HOME » NEWS » Coronavirus-latest-news » 19 LAKH PEOPLE HAVE CORONAVIRUS INFECTED IN INDIA RH

ದೇಶದಲ್ಲಿ ಕೊರೋನಾ ರುದ್ರನರ್ತನ; 19 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 39 ಸಾವಿರದ ಗಡಿ‌ ದಾಟಿದ್ದು 39,795ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 12,82,215 ಜನ ಮಾತ್ರ. ದೇಶದಲ್ಲಿ ಇನ್ನೂ 5,86,244 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

news18-kannada
Updated:August 5, 2020, 12:05 PM IST
ದೇಶದಲ್ಲಿ ಕೊರೋನಾ ರುದ್ರನರ್ತನ; 19 ಲಕ್ಷ ದಾಟಿದ ಸೋಂಕಿತರ ಸಂಖ್ಯೆ
ಪ್ರಾತಿನಿಧಿಕ ಚಿತ್ರ.
  • Share this:
ನವದೆಹಲಿ: ನಿಯಂತ್ರಣಕ್ಕೆ ಬಾರದ ಕೊರೋನಾ ಸೋಂಕು ಹರಡುವಿಕೆ ಈಗ ಶರವೇಗ ಪಡೆದುಕೊಂಡಿದೆ. ಕೊರೋನಾ ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿ ತೀವ್ರಗೊಂಡಾಗ‌ ಅನ್ ಲಾಕ್ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 19 ಲಕ್ಷದ ಗಡಿ ದಾಟಿದೆ. ಅದೂ ಅಲ್ಲದೆ ಮೂರನೇ ಹಂತದ ಅನ್ಲಾಕ್‌ ಕೂಡ ಜಾರಿ ಆಗುತ್ತಿದ್ದಂತೆ ಪ್ರತಿದಿನವೂ ಅರ್ಧ ಲಕ್ಷಕ್ಕೂ ಹೆಚ್ಚು ಸೋಂಕು ಪೀಡಿತರು ಕಾಣಿಸಿಕೊಳ್ಳುವ ಟ್ರೆಂಡ್ ಆರಂಭವಾಗಿದ್ದು ಅದೇ ಮುಂದುವರೆದಿದೆ.

ಹೀಗೆ ಮುಂದುವರೆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 'ಆಗಸ್ಟ್ ‌ 10ರೊಳಗೆ ದೇಶದ ಕೊರೊನಾ ಪೀಡಿತರ ಸಂಖ್ಯೆ 20 ಲಕ್ಷ ದಾಟಲಿದೆ' ಎಂದು ಹೇಳಿದ್ದ ಭವಿಷ್ಯ ಇನ್ನೆರಡು ದಿನದಲ್ಲೇ ನಿಜವಾಗಲಿದೆ. ಭಾರತದಲ್ಲಿ ಜುಲೈ 1ರಂದು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಮಾತ್ರ ದಾಖಲಾಗಿದ್ದವು. ನಂತರ ನೋಡನೋಡುತ್ತಿದ್ದಂತೆ ಜುಲೈ 10ರಂದು 27 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿದ್ದವು. ಅದಾದ ಮೇಲೆ ಜುಲೈ 20ರಿಂದ 37 ಸಾವಿರಕ್ಕೂ ಪ್ರಕರಣಗಳು ಪತ್ತೆಯಾಗಿದ್ದವು. ಜುಲೈ 31ಕ್ಕೆ 57,117 ಪ್ರಕರಣಗಳು ಕಂಡುಬಂದಿದ್ದವು‌. ಬಳಿಕ ತುಸು ಕಡಿಮೆ ಆಗತೊಡಗಿ ಆಗಸ್ಟ್ 1ನೇ ತಾರೀಖು 54,736 ಪ್ರಕರಣಗಳು, ಆಗಸ್ಟ್ 2ರಂದು 52,972 ಪ್ರಕರಣಗಳು, ಆಗಸ್ಟ್ 3ರಂದು 52,050 ಪ್ರಕರಣಗಳು ಕಾಣಿಸಿಕೊಂಡಿದ್ದವು. ಆಗಸ್ಟ್ 4ರಂದು 52,509 ಪತ್ತೆಯಾಗುವ ಮೂಲಕ ದೇಶದ ಕೊರೋನಾ ಪೀಡಿತರ ಸಂಖ್ಯೆ 19,08,254ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಸೋಮವಾರ 857 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 39 ಸಾವಿರದ ಗಡಿ‌ ದಾಟಿದ್ದು 39,795ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 12,82,215 ಜನ ಮಾತ್ರ. ದೇಶದಲ್ಲಿ ಇನ್ನೂ 5,86,244 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನು ಓದಿ: Ayodhya Ram Mandir: ವಿಡಿಯೋ ಕಾನ್ಫರೆನ್ಸ್​ ಮೂಲಕ ರಾಮ ಮಂದಿರ ಅಡಿಗಲ್ಲು ಕಾರ್ಯಕ್ರಮ ವೀಕ್ಷಿಸಲಿದ್ದಾರೆ ಎಲ್​ಕೆ ಅಡ್ವಾಣಿ

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜುಲೈ 1ರಂದು 19,148, ಜುಲೈ 2ರಂದು 20,903, ಜುಲೈ 3 ರಂದು 22,771, ಜುಲೈ 4ರಂದು 24,850, ಜುಲೈ 5 ರಂದು 24,248, ಜುಲೈ 6ರಂದು 22,252, ಜುಲೈ 7ರಂದು 22,752, ಜುಲೈ 8ರಂದು 24,879, ಜುಲೈ 9ರಂದು 26,506, ಜುಲೈ 10ರಂದು 27,114, ಜುಲೈ 11ರಂದು 28,637, ಜುಲೈ 12ರಂದು‌ 28,701, ಜುಲೈ 13ರಂದು 28,498, ಜುಲೈ 14ರಂದು 29,429, ಜುಲೈ 15ರಂದು 32,695, ಜುಲೈ 16ರಂದು‌ 34,956, ಜುಲೈ 17ರಂದು 34,884, ಜುಲೈ 18ರಂದು 38,902, ಜುಲೈ 19ರಂದು 40,425, ಜುಲೈ 20ರಂದು 37,148, ಜುಲೈ 21ರಂದು 37,724, ಜುಲೈ 22ರಂದು 45,720, ಜುಲೈ 23ರಂದು 49,310, ಜುಲೈ 24ರಂದು 48,916,‌ ಜುಲೈ 25ರಂದು 48,661, ಜುಲೈ 26ರಂದು 49,931, ಜುಲೈ 27ರಂದು 47,704, ಜುಲೈ 28ರಂದು 48,512 ಹಾಗೂ ಜುಲೈ 29ರಂದು 52,123, ಜುಲೈ 30ರಂದು 55,079, ಜುಲೈ‌ 31ರಂದು 57,117, ಆಗಸ್ಟ್ 1ರಂದು 54,736, ಆಗಸ್ಟ್ 2ರಂದು 52,972, ಆಗಸ್ಟ್ 3ರಂದು 52,050 ಹಾಗೂ ಆಗಸ್ಟ್ 4ರಂದು 52,509 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: HR Ramesh
First published: August 5, 2020, 12:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories