ಚಾಮರಾಜನಗರ: ರಾಜ್ಯದ ವಿವಿಧ ಊರುಗಳಲ್ಲಿ ವಿದ್ಯುತ್ ಬಿಲ್ ಕಟ್ಟದಿರುವ ಘೋಷಣೆ ಹೆಚ್ಚುತ್ತಿದೆ! ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Government) ಅಧಿಕಾರಕ್ಕೆ ಬಂದರೆ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದ್ದಾರೆ. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಹೀಗಾಗಿ ನಾವು ವಿದ್ಯುತ್ ಬಿಲ್ (Power Bill) ಕಟ್ಟಲ್ಲ ಎಂದು ಚಾಮರಾಜನಗರದ ಗ್ರಾಮವೊಂದರ ಜನರು (Chamarajanagar Viral News) ಪಟ್ಟು ಹಿಡಿದಿದ್ದಾರೆ.
ಚೆಸ್ಕಾಂ ಸಿಬ್ಬಂದಿ ವಾಪಸ್!
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೋಕಿನ ಹೊನ್ನೂರು ಗ್ರಾಮದಲ್ಲೇ ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಜನರು ಪಟ್ಟು ಹಿಡಿದಿದ್ದಾರೆ. ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಚೆಸ್ಕಾಂ ಸಿಬ್ಬಂದಿಯನ್ನು ಹೊನ್ನೂರು ಗ್ರಾಮಸ್ಥರು ವಾಪಸ್ ಕಳಿಸಿದ್ದಾರೆ.
ನಾವ್ಯಾಕೆ ಬಿಲ್ ಕಟ್ಬೇಕು?
ವಿದ್ಯುತ್ ನಿಮಗೂ ಫ್ರೀ, ನನಗೂ ಫ್ರೀ, ಅಧಿಕಾರಿಗಳಿಗೂ ಫ್ರೀ ಎಂದು ಚುನಾವಣಾ ಪ್ರಚಾರದ ವೇಳೆ ಸಿದ್ದರಾಮಯ್ಯ ಹೇಳಿದ್ದರು. ಗ್ಯಾರಂಟಿ ಕಾರ್ಡ್‌ನ್ನು ಸಹ ಕಾಂಗ್ರೆಸ್ ನೀಡಿದೆ. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ.
ಇದನ್ನೂ ಓದಿ: Interesting Fact: ಪ್ರಧಾನಿ ಮೋದಿಗೆ ಹುಲಿ ಕಾಣದಿರಲು ಇದೇ ಕಾರಣ!
ಚಾಮರಾಜನಗರ ಜಿಲ್ಲೆಯಿಂದ ಮೂವರು ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿದ್ದೇವೆ. ಹೀಗಾಗಿ ನಾವ್ಯಾಕೆ ಬಿಲ್ ಕಟ್ಟಬೇಕು? ಎಂದು ಗ್ರಾಮಸ್ಥರು ವಾದಿಸಿದ್ದಾರೆ. ವಿದ್ಯುತ್ ಬಿಲ್ ಪಡೆಯಲು ನಿರಾಕರಿಸಿ ಚೆಸ್ಕಾಂ ಸಿಬ್ಬಂದಿಯನ್ನು ವಾಪಸ್ ಕಳಿಸಿದ್ದಾರೆ.
ಉಡುಪಿಯಲ್ಲೂ ಬಿಲ್ ಕಟ್ಟಲ್ವಂತೆ
ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಚೀಟಿ ಬರೆದು ವ್ಯಕ್ತಿಯೊಬ್ಬರು ಮೆಸ್ಕಾಂಗೆ ಶಾಕ್ ನೀಡಿದ್ದಾರೆ! ಹೌದು, ಇಂತಹದ್ದೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ತಮ್ಮ ಮನೆಯ ಮೀಟರ್ ಬೋರ್ಡ್ಗೆ‘’ಮೆಸ್ಕಾಂನವರೆ ಕ್ಷಮಿಸಿ, ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ. ನಾವು ಬಿಲ್ ಕಟ್ಟಲ್ಲ” ಎಂದು ಚೀಟಿ ಅಂಟಿಸಿದ್ದಾರೆ.
ನಾನು ಕೂಡ ಫಲಾನುಭವಿ!
ಕಾಂಗ್ರೆಸ್ ಸರ್ಕಾರ ಬಂದರೆ ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇಕಡಾ 95 ಜನತೆ ಇದರ ಲಾಭ ಪಡೆಯಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅವರು ಶೇಕಡಾ 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಕೂಡ ಒಬ್ಬ ಫಲಾನುಭವಿ ಎಂಬುದು ದೃಢ ಆಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ನಾನು ವಿದ್ಯುತ್ ಬಿಲ್ ಕಟ್ಟೋದಿಲ್ಲ ಎಂದು ಅವರು ತಮ್ಮ ವಾದ ಮಂಡಿಸಿದ್ದಾರೆ.
ಚಿತ್ರದುರ್ಗದಲ್ಲಿ ಕರೆಂಟ್ ಬಿಲ್ ಕಟ್ಟಲ್ಲ ಎಂದ ಜನರು!’
ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಹಾಗಾಗಿ ನಾವು ವಿದ್ಯುತ್ ಬಿಲ್ ಪಾವತಿ ಮಾಡಲ್ಲ ಎಂದು ಬೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರು ಅವಾಜ್ ಹಾಕಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮಸ್ಥರು ವಿದ್ಯುತ್ ಬಿಲ್ ಪಾವತಿಸಲ್ಲ ಎಂದಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ: Udupi Viral News: ಕರೆಂಟ್ ಬಿಲ್ ಕಟ್ಟೋದಿಲ್ಲ, ಮೀಟರ್ ಬೋರ್ಡ್ಗೆ ಚೀಟಿ ಅಂಟಿಸಿದ ಉಡುಪಿಯ ವ್ಯಕ್ತಿ!
ಕಾಂಗ್ರೆಸ್ ಸರ್ಕಾರ ಬಂದಿದೆ. ಅವರ ಬಿಲ್ ಕಟ್ಟುವಂತಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ನಾವು ಬಿಲ್ ಪಾವತಿಸಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ. ಕಾಂಗ್ರೆಸ್ಗೆ ಬಹುಮತ ಬಂದಿದ್ದು, ಆದೇಶ ಬರೋವರೆಗೂ ನೀವು ಬಿಲ್ ಪಾವತಿಸಬೇಕು ಎಂದು ಅಧಿಕಾರಿ ಹೇಳಿದ್ದಾರೆ. ಅದೆಲ್ಲ ನಮಗೆ ಗೊತ್ತಿಲ್ಲ. ಆದೇಶದ ಬಗ್ಗೆ ಕಾಂಗ್ರೆಸ್ನವರನ್ನ ಕೇಳಿಕೊಳ್ಳಿ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ