Nirmala Sitharaman: 20 ಲಕ್ಷ ಕೋಟಿ ರೂ ಆರ್ಥಿಕ ಪ್ಯಾಕೇಜ್ ವಿವರಣೆ; ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೊಂದು ಸುದ್ದಿಗೋಷ್ಠಿ ಸಾಧ್ಯತೆ?

Nirmala Sitharaman Press Conference Today: ಇಂದು ಪತ್ರಿಕಾಗೋಷ್ಠಿಯಲ್ಲಿ ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ನೀಡಲಿರುವ ಹಣದ ಲಿಕ್ವಿಡಿಟಿ ಮಾಡುವ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ.

news18-kannada
Updated:May 14, 2020, 10:29 AM IST
Nirmala Sitharaman: 20 ಲಕ್ಷ ಕೋಟಿ ರೂ ಆರ್ಥಿಕ ಪ್ಯಾಕೇಜ್ ವಿವರಣೆ; ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೊಂದು ಸುದ್ದಿಗೋಷ್ಠಿ ಸಾಧ್ಯತೆ?
ಸಚಿವೆ ನಿರ್ಮಲಾ ಸೀತಾರಾಮನ್​.
  • Share this:
ನವ ದೆಹಲಿ (ಮೇ 14); ಲಾಕ್‌ಡೌನ್‌ನಿಂದಾಗಿ ಉಂಟಾಗಿರುವ ದೇಶದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು. ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ನಿನ್ನೆ ಪತ್ರಿಕಾಗೋಷ್ಠಿ ಕರೆದು ಯಾವ ಕ್ಷೇತ್ರಕ್ಕೆ ಎಷ್ಟು ಹಣ ಮೀಸಲಿಡಲಾಗಿದೆ ಎಂದು ವಿವರಣೆ ನೀಡಿದ್ದರು. ಆದರೆ, 20 ಲಕ್ಷ ಕೋಟಿ ಪ್ಯಾಕೇಜಿನ ಇನ್ನಷ್ಟು ವಿವರಣೆ ನೀಡುವ ಸಲುವಾಗಿ ಅವರು ಇಂದು ಮತ್ತೊಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

ನಿನ್ನೆ ಪತ್ರಿಕಾಗೋಷ್ಠಿ ನಡೆಸಿದ್ಧ ಸಚಿವೆ ನಿರ್ಮಲಾ ಸೀತಾರಾಮನ್‌ಮ "ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಜಾಮೀನು ರಹಿತ ಸಾಲ ನೀಡಲು ಹಣವನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದರು. ಅಲ್ಲದೆ, ಸಾಲ ಮರುಪಾವತಿಗೆ 4 ವರ್ಷಗಳವರೆಗೆ ಕಾಲಾವಕಾಶ ನೀಡಲಾಗಿತ್ತು. ಸಣ್ಣ ಕೈಗಾರಿಕೆಗಳು ಉದ್ಯೋಗಿಗಳಿಗೆ ಸಂಬಳ ನೀಡಲು ಹಣ ಇಲ್ಲದಿದ್ದರೆ ಕೇಂದ್ರ ಸರ್ಕಾರ ನೆರವು ನೀಡುತ್ತದೆ ಎಂದೂ ತಿಳಿಸಿದ್ದರು.

ಆದರೆ, ಇಂದು ಪತ್ರಿಕಾಗೋಷ್ಠಿಯಲ್ಲಿ ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ನೀಡಲಿರುವ ಹಣದ ಲಿಕ್ವಿಡಿಟಿ ಮಾಡುವ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ.  ಇದರ ಜೊತೆಗೆ ಕೃಷಿ ಮತ್ತು ಅಸಂಘಟಿತ ಕಾರ್ಮಿಕರ ಬಗ್ಗೆ, ಪ್ಯಾಕೇಜ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಏನೇನು ಕೊಡಲಾಗುತ್ತದೆ? ವಲಸೆ ಕಾರ್ಮಿಕರಿಗೆ ಯಾವ ರೀತಿಯಲ್ಲಿ ನೆರವು ನೀಡಲಾಗುತ್ತದೆ? ಅಸಂಘಟಿತ ಕಾರ್ಮಿಕರಿಗೆ ಯಾವೆಲ್ಲಾ ಸಹಾಯಗಳು ಇರುತ್ತವೆ? ಎಂಬ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ವಿವರಣೆ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ ; Nirmala Sitharaman Speech: ಸಣ್ಣ, ಅತಿಸಣ್ಣ, ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂ.ಹಂಚಿಕೆ​, ತೆರಿಗೆದಾರರಿಗೆ ಬಂಪರ್ ಗಿಫ್ಟ್
First published: May 14, 2020, 9:19 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading