ಹಣಕಾಸು ಸಚಿವೆ (Finance Minister) ನಿರ್ಮಲಾ ಸೀತಾರಾಮನ್ (Nirmala Sitharaman) ಬುಧವಾರ (Wednesday) ಸಂಸತ್ತಿನಲ್ಲಿ 2023-24ನೇ ಹಣಕಾಸು ವರ್ಷದ ಬಜೆಟ್ (Budget 2023-24) ಮಂಡನೆ ಆರಂಭ ಮಾಡಿದ್ದು. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ (Election) ಮುನ್ನವೇ ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವೂ (Government) ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದ್ದು. ಆರ್ಥಿಕತೆಯ ವಿವಿಧ ಕ್ಷೇತ್ರಗಳನ್ನು ಉತ್ತೇಜಿಸಲು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.
ಸಂಸತ್ತಿನ ಬಜೆಟ್ ಅಧಿವೇಶನ ಮಂಗಳವಾರ ಆರಂಭಗೊಂಡಿದ್ದು, ಮೊದಲ ಭಾಗ ಫೆಬ್ರವರಿ 13 ರಂದು ಮುಕ್ತಾಯವಾಗಲಿದೆ. ಬೆಳಗ್ಗೆ 11 ಗಂಟೆಗೆ ಬಜೆಟ್ ಭಾಷಣ ಆರಂಭವಾಗಿದ್ದು, ಬಹುನಿರೀಕ್ಷಿತ 2023-24 ರ ಕೇಂದ್ರ ಬಜೆಟ್ನ ಕ್ಷಣ ಕ್ಷಣದ ಮಾಹಿತಿ ನಿಮ್ಮ ನ್ಯೂಸ್ 18 ಕನ್ನಡ ಡಾಟ್ ಕಾಂನಲ್ಲಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ