Gold and Silver Price: ಅಲ್ಪ ಏರಿಕೆ ಕಂಡ ಚಿನ್ನ ಹಾಗೂ ಬೆಳ್ಳಿ ದರ; ಇಂದಿನ ಬೆಲೆ ಹೇಗಿದೆ ನೋಡಿ

ಚಿನ್ನದ ಬೆಲೆಯಲ್ಲಿ (Gold Price) ಸ್ವಲ್ಪ ಏರಿಕೆ ಆಗಿದೆ. ಇಂದು ಒಂದು ಗ್ರಾಂ ಆಭರಣದ  (Jewellery) ಚಿನ್ನದ ಬೆಲೆ ರೂ. 4,715 ಆಗಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ (Silver Price) 62,100 ರೂ. ಆಗಿದೆ.

ಚಿನ್ನದ ಆಭರಣಗಳ ಸಂಗ್ರಹ ಚಿತ್ರ

ಚಿನ್ನದ ಆಭರಣಗಳ ಸಂಗ್ರಹ ಚಿತ್ರ

  • Share this:
    Gold and Silver Rate on May 24, 2022: ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ (Indian Market) ಚಿನ್ನದ ಬೆಲೆಯಲ್ಲಿ (Gold Price) ಸ್ವಲ್ಪ ಏರಿಕೆ ಆಗಿದೆ. ಇಂದು ಒಂದು ಗ್ರಾಂ ಆಭರಣದ  (Jewellery) ಚಿನ್ನದ ಬೆಲೆ ರೂ. 4,715 ಆಗಿದೆ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ  (Crude oil) ಬೆಲೆ ಏರಿಕೆ (Price Hike) ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ. ದೇಶದಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,150 ಆಗಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ (Silver Price) 62,100 ರೂ. ಆಗಿದೆ.

    ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಬನ್ನಿ ತಿಳಿದುಕೊಳ್ಳೋಣ

    ಒಂದು ಗ್ರಾಂ (1GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,715

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,143

     ಎಂಟು ಗ್ರಾಂ (8GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,720

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,144

     ಹತ್ತು ಗ್ರಾಂ (10GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,150

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,430

     ನೂರು ಗ್ರಾಂ (100GM)

    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,71,500

    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,14,300

    ಇದನ್ನೂ ಓದಿ: Petrol And Diesel Price: ಈ ಜಿಲ್ಲೆಗಳಲ್ಲಿ ಮತ್ತೆ ಪೆಟ್ರೋಲ್ ಬೆಲೆ ಇಳಿಕೆ: ಇಲ್ಲಿದೆ ಇವತ್ತಿನ ದರ

    ಬೆಂಗಳೂರಿನಲ್ಲಿ ಎಷ್ಟಿದೆ ಬಂಗಾರದ ಬೆಲೆ?

    ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,150 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,370, ರೂ. 47,150, ರೂ. 47,150 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,150 ರೂ. ಆಗಿದೆ.

     ಇಂದಿನ ಬೆಳ್ಳಿ ದರ

    ಒಂದು ವಾರದಿಂದ ಭಾರತದಲ್ಲಿ ಬೆಳ್ಳಿ ದರದಲ್ಲಿ ಏರಿಳಿತ ಕಂಡುಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸ್ವಲ್ಪ ಏರಿಕೆಯಾಗಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 62,100 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

    ಬೆಂಗಳೂರಿನಲ್ಲಿ ಇಂದಿನ ಬೆಳ್ಳಿ ಬೆಲೆ

    ಪ್ರಸ್ತುತ, ಬೆಂಗಳೂರು ನಗರದಲ್ಲಿ ಇಂದು 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 665, ರೂ. 6,650 ಹಾಗೂ ರೂ. 66,500 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 66,500 ಆಗಿದ್ದರೆ ದೆಹಲಿಯಲ್ಲಿ ರೂ. 62,100 ಮುಂಬೈನಲ್ಲಿ ರೂ. 62,100 ಹಾಗೂ ಕೊಲ್ಕತ್ತದಲ್ಲೂ ರೂ. 62,100 ಗಳಾಗಿದೆ.

    ಇದನ್ನೂ ಓದಿ: Money: ನೀವು ಜೀವನದಲ್ಲಿ ಈ ತಪ್ಪುಗಳನ್ನ ಮಾಡದಿದ್ರೆ ನಿಮಗೆ ಹಣದ ಕೊರತೆಯೇ ಇರಲ್ಲ

    ಒಟ್ಟಾರೆ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ-ಇಳಿಕೆ ಆಗಬಹುದು.  ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.
    Published by:Annappa Achari
    First published: