ರಾಜ್ಯ ಆರೋಗ್ಯ ವ್ಯವಸ್ಥೆಗೆ ಆಮೂಲಾಗ್ರ ಕಾಯಕಲ್ಪ 1,500 ಕೋಟಿ ರೂ. ವೆಚ್ಚದಲ್ಲಿ ಕ್ರಿಯಾ ಯೋಜನೆಗೆ ಕಾರ್ಯಪಡೆ ಒಪ್ಪಿಗೆ

ಪ್ರಾಥಮಿಕ ಮಟ್ಟದಿಂದ ಜಿಲ್ಲಾ ಆಸ್ಪತ್ರೆವರೆಗೂ ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ದಲ್ಲಿ ಆಮೂಲಾಗ್ರ ಸುಧಾರಣೆ ತರಲಾಗುವುದು. ಪ್ರತೀ ತಾಲೂಕು ಆಸ್ಪತ್ರೆಯಲ್ಲೂ ಒಟ್ಟು 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು. ಇಷ್ಟೂ ಹಾಸಿಗೆಗಳ ಪೈಕಿ 25 ಐಸಿಯು, 25 ಎಚ್‌ಡಿಯು ಹಾಗೂ 50 ಆಕ್ಸಿಜನ್‌ ಹಾಸಿಗೆಗಳಿರುತ್ತವೆ.

ಡಿಸಿಎಂ ಅಶ್ವತ್ಥ್​ ನಾರಾಯಣ್ ಸಭೆ.

ಡಿಸಿಎಂ ಅಶ್ವತ್ಥ್​ ನಾರಾಯಣ್ ಸಭೆ.

  • Share this:
ಬೆಂಗಳೂರು: ಸಂಭವನೀಯ ಕೋವಿಡ್‌ ಮೂರನೇ ಅಲೆ ಸೇರಿ ಭವಿಷ್ಯದಲ್ಲಿ ಎದುರಾಗಬಹುದಾದ ಯಾವುದೇ ಆರೋಗ್ಯ ಬಿಕ್ಕಟ್ಟನ್ನು ಎದುರಿಸಲು ರಾಜ್ಯವನ್ನು ಸರ್ವಸಜ್ಜುಗೊಳಿಸಲು ತಕ್ಷಣವೇ ಮುಂದಾಗಿರುವ ರಾಜ್ಯ ಸರಕಾರವು 1,500 ಕೋಟಿ ರೂ. ವೆಚ್ಚದಲ್ಲಿ ಜಾಗತಿಕ ಆರೋಗ್ಯ ಮೂಲಸೌಲಭ್ಯ ಕಲ್ಪಿಸಲು ಮುಂದಾಗಿದೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಕೋವಿಡ್‌ ಕಾರ್ಯಪಡೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಮಾಧ್ಯಮಗೋಷ್ಠಿಯಲ್ಲಿ ಪ್ರಕಟಿಸಿದರಲ್ಲದೆ, 3  ತಿಂಗಳಲ್ಲಿ ಯೋಜನೆ ಸಂಪೂರ್ಣವಾಗಿ ಅನುಷ್ಠಾನವಾಗಲಿದೆ ಎಂದರು.

ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯಗಳ ಬಗ್ಗ ಡಿಸಿಎಂ ನೀಡಿದ ಮಾಹಿತಿಯ ಸಾರಾಂಶ ಹೀಗಿದೆ;

* 146 ತಾಲೂಕು ಹಾಗೂ 16 ಜಿಲ್ಲಾಸ್ಪತ್ರೆಗಳು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಸಮಾನವಾಗಿ ಇನ್ನು 3 ಆಸ್ಪತ್ರೆಗಳ ಸೌಲಭ್ಯಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿಪಡಿಸುವ ಕ್ರಿಯಾ ಯೋಜನೆ ಇದು. ಇಡೀ ವ್ಯವಸ್ಥೆಯನ್ನು ತಾಂತ್ರಿಕವಾಗಿ ಸಂಪೂರ್ಣ ಮೇಲ್ದರ್ಜೆಗೇರಿಸಲಾಗುವುದು.

* ಪ್ರಾಥಮಿಕ ಮಟ್ಟದಿಂದ ಜಿಲ್ಲಾ ಆಸ್ಪತ್ರೆವರೆಗೂ ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ದಲ್ಲಿ ಆಮೂಲಾಗ್ರ ಸುಧಾರಣೆ ತರಲಾಗುವುದು. ಪ್ರತೀ ತಾಲೂಕು ಆಸ್ಪತ್ರೆಯಲ್ಲೂ ಒಟ್ಟು 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು. ಇಷ್ಟೂ ಹಾಸಿಗೆಗಳ ಪೈಕಿ 25 ಐಸಿಯು, 25 ಎಚ್‌ಡಿಯು ಹಾಗೂ 50 ಆಕ್ಸಿಜನ್‌ ಹಾಸಿಗೆಗಳಿರುತ್ತವೆ.

*ಜತೆಯಲ್ಲಿಯೇ ವೆಂಟಿಲೇಟರ್‌, ಮಾನೀಟರ್‌ಗಳು & ಬೈಪ್ಯಾಪ್ ವ್ಯವಸ್ಥೆ ಇರುವ ಹಾಗೆ ಕ್ರಮ ವಹಿಸಲಾಗುವುದು. ರಿಮೋಟ್‌ ಐಸಿಯುಗಳ ಜತೆಗೆ ಎಲ್ಲ ರೀತಿಯ ಡಯಾಗ್ನಾಸ್ಟಿಕ್‌ ಸೌಲಭ್ಯವನ್ನೂ ಒದಗಿಸಲಾಗುವುದು. ಈ ಇಡೀ ವ್ಯವಸ್ಥೆಯನ್ನು ನಿರ್ವಹಿಸಲು ಬೇಕಾದ ಎಲ್ಲ ನುರಿತ ಸಿಬ್ಬಂದಿಯನ್ನು ಸಮರೋಪಾದಿಯಲ್ಲಿ ನೇಮಕ ಮಾಡಿಕೊಳ್ಳಲಾಗುವುದು.

* ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜಿಲ್ಲಾಸ್ಪತ್ರೆ ತನಕ ಇಷ್ಟೆಲ್ಲ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸಲು ಕೊನೆ ಪಕ್ಷ 4,000  ವೈದ್ಯರ ಅಗತ್ಯವಿದೆ. ಒಬ್ಬ ವೈದ್ಯರಿಗೆ ಮೂವರು ನರ್ಸ್‌ಗಳಂತೆ, ಒಬ್ಬ ವೈದ್ಯರಿಗೆ ಗ್ರೂಪ್‌ ʼಡಿʼ ಮೂವರು ಸಿಬ್ಬಂದಿ ಅಗತ್ಯ. ಮೂಲಸೌಲಭ್ಯ ಮತ್ತು ಸಿಬ್ಬಂದಿ ವೇತನ ಸಲುವಾಗಿ 1,500 ಕೋಟಿ ರೂ. ವೆಚ್ಚವಾಗಲಿದೆ. ಇದರಲ್ಲಿ ವಾರ್ಷಿಕ 600 ಕೋಟಿ ರೂ. ವೇತನ ಹೊರತುಪಡಿಸಿದರೆ ಮಿಕ್ಕ ಬಹುತೇಕ ವೆಚ್ಚ ಒಮ್ಮೆಯಷ್ಟೇ ಆಗುವಂಥದ್ದು.

ಉಳಿದಂತೆ ಕಟ್ಟಡ, ಆಕ್ಸಿಜನ್‌ ಜನರೇಟರ್‌, ವೆಂಟಿಲೇಟರ್‌, ಯಂತ್ರೋಪಕರಣ ಇತ್ಯಾದಿ ಸೇರಿ 800 ಕೋಟಿ ರೂ. ವೆಚ್ಚ ಆಗಲಿದೆ. ಈ ಕುರಿತ ಅಂದಾಜು ವೆಚ್ಚದ ವಿವರಗಳನ್ನು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಭೆಯಲ್ಲಿ ಮಂಡಿಸಿದ್ದು, ಪ್ರಸ್ತಾವನೆಗೆ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ರಾತ್ರೋ ರಾತ್ರಿ ನಡಿತು ಎರಡು ಜೋಡಿ ಬಾಲ್ಯ ವಿವಾಹ; ಈ ಅನಿಷ್ಟಕ್ಕೆ ಪೊಲೀಸರೇ ಪೌರೋಹಿತ್ಯ!

* ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೂ ಯಾರೂ ತಮ್ಮ ತಾಲೂಕು ಬಿಟ್ಟು ಆಚೆ ಬರಬಾರದು. ಜಿಲ್ಲಾ ಮಟ್ಟದಲ್ಲೇ 97% ಆರೋಗ್ಯ ಸೇವೆ ಸಿಗಬೇಕು. ಸರಕಾರಿ ಆಸ್ಪತ್ರೆ ಎಂದರೆ, ನಿರ್ವಹಣೆ & ಗುಣಮಟ್ಟದಲ್ಲಿ ಕೊರತೆ ಆಗಬಾರದು. ಇದು ಸರಕಾರದ ಉದ್ದೇಶ. ಇದಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಲಾಗಿದ್ದು, ಬಿಸಿಜಿ (ಬಾಸ್ಟನ್‌ ಕನ್ಸಲ್‌ಟಿಂಗ್‌ ಗ್ರೂಪ್)‌ ನಮಗೆ CSR ಮೂಲಕ ಉಚಿತವಾಗಿ ತಾಂತ್ರಿಕ ನೆರವು ನೀಡುತ್ತಿದೆ.

ಇದನ್ನೂ ಓದಿ: Arvind Kejriwal: ದೆಹಲಿಯಲ್ಲಿ ಮತದಾನ ಕೇಂದ್ರಗಳನ್ನು ಲಸಿಕಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಮುಂದಾದ ಕೇಜ್ರಿವಾಲ್ ಸರ್ಕಾರ

ಬೆಂಗಳೂರು ನಗರದಲ್ಲೂ ವಿಸ್ತರಣೆ:

ಬೆಂಗಳೂರಿನಲ್ಲಿ ಆರೋಗ್ಯ ಮೂಲಸೌಕರ್ಯ ವಿಸ್ತರಿಸಲು ಸ್ಥಳದ ಅಭಾವ ಇದ್ದು, ಹೊಸ ಜಾಗಗಳನ್ನು ಅಥವಾ ಲಭ್ಯ ಸ್ಥಳಗಳನ್ನು ಗುರುತಿಸಲು ಬಿಬಿಎಂಪಿ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಒಂದು ಸಮಿತಿ ರಚಿಸಲಾಗಿದೆ. ನಗರದ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಅಗಾಧವಾಗಿ ಹೆಚ್ಚಿಸಲಾಗುವುದು. ಆಯುಷ್ಮಾನ್‌ ಭಾರತ್‌, ಆರೋಗ್ಯ ಕರ್ನಾಟಕ ಯೋಜನೆಗಳಲ್ಲಿ ಒಳಗೊಳ್ಳದ ನಿತ್ಯದ ಕಾಯಿಲೆಗಳಿಗೂ ಪರಿಣಾಮಕಾರಿ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ 2ನೇ ಹಂತದ ಆಸ್ಪತ್ರೆಗಳನ್ನು ಪೂರ್ಣವಾಗಿ ಮೇಲ್ದರ್ಜೆಗೇರಿ ಸಲಾಗುವುದು. ಈ ಉದ್ದೇಶಕ್ಕೆ ಸ್ಥಳದ ಅಗತ್ಯವಿದೆ. ಒಂದೆರಡು ವಾರದಲ್ಲಿ ಈ ಸಮಿತಿ ವರದಿ ನೀಡಲಿದೆ.

*ಬೆಂಗಳೂರಿನಲ್ಲಿ ಪ್ರತಿ ವಿಧಾನಸಭೆ ಕ್ಷೇತ್ರಕ್ಕೊಂದು 100 ಹಾಸಿಗೆಗಳ ಉತ್ಕೃಷ್ಟ ಆಸ್ಪತ್ರೆ ಸ್ಥಾಪನೆ ಮಾಡಲಾಗುತ್ತಿದೆ. ಇಲ್ಲಿಯೂ 25 ಐಸಿಯು, 25 ಎಚ್‌ಡಿಯು ಹಾಗೂ 50 ಆಕ್ಸಿಜನ್‌ ಹಾಸಿಗೆಗಳಿರುತ್ತವೆ. ಜತೆಗೆ, 4 ವಿಧಾನಸಭೆ ಕ್ಷೇತ್ರಗಳಿಗೊಂದು ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಯನ್ನು ಸ್ಥಾಪನೆ ಮಾಡಲಾಗುವುದು.
Published by:MAshok Kumar
First published: