Gold and Silver Price on May 12, 2022: ನಿನ್ನೆಗೆ (Yesterday) ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ (Market) ಚಿನ್ನದ ಬೆಲೆಯಲ್ಲಿ (Gold Price) ಮತ್ತಷ್ಟು ಇಳಿಕೆಯಾಗಿದೆ. ನಿನ್ನೆ ಒಂದು ಗ್ರಾಂ ಆಭರಣ (Jewelry) ಚಿನ್ನದ ಬೆಲೆಯು 4,710 ರೂಪಾಯಿ ಇದ್ದದ್ದು ಇಂದು 4,675 ರೂ. ಆಗಿದೆ. ಹಾಗಾಗಿ ನೀವೇನಾದರೂ ಇಂದು ಚಿನ್ನ ಖರೀದಿಸಬಯಸುತ್ತಿದ್ದರೆ ಆ ಕೆಲಸ ಈಗಲೇ ಮಾಡಿ. ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬರುತ್ತಿದೆ. ಇನ್ನು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ (Crude oil) ಬೆಲೆ ಏರಿಕೆ (Price Hike) ಹಾಗೂ ಇತರೆ ಜಾಗತಿಕ ಅಂಶಗಳು ಚಿನ್ನ ಹಾಗೂ ಬೆಳ್ಳಿ ದರಗಳ (Silver Rate) ಮೇಲೆ ಪ್ರಭಾವ ಬೀರುತ್ತಿವೆ.
ಭಾರತದಲ್ಲಿ ಎಷ್ಟಿದೆ ಚಿನ್ನದ ಬೆಲೆ?
ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ದೇಶದಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 46,750 ಆಗಿದೆ. ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಬನ್ನಿ ತಿಳಿದುಕೊಳ್ಳೋಣ.
ಒಂದು ಗ್ರಾಂ (1GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,675
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,100
ಎಂಟು ಗ್ರಾಂ (8GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 37,400
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,800
ಹತ್ತು ಗ್ರಾಂ (10GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 46,750
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,000
ನೂರು ಗ್ರಾಂ (100GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,67,500
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,10,000
ಇದನ್ನೂ ಓದಿ: US Dollar and Indian Rupee: ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ! ಈ ಏಳು ಕಾರಣಗಳೇ ಜನಸಾಮಾನ್ಯರ ಜೀವನದ ಮೇಲೆ ಬೀಳುವ ಪರಿಣಾಮಗಳು
ಬೆಂಗಳೂರಿನಲ್ಲಿ ಎಷ್ಟಿದೆ ಬೆಲೆ?
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,750 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,870, ರೂ. 46,750, ರೂ. 46,750 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,750 ರೂ. ಆಗಿದೆ.
ಇಂದಿನ ಬೆಳ್ಳಿ ದರ
ಒಂದು ವಾರದಿಂದ ಭಾರತದಲ್ಲಿ ಬೆಳ್ಳಿ ದರದಲ್ಲಿ ಏರಿಳಿತ ಕಂಡುಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಮತ್ತಷ್ಟು ಇಳಿಕೆಯಾಗಿದ್ದು ಆಭರಣ ಕೊಳ್ಳಲು ಇದು ಒಳ್ಳೆಯ ಸಮಯ ಎಂದೇ ಹೇಳಬಹುದು. ನಿನ್ನೆಯಷ್ಟೆ ಒಂದು ಕೆಜಿಗೆ ಬೆಳ್ಳಿ ಬೆಲೆ 61,900 ಇದ್ದದ್ದು ಇಂದು ರೂ. 60,400 ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.
ಬೆಂಗಳೂರಿನಲ್ಲಿ ಎಷ್ಟಿದೆ ಸಿಲ್ವರ್ ರೇಟ್?
ಇಂದು, ಬೆಂಗಳೂರಿನಲ್ಲಿ ಬೆಳ್ಳಿ ದರ ನಿನ್ನೆಗೆ ಹೋಲಿಸಿದರೆ ಇಳಿತ ಕಂಡುಬಂದಿದೆ. ಪ್ರಸ್ತುತ, ನಗರದಲ್ಲಿ ಇಂದು 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 648, ರೂ. 6,480 ಹಾಗೂ ರೂ. 64,800 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,800 ಆಗಿದ್ದರೆ ದೆಹಲಿಯಲ್ಲಿ ರೂ. 60,400 ಮುಂಬೈನಲ್ಲಿ ರೂ. 60,400 ಹಾಗೂ ಕೊಲ್ಕತ್ತದಲ್ಲೂ ರೂ. 60,400 ಗಳಾಗಿದೆ.
ಇದನ್ನೂ ಓದಿ: Coins: ಸಾಮಾನ್ಯ ಅಂಗಡಿಗಳಲ್ಲಿ ತೆಗೆದುಕೊಳ್ಳದ ಈ ನಾಣ್ಯಗಳನ್ನು ಅಂಚೆ ಕಚೇರಿಯವರು ಸ್ವೀಕರಿಸುತ್ತಾರೆ
ಒಟ್ಟಾರೆ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ-ಇಳಿಕೆ ಆಗಬಹುದು. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ