Union Budget 2023: ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಆರ್ಥಿಕತೆಯ ವಿವಿಧ ಕ್ಷೇತ್ರಗಳನ್ನು ಉತ್ತೇಜಿಸಲು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಹಿಳೆಯರಿಗೆ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯ ಪ್ರಮಾಣಪತ್ರವನ್ನು ಇನ್ನೆರಡು ವರ್ಷದ ವರೆಗೆ ಅಂದರೆ ಮಾರ್ಚ್ 2025 ರವರೆಗೆ ಲಭ್ಯವಿರುವಂತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಉದ್ಯೋಗ ಕ್ಷೇತ್ರದ ಅಭಿವೃದ್ದಿಗಾಗಿ ಹಾಗೂ ಮಹಿಳಾ ಸಭಲೀಕರಕ್ಕೆ ಈ ಯೋಜನೆ ಸಹಾಯವಾಗಲಿದೆ.
ಇದನ್ನೂ ಓದಿ: Budget 2023 LIVE: 5 - 7 ಲಕ್ಷದವರೆಗೆ ಆದಾಯ ತೆರಿಗೆ ಇಲ್ಲ: ವಿತ್ತ ಸಚಿವೆ
ಮಹಿಳೆಯರ ಹೆಸರಿನಲ್ಲಿ ರೂ 2 ಲಕ್ಷದವರೆಗೆ ಠೇವಣಿ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಣ್ಣ ಉಳಿತಾಯ ಯೋಜನೆಗೆ ಆದ್ಯತೆ ದೊರೆತಿದೆ. 2 ವರ್ಷಗಳ ಅವಧಿಯೊಂದಿಗೆ, 7.5% ಸ್ಥಿರ ಬಡ್ಡಿದರದೊಂದಿದೆ ಮುಂದರಿಸಬಹುದು ಅಥವಾ ಸಾಲ ಹಿಂತೆಗೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ. ಕಡಿಮೆ ಬಡ್ಡಿದರದಲ್ಲಿ ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯು ನೀಡಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ