Gold Price: ಚಿನ್ನ ಖರೀದಿಗೆ ಇಂದೇ ಶುಭದಿನ! ಮತ್ತಷ್ಟು ಇಳಿಕೆಯಾಯ್ತು ಗೋಲ್ಡ್, ಸಿಲ್ವರ್ ರೇಟ್

ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

ಚಿನ್ನ

ಚಿನ್ನ

 • Share this:
  Gold Rate on March 16th, 2022: ರಷ್ಯಾ (Russia) - ಉಕ್ರೇನ್‌ (Ukraine) ಯುದ್ಧ (War) ಸದ್ಯಕ್ಕೆ ನಿಲ್ಲುವ ಲಕ್ಷಣಗಳಂತೂ ಕಾಣುತ್ತಿಲ್ಲ. ಇದರಿಂದ ದೇಶದಲ್ಲಿ ಬಂಗಾರ, ಬೆಳ್ಳಿ ದರದಲ್ಲಿ ಭಾರಿ ಏರಿಕೆಯಾಗಿತ್ತು. ಆದರೆ, ನಾನಾ ಕಾರಣಗಳಿಂದ ಮತ್ತೆ ಚಿನ್ನ, ಬೆಳ್ಳಿ ಮೌಲ್ಯ ಕುಸಿಯುತ್ತಿದೆ. ಸತತ ಎರಡನೇ ದಿನವಾದ ಇಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇತ್ತು. ಇಂದು 500 ರೂ. ಕಡಿಮೆಯಾಗಿ 47,600 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 52,470 ರೂ. ಇತ್ತು. ಇಂದು 540 ರೂ. ಇಳಿಕೆಯಾಗಿ 51,930 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

   ದೇಶದಲ್ಲಿ ಆಭರಣ ಪ್ರಿಯರ ಜನಸಂಖ್ಯೆಗೇನೂ ಕೊರತೆ ಇಲ್ಲ. ಈ ಹಿನ್ನೆಲೆ ಚಿನ್ನ, ಬೆಳ್ಳಿ ಖರೀದಿ, ವಹಿವಾಟಿಗೂ ಸಹ ಕೊರತೆ ಇಲ್ಲ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ. ಚಿನ್ನವನ್ನು ಬಾಂಡ್‌ ರೂಪದಲ್ಲೂ ಸಹ ತೆಗೆದುಕೊಳ್ಳಲಾಗುತ್ತದೆ.

   ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

  ನೀವು ಚಿನ್ನ ಖರೀದಿಸುವ ಆಲೋಚನೆಯಲ್ಲಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 52,470 ರೂ. ಇತ್ತು. ಇಂದು 540 ರೂ. ಇಳಿಕೆಯಾಗಿ 51,930 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,100 ರೂ. ಇತ್ತು. ಇಂದು 500 ರೂ. ಕಡಿಮೆಯಾಗಿ 47,600 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

  ಇದನ್ನೂ ಓದಿ: 7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಕಾದಿದೆ ಗುಡ್​​ನ್ಯೂಸ್​​: ಈ ಸಲ ಇಷ್ಟು ಪರ್ಸೆಂಟ್ DA ಏರಿಕೆ..?

  ದೇಶದ ಇತರೇ ನಗರಗಳಲ್ಲಿ ಎಷ್ಟಿದೆ ಚಿನ್ನದ ಬೆಲೆ?

  ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 52,570 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 51,930 ರೂ. ಆಗಿದೆ.

  ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 52 ಸಾವಿರದಿಂದ 53 ಸಾವಿರದ ಆಸುಪಾಸಿನಲ್ಲೇ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 52 ಸಾವಿರದ ಆಸುಪಾಸಿನಲ್ಲೇ ಇದೆ.

  ಬೆಳ್ಳಿ ದರ:

  ದೇಶದಲ್ಲಿಂದು ಚಿನ್ನದ ಬೆಲೆ ಕಡಿಮೆಯಾದಂತೆ ಬೆಳ್ಳಿ ದರ (Silver Rate) ಸಹ ಇಳಿಕೆಯಾಗಿದೆ.. ನಿನ್ನೆ 1 ಕೆಜಿ ಬೆಳ್ಳಿಗೆ 70,000 ರೂ. ಇತ್ತು. ಇಂದು 1,000 ರೂ. ಕಡಿಮೆಯಾಗಿ 69,000 ರೂ. ಆಗಿದೆ.

  ಮಹಾನಗರಗಳಲ್ಲಿ ಎಷ್ಟಿದೆ ಬೆಳ್ಳಿ ರೇಟ್?

  ಆದರೆ ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 72,800 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 72,800 ರೂ. ಆಗಿದೆ.

  ಈ ಮಧ್ಯೆ, ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಕೋಲ್ಕತ್ತದಲ್ಲಿ ಬೆಳ್ಳಿ ದರ 69,000 ರೂ. ಆಗಿದೆ.

  ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

  ಇದನ್ನೂ ಓದಿ: Property Tax: ಖರೀದಿಸಿದ್ದಕ್ಕಿಂತ ಹೆಚ್ಚಿನ ಬೆಲೆಗೆ ಆಸ್ತಿಯನ್ನು ಮಾರುವಾಗ ಈ ರೀತಿ ತೆರಿಗೆಯನ್ನು ಉಳಿಸಿ

  ಸೂಚನೆ: ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
  Published by:Annappa Achari
  First published: