ರಾಜ್ಯದಲ್ಲಿ ಕೊರೊನಾ (Corona) ಆರ್ಭಟ ದಿನದಿಂದ ದಿನಕ್ಕೆ ಹೆಚ್ಛಾಗುತ್ತಿದೆ. ಒಂದೆಡೆ ಲಸಿಕೆ ಹಾಕುವ ಕಾರ್ಯ ಸಹ ನಡೆಯುತ್ತಿದೆ. ಇನ್ನೊಂದೆಡೆ ಲಸಿಕೆ (Vaccination) ಪಡೆಯದ 120 ಜನರಿಗೆ ಕೊರೊನಾ ಸೋಂಕು ತಗುಲಿರುವ ಘಟನೆ ನಡೆದಿದೆ. 120 ಸೋಂಕಿತರು ಬಳ್ಳಾರಿ (Bellary) ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ ಮಾಹಿತಿ ನೀಡಿದ್ದಾರೆ. ಸದ್ಯ 10 ಜನ ಸೋಂಕಿತರಿಗೆ ಬಳ್ಳಾರಿಯ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅದರಲ್ಲಿ 8 ಜನರು ಆಕ್ಸಿಜನ್ (Oxygen) ಮೇಲಿದ್ದು, ಉಳಿದ 2 ಜನರು ವೆಂಟಿಲೇಟರ್ನಲ್ಲಿದ್ದಾರೆ ಎಂದು ಡಾ. ಬಸಾರೆಡ್ಡಿ ಮಾಹಿತಿ ನೀಡಿದ್ಧಾರೆ. ಇನ್ನು ವ್ಯಾಕ್ಸಿನೇಷನ್ ಮಾಡಿಸಿಕೊಳ್ಳದ ಇಬ್ಬರನ್ನು ಕೊರೊನಾ ಸೋಂಕು (Coronavirus) ಬಲಿ ಪಡೆದಿದೆ.
ಇನ್ನು ಲಸಿಕೆ ಹಾಕಿಸಿಕೊಂಡವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ, ಆದರೆ ಹೆಚ್ಚಿನ ಪರಿಣಾಮ ಬೀರುತ್ತಿಲ್ಲ ಎನ್ನಲಾಗಿದೆ. ಲಸಿಕೆ ಪಡೆದವರಲ್ಲಿ ಯಾರೂ ಸಹ ಐಸಿಯೂ ಹೋಗುವ ಪರಿಸ್ಥಿತಿ ಬಂದಿಲ್ಲ, ಹಾಗಾಗಿ ಪ್ರತಿಯೊಬ್ಬರು ಜೀವದ ಜೊತೆ ಆಟವಾಡದೇ ಲಸಿಕೆ ಪಡೆಯಬೇಕು ಎಂದು ಡಾ. ಬಸಾರೆಡ್ಡಿ ಮನವಿ ಮಾಡಿದ್ದಾರೆ.
ಬಳ್ಳಾರಿಯಲ್ಲಿ ಒಂದೆಡೆ 120 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದರೆ, ಕೊಪ್ಪಳದಲ್ಲಿ ಸಹ ಕೊರೊನಾ ತಾಂಡವವಾಡುತ್ತಿದೆ. ಜಿಲ್ಲೆಯ 73 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದು.6 ಶಿಕ್ಷಕರು, ಶಾಲಾ ಅಡುಗೆ ಸಿಬ್ಬಂದಿಗೂ ಕೊರೊನಾ ಧೃಡವಾಗಿದೆ. ಜಿಲ್ಲೆಯಲ್ಲಿ ಕೊರೊನಾ ಹೆಚ್ಚುತ್ತಿರುವ ಕಾರಣ ಜನವರಿ 26ರವರೆಗೆ 9 ಶಾಲೆಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ.
ಮಂಡ್ಯದಲ್ಲೂ ಕೊರೊನಾ ಆರ್ಭಟ
ಇದನ್ನೂ ಓದಿ: ಅಪರೂಪದ ಅಳಿವಿನಂಚಿನಲ್ಲಿರುವ ಕಡಲಾಮೆಯ ಸಂತಾನೋತ್ಪತ್ತಿಗೆ ಜಾಗವಾದ ಕಾರವಾರ ಕಡಲತೀರ
ಇನ್ನು ಮಂಡ್ಯ ಜಿಲ್ಲೆಯಲ್ಲಿ ಸಹ ವಿದ್ಯಾರ್ಥಿಗಳನ್ನು ಕೊರೊನಾ ಕಾಡುತ್ತಿದ್ದುಕೆ.ಆರ್.ಪೇಟೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ 55 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಚಿಂತೆಗೆ ಕಾರಣವಾಗಿದೆ. ಇಲ್ಲಿನ ಪ್ರಾಧ್ಯಾಪಕರು, ಸಿಬ್ಬಂದಿ ಸೇರಿದಂತೆ 65 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕೆಲವರಲ್ಲಿ ಲಕ್ಷಣಗಳು ಕಾಣಿಸಿಕೊಂಡ ಕಾರಣ ಸುಮಾರು 700 ಜನರನ್ನು ಒಟ್ಟಿಗೆ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಲಾಗಿದ್ದು, ಸೋಂಕಿತ ವಿದ್ಯಾರ್ಥಿಗಳನ್ನು ಸಾರಂಗಿ ಗ್ರಾಮದ ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದ್ದು, ಕೆಲ ವಿದ್ಯಾರ್ಥಿಗಳಿಗೆ ಹೋಮ್ ಐಸೊಲೇಷನ್ ಆಗುವಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದ ಹಿನ್ನೆಲೆ ಕಳೆದ ಎರಡು ವಾರಗಳ ಹಿಂದೆ ಘೋಷಣೆ ಮಾಡಲಾಗಿದ್ದ ವಾರಾಂತ್ಯ ಕರ್ಫ್ಯೂ (Weekend Curfew) ಅನ್ನು ರದ್ದು ಮಾಡಲು ಸರ್ಕಾರ ಮುಂದಾಗಿದೆ.
ಕೋವಿಡ್ ನಿಯಮಾವಳಿ ಸಂಬಂಧ ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಸಭೆ ನಡೆಸಿದರು, ಈ ವೇಳೆ ತಜ್ಞರು ಮತ್ತು ಅಧಿಕಾರಿಗಳ ಮಾಹಿತಿ ಪಡೆದ ಅವರು, ರಾಜ್ಯದಲ್ಲಿ ಹೇರಿರುವ ವಾರಾಂತ್ಯ ಕರ್ಫ್ಯೂ ಹಿಂಡಪೆಯುವ ಕುರಿತು ತಿಳಿಸಿದ್ದಾರೆ. ಸಭೆ ಬಳಿಕ ಈ ಕುರಿತು ಪ್ರಕಟಿಸಿದ ಸಚಿವ ಆರ್ ಅಶೋಕ್ ವಿಕೇಂಡ್ ಕರ್ಫ್ಯೂ ರದ್ದು ಮಾಡಲಾಗಿದ್ದು, ರಾತ್ರಿ ಕರ್ಫ್ಯೂ ಅನ್ನು ವಿಸ್ತರಣೆ ಮಾಡಾಗಿದೆ. ಮುಂದಿನ 7 ದಿನಗಳ ಕಾಲ ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದರು.
ಚಾಮರಾಜನಗರ ಜಿಲ್ಲೆಯಲ್ಲಿ ಸಹ ಮೂವರು ಶಿಕ್ಷಕರು, 6 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಜ್ಜೀಪುರದಲ್ಲಿರುವ ಜೆಎಸ್ಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ಸೋಂಕು ದೃಢವಾಗಿದೆ.
ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ; ಆಸ್ಪತ್ರೆಗೆ ದಾಖಲು
ಶಾಲೆಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದ್ದು, ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಾಲೆಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. 80 ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು, ಅದರಲ್ಲಿ 6 ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ