‘ಗಾಳಿಯಿಂದಲೂ ಕೊರೊನಾ ಹರಡಲಿದೆ‘ - ಹೀಗೊಂದು ಭಯಾನಕ ಮಾಹಿತಿ ಹೊರಹಾಕಿದ 239 ವಿಜ್ಞಾನಿಗಳು
ವ್ಯಕ್ತಿಯೊಬ್ಬರು ಸೀನಿದ ನಂತರ ಗಾಳಿಯ ಮೂಲಕ ವೈರಸ್ ಕಣಗಳು ಬೇರೆಡೆಗೆ ಹರಡುತ್ತವೆ. ಗಾಳಿಯಲ್ಲಿರುವ ಕಣಗಳು ಉಸಿರಾಟದ ಮೂಲಕ ಮತ್ತೊಬ್ಬ ವ್ಯಕ್ತಿಯ ದೇಹವನ್ನು ಸೇರುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ನವದೆಹಲಿ:(ಜು.06): ಜಾಗತಿಕ ಪಿಡುಗಾಗಿ ಪರಿಣಮಿಸಿರುವ ಕೊರೋನಾ ಬಗ್ಗೆ ಈಗ ಮತ್ತೊಂದು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಕೊರೋನಾ ರೋಗದ ಸೋಂಕು ಗಾಳಿಯ ಮುಖಾಂತರವೂ ಹರಡಲಿದೆ ಎಂದು ವಿವಿಧ ದೇಶಗಳ ಹಲವು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹೌದು, ಇಷ್ಟು ದಿನ ಕೊರೋನಾ ವ್ಯಕ್ತಿಯಿಂದ ವ್ಯಕ್ತಿಗೆ ಮಾತ್ರ ಹರಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಈಗ ಗಾಳಿಯ ಮುಖಾಂತರವೂ ಹರಡಲಿದೆ ಎಂದು ತಿಳಿದು ಬರುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿ ಪರಿಣಮಿಸಿದೆ.
32 ದೇಶಗಳ 239 ವಿಜ್ಞಾನಿಗಳು ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದು ಕೊರೋನಾ ರೋಗದ ಸೋಂಕು ಗಾಳಿಯ ಮುಖಾಂತರವೂ ಹರಡಲಿದೆ. ಈ ಬಗ್ಗೆ ಗಂಭೀರವಾಗಿ ಗಮನಹರಿಸಿ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ.
ಸೈನ್ಸ್ ಜರ್ನಲ್ ಪತ್ರಿಕೆಯಲ್ಲಿ ಪ್ರಕಟಿಸಲು ಸಂಶೋಧನಾ ವರದಿ ಸಿದ್ದಪಡಿಸಿರುವ ವೈದ್ಯಕೀಯ ಕ್ಷೇತ್ರದ ತಜ್ಞರು ಸಂಶೋಧನೆಯ ಸಾರವನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಓಪನ್ ಲೆಟರ್ ನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ವ್ಯಕ್ತಿಯೊಬ್ಬರು ಸೀನಿದ ನಂತರ ಗಾಳಿಯ ಮೂಲಕ ವೈರಸ್ ಕಣಗಳು ಬೇರೆಡೆಗೆ ಹರಡುತ್ತವೆ. ಗಾಳಿಯಲ್ಲಿರುವ ಕಣಗಳು ಉಸಿರಾಟದ ಮೂಲಕ ಮತ್ತೊಬ್ಬ ವ್ಯಕ್ತಿಯ ದೇಹವನ್ನು ಸೇರುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ವಿಶೇಷವಾಗಿ ಕಳೆದ ಎರಡು ತಿಂಗಳುಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ವಾಯು ಮುಖಾಂತರ ಪ್ರಸರಣವಾಗುವ ಬಗ್ಗೆ ಸಾಧ್ಯವಾದಷ್ಟು ಪರಿಗಣಿಸಿದ್ದೇವೆ. ಆದರೆ, ಈವರೆಗೆ ನಮಗೆ ದೃಢವಾದ ಅಥವಾ ಸ್ಪಷ್ಟವಾದ ಪುರಾವೆಗಳು ಲಭಿಸಿಲ್ಲ ಎಂದು ಡಬ್ಲ್ಯುಎಚ್ಒ ಸೋಂಕಿನ ತಡೆಗಟ್ಟುವಿಕೆ ಮತ್ತು ನಿಯಂತ್ರಣದ ತಾಂತ್ರಿಕ ಪ್ರಮುಖ ಡಾ. ಬೆನೆಡೆಟ್ಟಾ ಅಲೆಗ್ರಾಂಜಿ ಅಭಿಪ್ರಾಯಪಟ್ಟಿದ್ದಾರೆ.
Published by:Ganesh Nachikethu
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ