ಬದಲಾವಣೆ ಕಂಡುಬಂದಿಲ್ಲ. ದೇಶದಲ್ಲಿ ಒಂದು ಗ್ರಾಂ ಆಭರಣ ಚಿನ್ನದ ಬೆಲೆ ಇಂದು ರೂ. 4,780 ಆಗಿದೆ.

    ಹಾಗಿದ್ರೆ ಇಂದು ಚಿನ್ನದ ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳು ಎಷ್ಟಿದೆ ಎನ್ನುವುದರ ಬಗ್ಗೆ ತಿಳಿಯೋಣ ಬನ್ನಿ…

    ಒಂದು ಗ್ರಾಂ (1GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,780

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,214

    ಎಂಟು ಗ್ರಾಂ (8GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,240

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,712

    ಇದನ್ನೂ ಓದಿ: ಮಕ್ಕಳೂ e-Shram ಯೋಜನೆ ಅಡಿ ನೋಂದಾಯಿಸಿಕೊಳ್ಳಬಹುದೇ? ಏನೆಲ್ಲ ಪ್ರಯೋಜನ ಸಿಗುತ್ತೆ?

    ಹತ್ತು ಗ್ರಾಂ (10GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,800

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,140

    ನೂರು ಗ್ರಾಂ (100GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,78,000

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,21,400

    ಬೆಂಗಳೂರು ಹಾಗೂ ಇತರೇ ನಗರಗಳಲ್ಲಿ ಗೋಲ್ಡ್ ರೇಟ್

    ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,800 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.48,420, ರೂ. 47,800, ರೂ. 47,800 ಆಗಿದೆ.

    ಭಾರತದಲ್ಲಿ ಇಂದಿನ ಬೆಳ್ಳಿ ದರ

    ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

    ಬೆಂಗಳೂರು ಸೇರಿ ಮಹಾನಗರಗಳಲ್ಲಿ ಇಂದಿನ ಬೆಳ್ಳಿ ಬೆಲೆ

    ಇಂದು, ಬೆಂಗಳೂರಿನಲ್ಲಿ 10gm, 100gm, 1000gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 707, ರೂ. 7,070 ಹಾಗೂ ರೂ. 70,700 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 70,700 ಆಗಿದ್ದರೆ ದೆಹಲಿಯಲ್ಲಿ 66,200 ಮುಂಬೈನಲ್ಲಿ 66,200 ಹಾಗೂ ಕೋಲ್ಕತ್ತದಲ್ಲೂ ರೂ. 66,200 ಗಳಾಗಿದೆ.

    ಇದನ್ನೂ ಓದಿ: Petrol Prices: ಈ ದೇಶಗಳಲ್ಲಿ ಪೆಟ್ರೋಲ್ ತುಂಬಾ ಅಗ್ಗವಂತೆ, ಭಾರತಕ್ಕೆ ಹೋಲಿಸಿದರೆ ಎಷ್ಟು ಅಗ್ಗ ಗೊತ್ತಾ?

    ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
    Published by:Annappa Achari
    First published: